ಅವರು ಊಟಮಾಡಿದ ಮೇಲೆ ಯೇಸು ಸೀಮೋನ ಪೇತ್ರನನ್ನು - ಯೋಹಾನನ ಮಗನಾದ ಸೀಮೋನನೇ, ನೀನು ಇವರಿಗಿಂತ ಹೆಚ್ಚಾಗಿ ನನ್ನ ಮೇಲೆ ಪ್ರೀತಿ ಇಟ್ಟಿದ್ದೀಯೋ ಎಂದು ಕೇಳಲು ಅವನು - ಹೌದು, ಸ್ವಾಮೀ, ನಿನ್ನ ಮೇಲೆ ಮಮತೆ ಇಟ್ಟಿದ್ದೇನೆಂಬದನ್ನು ನೀನೇ ಬಲ್ಲೆ ಅಂದನು. ಆತನು ಅವನಿಗೆ - ನನ್ನ ಕುರಿಮರಿಗಳನ್ನು ಮೇಯಿಸು ಎಂದು ಹೇಳಿದನು. ಆತನು ತಿರಿಗಿ ಎರಡನೆಯ ಸಾರಿ ಅವನನ್ನು - ಯೋಹಾನನ ಮಗನಾದ ಸೀಮೋನನೇ, ನನ್ನ ಮೇಲೆ ಪ್ರೀತಿ ಇಟ್ಟಿದ್ದೀಯೋ ಎಂದು ಕೇಳಲು ಅವನು - ಹೌದು, ಸ್ವಾಮೀ, ನಿನ್ನ ಮೇಲೆ ಮಮತೆ ಇಟ್ಟಿದ್ದೇನೆಂಬದನ್ನು ನೀನೇ ಬಲ್ಲೆ ಅಂದನು. ಆತನು ಅವನಿಗೆ - ನನ್ನ ಕುರಿಗಳನ್ನು ಕಾಯಿ ಎಂದು ಹೇಳಿದನು. ಆತನು ಮೂರನೆಯ ಸಾರಿ - ಯೋಹಾನನ ಮಗನಾದ ಸೀಮೋನನೇ, ನನ್ನ ಮೇಲೆ ಮಮತೆ ಇಟ್ಟಿದ್ದೀಯೋ ಎಂದು ಕೇಳಿದನು. ಮೂರನೆಯ ಸಾರಿ ಆತನು - ನನ್ನ ಮೇಲೆ ಮಮತೆ ಇಟ್ಟಿದ್ದೀಯೋ ಎಂದು ತನ್ನನ್ನು ಕೇಳಿದ್ದಕ್ಕೆ ಪೇತ್ರನು ದುಃಖಪಟ್ಟು - ಸ್ವಾಮೀ, ನೀನು ಎಲ್ಲಾ ಬಲ್ಲೆ; ನಿನ್ನ ಮೇಲೆ ನಾನು ಮಮತೆ ಇಟ್ಟಿದ್ದೇನೆಂಬದು ನಿನಗೆ ತಿಳಿದದೆ ಅಂದನು. ಅವನಿಗೆ ಯೇಸು - ನನ್ನ ಕುರಿಗಳನ್ನು ಮೇಯಿಸು.