1
ಅಪೊಸ್ತಲರ ಕೃತ್ಯಗಳು 2:38
ಕನ್ನಡ ಸತ್ಯವೇದವು J.V. (BSI)
ಪೇತ್ರನು ಅವರಿಗೆ - ನಿಮ್ಮ ಪಾಪಗಳು ಪರಿಹಾರವಾಗುವದಕ್ಕಾಗಿ ನಿಮ್ಮಲ್ಲಿ ಪ್ರತಿಯೊಬ್ಬರು ದೇವರ ಕಡೆಗೆ ತಿರುಗಿಕೊಂಡು ಯೇಸು ಕ್ರಿಸ್ತನ ಹೆಸರಿನ ಮೇಲೆ ದೀಕ್ಷಾಸ್ನಾನಮಾಡಿಸಿಕೊಳ್ಳಿರಿ, ಆಗ ನೀವು ಪವಿತ್ರಾತ್ಮದಾನವನ್ನು ಹೊಂದುವಿರಿ
Compare
Explore ಅಪೊಸ್ತಲರ ಕೃತ್ಯಗಳು 2:38
2
ಅಪೊಸ್ತಲರ ಕೃತ್ಯಗಳು 2:42
ಇವರು ಅಪೊಸ್ತಲರ ಬೋಧನೆಯನ್ನು ಕೇಳುವದರಲ್ಲಿಯೂ ಸಹೋದರರ ಅನ್ಯೋನ್ಯತೆಯಲ್ಲಿಯೂ ರೊಟ್ಟಿ ಮುರಿಯುವದರಲ್ಲಿಯೂ ಪ್ರಾರ್ಥನೆಗಳಲ್ಲಿಯೂ ನಿರತರಾಗಿದ್ದರು.
Explore ಅಪೊಸ್ತಲರ ಕೃತ್ಯಗಳು 2:42
3
ಅಪೊಸ್ತಲರ ಕೃತ್ಯಗಳು 2:4
ಆಗ ಅವರೆಲ್ಲರು ಪವಿತ್ರಾತ್ಮಭರಿತರಾಗಿ ಆ ಆತ್ಮ ತಮತಮಗೆ ನುಡಿಯುವ ಶಕ್ತಿಯನ್ನು ಕೊಡುವ ಪ್ರಕಾರ ಬೇರೆಬೇರೆ ಭಾಷೆಗಳಿಂದ ಮಾತಾಡುವದಕ್ಕೆ ಪ್ರಾರಂಭಿಸಿದರು.
Explore ಅಪೊಸ್ತಲರ ಕೃತ್ಯಗಳು 2:4
4
ಅಪೊಸ್ತಲರ ಕೃತ್ಯಗಳು 2:2-4
ಆಗ ಬಿರುಗಾಳಿ ಬೀಸುತ್ತದೋ ಎಂಬಂತೆ ಫಕ್ಕನೆ ಆಕಾಶದೊಳಗಿಂದ ಒಂದು ಶಬ್ದವುಂಟಾಗಿ ಅವರು ಕೂತಿದ್ದ ಮನೆಯನ್ನೆಲ್ಲಾ ತುಂಬಿಕೊಂಡಿತು. ಅದಲ್ಲದೆ ಉರಿಯಂತಿದ್ದ ನಾಲಿಗೆಗಳು ವಿಂಗಡಿಸಿಕೊಳ್ಳುವ ಹಾಗೆ ಅವರಿಗೆ ಕಾಣಿಸಿ ಅವರಲ್ಲಿ ಒಬ್ಬೊಬ್ಬರ ಮೇಲೆ ಒಂದೊಂದಾಗಿ ಕೂತುಕೊಂಡವು. ಆಗ ಅವರೆಲ್ಲರು ಪವಿತ್ರಾತ್ಮಭರಿತರಾಗಿ ಆ ಆತ್ಮ ತಮತಮಗೆ ನುಡಿಯುವ ಶಕ್ತಿಯನ್ನು ಕೊಡುವ ಪ್ರಕಾರ ಬೇರೆಬೇರೆ ಭಾಷೆಗಳಿಂದ ಮಾತಾಡುವದಕ್ಕೆ ಪ್ರಾರಂಭಿಸಿದರು.
Explore ಅಪೊಸ್ತಲರ ಕೃತ್ಯಗಳು 2:2-4
5
ಅಪೊಸ್ತಲರ ಕೃತ್ಯಗಳು 2:46-47
ಅವರು ದಿನಾಲು ಏಕಮನಸ್ಸಿನಿಂದ ದೇವಾಲಯದಲ್ಲಿ ಕೂಡುತ್ತಾ ಮನೆಮನೆಗಳಲ್ಲಿ ರೊಟ್ಟಿಮುರಿದು ಉಲ್ಲಾಸದಿಂದಲೂ ಸರಲ ಹೃದಯದಿಂದಲೂ ಊಟಮಾಡುತ್ತಾ ಇದ್ದರು; ದೇವರನ್ನು ಕೊಂಡಾಡುವವರಾಗಿಯೂ ಜನರೆಲ್ಲರ ದಯವನ್ನು ಹೊಂದುವವರಾಗಿಯೂ ಇದ್ದರು. ಕರ್ತನು ರಕ್ಷಣೆಯ ಮಾರ್ಗದಲ್ಲಿರುವವರನ್ನು ದಿನಾಲು ಅವರ ಮಂಡಲಿಗೆ ಸೇರಿಸುತ್ತಿದ್ದನು.
Explore ಅಪೊಸ್ತಲರ ಕೃತ್ಯಗಳು 2:46-47
6
ಅಪೊಸ್ತಲರ ಕೃತ್ಯಗಳು 2:17
ಕಡೇ ದಿವಸಗಳಲ್ಲಿ ನಾನು ಎಲ್ಲಾ ಮನುಷ್ಯರ ಮೇಲೆ ನನ್ನ ಆತ್ಮವನ್ನು ಸುರಿಸುವೆನು; ನಿಮ್ಮಲ್ಲಿರುವ ಗಂಡಸರೂ ಹೆಂಗಸರೂ ಪ್ರವಾದಿಸುವರು; ನಿಮ್ಮ ಯೌವನಸ್ಥರಿಗೆ ದಿವ್ಯದರ್ಶನಗಳಾಗುವವು; ನಿಮ್ಮ ಹಿರಿಯರಿಗೆ ಕನಸುಗಳು ಬೀಳುವವು
Explore ಅಪೊಸ್ತಲರ ಕೃತ್ಯಗಳು 2:17
7
ಅಪೊಸ್ತಲರ ಕೃತ್ಯಗಳು 2:44-45
ನಂಬಿದವರೆಲ್ಲರು ಒಗ್ಗಟ್ಟಾಗಿದ್ದು ತಮ್ಮದೆಲ್ಲವನ್ನೂ ಹುದುವಾಗಿ ಅನುಭೋಗಿಸುತ್ತಾ ತಮ್ಮ ತಮ್ಮ ಚರಸ್ಥಿರಸೊತ್ತುಗಳನ್ನು ಮಾರಿ ಬಂದ ಹಣವನ್ನು ಎಲ್ಲರಿಗೂ ಅವರವರ ಅಗತ್ಯವಿದ್ದ ಹಾಗೆ ಹಂಚಿಕೊಡುತ್ತಾ ಇದ್ದರು.
Explore ಅಪೊಸ್ತಲರ ಕೃತ್ಯಗಳು 2:44-45
8
ಅಪೊಸ್ತಲರ ಕೃತ್ಯಗಳು 2:21
ಆದರೂ ಕರ್ತನ ನಾಮವನ್ನು ಹೇಳಿಕೊಳ್ಳುವವರೆಲ್ಲರಿಗೆ ರಕ್ಷಣೆಯಾಗುವದೆಂದು ದೇವರು ಹೇಳುತ್ತಾನೆ ಎಂಬದೇ.
Explore ಅಪೊಸ್ತಲರ ಕೃತ್ಯಗಳು 2:21
9
ಅಪೊಸ್ತಲರ ಕೃತ್ಯಗಳು 2:19-20
ಕರ್ತನ ಆಗಮನದ ಗಂಭೀರವಾದ ಮಹಾದಿನವು ಬರುವದಕ್ಕೆ ಮುಂಚೆ ಮೇಲೆ ಆಕಾಶದಲ್ಲಿ ಅದ್ಭುತಕಾರ್ಯಗಳನ್ನೂ ಕೆಳಗೆ ಭೂವಿುಯಲ್ಲಿ ಸೂಚಕಕಾರ್ಯಗಳನ್ನೂ ಉಂಟುಮಾಡುವೆನು. ರಕ್ತ, ಬೆಂಕಿ, ಹಬೆಯಂತೆ ಏರುವ ಹೊಗೆ, ಇವು ಉಂಟಾಗುವವು. ಸೂರ್ಯನು ಕತ್ತಲಾಗುವನು, ಚಂದ್ರನು ರಕ್ತವಾಗುವನು
Explore ಅಪೊಸ್ತಲರ ಕೃತ್ಯಗಳು 2:19-20
Home
Bible
Plans
Videos