ಆ ಹುಡುಗನ ಮೊರೆಯು ದೇವರಿಗೆ ಕೇಳಿಸಿತು; ದೇವದೂತನು ಆಕಾಶದಿಂದ ಹಾಗರಳನ್ನು ಕರೆದು - ಹಾಗರಳೇ, ನಿನಗೇನಾಯಿತು? ಅಂಜಬೇಡ; ಆ ಹುಡುಗನು ಬಿದ್ದಿರುವ ಸ್ಥಳದಿಂದಲೇ ಅವನ ಶಬ್ದವು ದೇವರಿಗೆ ಕೇಳಿಸಿತು; ನೀನೆದ್ದು ಅವನನ್ನು ಎತ್ತಿಕೊಂಡು ಕೈಬಿಡದೆ ಇರು; ಅವನಿಂದ ದೊಡ್ಡ ಜನಾಂಗವಾಗುವಂತೆ ಮಾಡುವೆನು ಎಂದು ಹೇಳಿದನು.