1
ಯೋಹಾನ 6:35
ಕನ್ನಡ ಸಮಕಾಲಿಕ ಅನುವಾದ
ಯೇಸು ಅವರಿಗೆ, “ನಾನೇ ಜೀವದ ರೊಟ್ಟಿ. ನನ್ನ ಬಳಿಗೆ ಬರುವವರಿಗೆ ಎಂದಿಗೂ ಹಸಿವೆಯಾಗುವುದಿಲ್ಲ; ನನ್ನನ್ನು ನಂಬುವವರಿಗೆ ಎಂದಿಗೂ ದಾಹವಾಗುವುದಿಲ್ಲ.
Параўнаць
Даследуйце ಯೋಹಾನ 6:35
2
ಯೋಹಾನ 6:63
ಬದುಕಿಸುವುದು ದೇವರ ಆತ್ಮವೇ, ನರಮಾಂಸವಾದರೋ ಯಾವುದಕ್ಕೂ ಪ್ರಯೋಜನವಾಗುವುದಿಲ್ಲ. ನಾನು ನಿಮಗೆ ನುಡಿದ ಮಾತುಗಳೇ ದೇವರಾತ್ಮವೂ ಜೀವವೂ ಆಗಿರುತ್ತವೆ.
Даследуйце ಯೋಹಾನ 6:63
3
ಯೋಹಾನ 6:27
ನಾಶವಾಗುವ ಆಹಾರಕ್ಕಾಗಿ ದುಡಿಯಬೇಡಿರಿ, ನೀವು ನಿತ್ಯಜೀವಕ್ಕೆ ಉಳಿಯುವ ಆಹಾರಕ್ಕಾಗಿಯೇ ದುಡಿಯಿರಿ. ಅದನ್ನು ಮನುಷ್ಯಪುತ್ರನಾದ ನಾನು ನಿಮಗೆ ಕೊಡುವೆನು. ಇದಕ್ಕಾಗಿ ತಂದೆ ದೇವರು ಮೆಚ್ಚುಗೆಯ ಮುದ್ರೆಯನ್ನು ನನ್ನ ಮೇಲೆ ಹಾಕಿದ್ದಾರೆ,” ಎಂದರು.
Даследуйце ಯೋಹಾನ 6:27
4
ಯೋಹಾನ 6:40
ನನ್ನ ತಂದೆಯ ಚಿತ್ತವೇನೆಂದರೆ ನನ್ನನ್ನು ನೋಡಿ ನನ್ನಲ್ಲಿ ವಿಶ್ವಾಸವಿಡುವ ಪ್ರತಿಯೊಬ್ಬರೂ ನಿತ್ಯಜೀವವನ್ನು ಪಡೆಯುವುದೇ; ನಾನು ಅವರನ್ನು ಕಡೆಯ ದಿನದಲ್ಲಿ ಎಬ್ಬಿಸುವೆನು,” ಎಂದು ಹೇಳಿದರು.
Даследуйце ಯೋಹಾನ 6:40
5
ಯೋಹಾನ 6:29
ಯೇಸು ಅವರಿಗೆ, “ದೇವರು ಕಳುಹಿಸಿದ ನನ್ನನ್ನು ನೀವು ನಂಬುವುದೇ ದೇವರು ಮೆಚ್ಚುವ ಕಾರ್ಯ,” ಎಂದರು.
Даследуйце ಯೋಹಾನ 6:29
6
ಯೋಹಾನ 6:37
ತಂದೆಯು ನನಗೆಂದು ಕೊಟ್ಟಿರುವ ಪ್ರತಿಯೊಬ್ಬರೂ ನನ್ನ ಬಳಿಗೆ ಬರುವರು. ನನ್ನ ಬಳಿಗೆ ಬರುವವರನ್ನು ನಾನು ಎಂದಿಗೂ ತಳ್ಳಿಬಿಡುವುದೇ ಇಲ್ಲ.
Даследуйце ಯೋಹಾನ 6:37
7
ಯೋಹಾನ 6:68
ಸೀಮೋನ್ ಪೇತ್ರನು ಯೇಸುವಿಗೆ, “ಸ್ವಾಮೀ, ನಾವು ಯಾರ ಬಳಿಗೆ ಹೋಗೋಣ? ನಿಮ್ಮಲ್ಲಿಯೇ ನಿತ್ಯಜೀವದ ವಾಕ್ಯಗಳಿವೆ.
Даследуйце ಯೋಹಾನ 6:68
8
ಯೋಹಾನ 6:51
ನಾನೇ ಪರಲೋಕದಿಂದ ಬಂದ ಜೀವದ ರೊಟ್ಟಿ. ಈ ರೊಟ್ಟಿಯನ್ನು ಯಾರು ತಿನ್ನುವರೋ ಅವರು ಸದಾಕಾಲವೂ ಬದುಕುವರು. ಲೋಕದ ಜೀವಕ್ಕಾಗಿ ನಾನು ಕೊಡುವ ರೊಟ್ಟಿಯು ನನ್ನ ಮಾಂಸವೇ,” ಎಂದರು.
Даследуйце ಯೋಹಾನ 6:51
9
ಯೋಹಾನ 6:44
ನನ್ನನ್ನು ಕಳುಹಿಸಿದ ತಂದೆ ಸೆಳೆಯದ ಹೊರತು, ಯಾರೂ ನನ್ನ ಬಳಿಗೆ ಬರಲಾರರು. ನಾನು ಅವರನ್ನು ಕಡೆಯ ದಿನದಲ್ಲಿ ಎಬ್ಬಿಸುವೆನು.
Даследуйце ಯೋಹಾನ 6:44
10
ಯೋಹಾನ 6:33
ಪರಲೋಕದಿಂದ ಇಳಿದುಬಂದು ಲೋಕಕ್ಕೆ ಜೀವವನ್ನು ಕೊಡುವ ದೇವರ ರೊಟ್ಟಿಯು ನಾನೇ,” ಎಂದರು.
Даследуйце ಯೋಹಾನ 6:33
11
ಯೋಹಾನ 6:48
ನಾನೇ ಜೀವದ ರೊಟ್ಟಿ.
Даследуйце ಯೋಹಾನ 6:48
12
ಯೋಹಾನ 6:11-12
ಆಮೇಲೆ ಯೇಸು ರೊಟ್ಟಿಗಳನ್ನು ತೆಗೆದುಕೊಂಡು ದೇವರಿಗೆ ಕೃತಜ್ಞತೆಯನ್ನು ಸಲ್ಲಿಸಿ, ಕುಳಿತಿದ್ದವರಿಗೆ ಬೇಕಾದಷ್ಟು ಹಂಚಿದರು. ಅದೇ ರೀತಿಯಲ್ಲಿ ಮೀನುಗಳನ್ನು ಅವರಿಗೆ ಹಂಚಿದರು. ಅವರೆಲ್ಲರೂ ತಿಂದು ತೃಪ್ತಿಯಾದ ಮೇಲೆ ಯೇಸು ತಮ್ಮ ಶಿಷ್ಯರಿಗೆ, “ಏನೂ ನಷ್ಟವಾಗದಂತೆ ಉಳಿದ ತುಂಡುಗಳನ್ನು ಕೂಡಿಸಿರಿ,” ಎಂದರು.
Даследуйце ಯೋಹಾನ 6:11-12
13
ಯೋಹಾನ 6:19-20
ಅವರು ದೋಣಿಯನ್ನು ನಡೆಸುತ್ತಾ ಸುಮಾರು ಐದಾರು ಕಿಲೋಮೀಟರಿನಷ್ಟು ದೂರ ಹೋದ ಮೇಲೆ ಯೇಸು ಸರೋವರದ ಮೇಲೆ ನಡೆದು ದೋಣಿಯ ಕಡೆಗೆ ಸಮೀಪಿಸುತ್ತಿರುವುದನ್ನು ಅವರು ಕಂಡು, ಭಯಪಟ್ಟರು. ಆದರೆ ಯೇಸು ಅವರಿಗೆ, “ನಾನೇ, ಭಯಪಡಬೇಡಿರಿ,” ಎಂದರು.
Даследуйце ಯೋಹಾನ 6:19-20
Стужка
Біблія
Планы чытання
Відэа