1
ಯೋಹಾನ 10:10
ಕನ್ನಡ ಸಮಕಾಲಿಕ ಅನುವಾದ
ಕಳ್ಳನು ಕದಿಯಲು, ಕೊಯ್ಯಲು ಮತ್ತು ನಾಶಮಾಡಲು ಮಾತ್ರ ಬರುತ್ತಾನೆ. ನಾನಾದರೋ ಅವುಗಳಿಗೆ ಜೀವವು ಇರಬೇಕೆಂತಲೂ ಅದು ಸಮೃದ್ಧಿಯಾಗಿರಬೇಕೆಂತಲೂ ಬಂದೆನು.
Параўнаць
Даследуйце ಯೋಹಾನ 10:10
2
ಯೋಹಾನ 10:11
“ನಾನೇ ಒಳ್ಳೆಯ ಕುರುಬನು. ಒಳ್ಳೆಯ ಕುರುಬನು ಕುರಿಗಳಿಗೋಸ್ಕರ ತನ್ನ ಪ್ರಾಣವನ್ನು ಕೊಡುತ್ತಾನೆ.
Даследуйце ಯೋಹಾನ 10:11
3
ಯೋಹಾನ 10:27
ನನ್ನ ಕುರಿಗಳು ನನ್ನ ಸ್ವರಕ್ಕೆ ಕಿವಿಗೊಡುತ್ತವೆ. ನಾನು ಅವುಗಳನ್ನು ಬಲ್ಲೆನು. ಅವು ನನ್ನನ್ನು ಹಿಂಬಾಲಿಸುತ್ತವೆ.
Даследуйце ಯೋಹಾನ 10:27
4
ಯೋಹಾನ 10:28
ನಾನು ಅವುಗಳಿಗೆ ನಿತ್ಯಜೀವವನ್ನು ಕೊಡುತ್ತೇನೆ. ಅವು ಎಂದೆಂದಿಗೂ ನಾಶವಾಗುವುದಿಲ್ಲ. ಅವುಗಳನ್ನು ಯಾರೂ ನನ್ನ ಕೈಯಿಂದ ಕಸಿದುಕೊಳ್ಳಲಾರರು.
Даследуйце ಯೋಹಾನ 10:28
5
ಯೋಹಾನ 10:9
ನಾನೇ ಬಾಗಿಲು; ನನ್ನ ಮೂಲಕವಾಗಿ ಯಾರು ಪ್ರವೇಶಿಸುವರೋ ಅವರೇ ಸುರಕ್ಷಿತವಾಗಿರುವರು. ಇದಲ್ಲದೆ ಅವರು ಒಳಗೆ ಹೋಗುವರು, ಹೊರಗೆ ಬರುವರು ಮತ್ತು ಮೇವನ್ನು ಕಂಡುಕೊಳ್ಳುವರು.
Даследуйце ಯೋಹಾನ 10:9
6
ಯೋಹಾನ 10:14
“ನಾನೇ ಒಳ್ಳೆಯ ಕುರುಬನು. ನನ್ನ ಕುರಿಗಳನ್ನು ನಾನು ತಿಳಿದಿದ್ದೇನೆ. ನನ್ನ ಕುರಿಗಳು ನನ್ನನ್ನು ತಿಳಿದಿವೆ.
Даследуйце ಯೋಹಾನ 10:14
7
ಯೋಹಾನ 10:29-30
ಅವುಗಳನ್ನು ನನಗೆ ಕೊಟ್ಟ ನನ್ನ ತಂದೆ ಎಲ್ಲರಿಗಿಂತಲೂ ಮಹೋನ್ನತರು. ನನ್ನ ತಂದೆಯ ಕೈಯಿಂದ ಅವುಗಳನ್ನು ಯಾರೂ ಕಸಿದುಕೊಳ್ಳಲಾರರು. ನಾನು ಮತ್ತು ನನ್ನ ತಂದೆ ಒಂದೇ ಆಗಿದ್ದೇವೆ,” ಎಂದು ಉತ್ತರಕೊಟ್ಟರು.
Даследуйце ಯೋಹಾನ 10:29-30
8
ಯೋಹಾನ 10:15
ತಂದೆಯು ನನ್ನನ್ನು ತಿಳಿದಿರುವಂತೆ ನಾನು ತಂದೆಯನ್ನು ತಿಳಿದಿರುತ್ತೇನೆ; ನಾನು ಕುರಿಗಳಿಗೋಸ್ಕರ ನನ್ನ ಪ್ರಾಣವನ್ನೇ ಕೊಡುತ್ತೇನೆ.
Даследуйце ಯೋಹಾನ 10:15
9
ಯೋಹಾನ 10:18
ಯಾರೂ ನನ್ನ ಪ್ರಾಣವನ್ನು ನನ್ನಿಂದ ತೆಗೆಯುವುದಿಲ್ಲ. ಆದರೆ ನನ್ನಷ್ಟಕ್ಕೆ ನಾನೇ ಅದನ್ನು ಕೊಡುವೆನು. ನಾನು ಅದನ್ನು ಕೊಡುವುದಕ್ಕೆ ನನಗೆ ಅಧಿಕಾರವಿದೆ. ಅದನ್ನು ಪುನಃ ತೆಗೆದುಕೊಳ್ಳುವುದಕ್ಕೂ ನನಗೆ ಅಧಿಕಾರವಿದೆ. ಈ ಆಜ್ಞೆಯನ್ನು ನಾನು ನನ್ನ ತಂದೆಯಿಂದ ಪಡೆದಿದ್ದೇನೆ,” ಎಂದರು.
Даследуйце ಯೋಹಾನ 10:18
10
ಯೋಹಾನ 10:7
ಯೇಸು ತಿರುಗಿ ಅವರಿಗೆ, “ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಕುರಿಗಳಿಗೆ ನಾನೇ ಬಾಗಿಲಾಗಿದ್ದೇನೆ.
Даследуйце ಯೋಹಾನ 10:7
11
ಯೋಹಾನ 10:12
ಕೂಲಿಯಾಳು ಕುರಿಗಳ ಕುರುಬನಲ್ಲ; ಅವನು ತೋಳ ಬರುವುದನ್ನು ಕಂಡು ಕುರಿಗಳನ್ನು ಬಿಟ್ಟು ಓಡಿಹೋಗುತ್ತಾನೆ. ಆಗ ತೋಳವು ಕುರಿಗಳನ್ನು ಹಿಡಿದುಕೊಂಡು ಹಿಂಡನ್ನು ಚದರಿಸುತ್ತದೆ.
Даследуйце ಯೋಹಾನ 10:12
12
ಯೋಹಾನ 10:1
“ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಬಾಗಿಲಿನಿಂದ ಕುರಿಹಟ್ಟಿಯೊಳಗೆ ಬಾರದೆ ಬೇರೆ ಎಲ್ಲಿಂದಾದರೂ ಒಳಗೆ ಬರುವವನು ಕಳ್ಳನೂ ದರೋಡೆಕೋರನೂ ಆಗಿದ್ದಾನೆ.
Даследуйце ಯೋಹಾನ 10:1
Стужка
Біблія
Пляны чытаньня
Відэа