1
ಅಪೊಸ್ತಲರ ಕೃತ್ಯಗಳು 4:12
ಕನ್ನಡ ಸತ್ಯವೇದವು J.V. (BSI)
ಬರಬೇಕಾದ ರಕ್ಷಣೆಯು ಇನ್ನಾರಲ್ಲಿಯೂ ಸಿಕ್ಕುವದಿಲ್ಲ; ಆ ಹೆಸರಿನಿಂದಲೇ ಹೊರತು ಆಕಾಶದ ಕೆಳಗೆ ಮನುಷ್ಯರೊಳಗೆ ಕೊಡಲ್ಪಟ್ಟಿರುವ ಬೇರೆ ಯಾವ ಹೆಸರಿನಿಂದಲೂ ನಮಗೆ ರಕ್ಷಣೆಯಾಗುವದಿಲ್ಲ ಎಂದು ಹೇಳಿದನು.
Compare
Explore ಅಪೊಸ್ತಲರ ಕೃತ್ಯಗಳು 4:12
2
ಅಪೊಸ್ತಲರ ಕೃತ್ಯಗಳು 4:31
ಹೀಗೆ ಪ್ರಾರ್ಥನೆ ಮಾಡಿದ ಮೇಲೆ ಅವರು ಕೂಡಿದ್ದ ಸ್ಥಳವು ನಡುಗಿತು, ಅವರೆಲ್ಲರು ಪವಿತ್ರಾತ್ಮಭರಿತರಾಗಿ ದೇವರ ವಾಕ್ಯವನ್ನು ಧೈರ್ಯದಿಂದ ಹೇಳುವವರಾದರು.
Explore ಅಪೊಸ್ತಲರ ಕೃತ್ಯಗಳು 4:31
3
ಅಪೊಸ್ತಲರ ಕೃತ್ಯಗಳು 4:29-30
ಕರ್ತನೇ, ಈಗ ನೀನು ಅವರ ಬೆದರಿಸುವಿಕೆಗಳನ್ನು ನೋಡಿ ನಿನ್ನ ಪವಿತ್ರ ಸೇವಕನಾದ ಯೇಸುವಿನ ಹೆಸರಿನ ಮೂಲಕವಾಗಿ ರೋಗ ಪರಿಹಾರವೂ ಸೂಚಕಕಾರ್ಯಗಳೂ ಅದ್ಭುತಕಾರ್ಯಗಳೂ ಉಂಟಾಗುವಂತೆ ನಿನ್ನ ಕೈ ಚಾಚುತ್ತಿರುವಲ್ಲಿ ನಿನ್ನ ದಾಸರು ನಿನ್ನ ವಾಕ್ಯವನ್ನು ಧೈರ್ಯದಿಂದ ಹೇಳುವ ಹಾಗೆ ಅನುಗ್ರಹಿಸು ಅಂದರು.
Explore ಅಪೊಸ್ತಲರ ಕೃತ್ಯಗಳು 4:29-30
4
ಅಪೊಸ್ತಲರ ಕೃತ್ಯಗಳು 4:11
ಮನೆ ಕಟ್ಟುವವರಾದ ನೀವು ಹೀನೈಸಿದ ಕಲ್ಲು ಆತನು; ಆತನೇ ಮುಖ್ಯವಾದ ಮೂಲೆಗಲ್ಲಾದನು.
Explore ಅಪೊಸ್ತಲರ ಕೃತ್ಯಗಳು 4:11
5
ಅಪೊಸ್ತಲರ ಕೃತ್ಯಗಳು 4:13
ಪೇತ್ರ ಯೋಹಾನರು ಧೈರ್ಯದಿಂದ ಮಾತಾಡುವದನ್ನು ಆ ಸಭಿಕರು ನೋಡಿ ಅವರು ಶಾಸ್ತ್ರಾಭ್ಯಾಸ ಮಾಡದ ಸಾಧಾರಣರೆಂದು ತಿಳಿದು ಆಶ್ಚರ್ಯಪಟ್ಟರು.
Explore ಅಪೊಸ್ತಲರ ಕೃತ್ಯಗಳು 4:13
6
ಅಪೊಸ್ತಲರ ಕೃತ್ಯಗಳು 4:32
ನಂಬಿದ್ದ ಮಂಡಲಿಯವರ ಹೃದಯವೂ ಪ್ರಾಣವೂ ಒಂದೇ ಆಗಿತ್ತು. ಇದಲ್ಲದೆ ಒಬ್ಬನಾದರೂ ತನಗಿದ್ದ ಆಸ್ತಿಯಲ್ಲಿ ಯಾವದೊಂದನ್ನೂ ಸ್ವಂತವಾದದ್ದೆಂದು ಹೇಳಲಿಲ್ಲ. ಎಲ್ಲವೂ ಅವರಿಗೆ ಹುದುವಾಗಿ ಇತ್ತು.
Explore ಅಪೊಸ್ತಲರ ಕೃತ್ಯಗಳು 4:32
Home
Bible
Plans
Videos