1
ಆದಿಕಾಂಡ 26:3
ಕನ್ನಡ ಸತ್ಯವೇದವು C.L. Bible (BSI)
ನಾನು ಹೇಳುವ ನಾಡಿನಲ್ಲಿ ಇದ್ದು ಪ್ರವಾಸ ಮಾಡುತ್ತಿರು. ನಾನು ನಿನ್ನ ಸಂಗಡವಿದ್ದು ನೀನು ಏಳಿಗೆಯಾಗುವಂತೆ ಮಾಡುತ್ತೇನೆ; ಈ ನಾಡೆಲ್ಲವನ್ನು ನಿನಗೂ ನಿನ್ನ ಸಂತತಿಗೂ ಕೊಡುತ್ತೇನೆ.
Compare
Explore ಆದಿಕಾಂಡ 26:3
2
ಆದಿಕಾಂಡ 26:4-5
ನಿನ್ನ ತಂದೆ ಅಬ್ರಹಾಮನು ನನ್ನ ಮಾತನ್ನು ಕೇಳಿ ನಾನು ಹೇಳಿದಂತೆ ಮಾಡಿದನು; ನನ್ನ ಆಜ್ಞಾವಿಧಿಗಳನ್ನೂ ನೇಮನಿಯಮಗಳನ್ನೂ ಕೈಗೊಂಡು ನಡೆದನು. ಆದುದರಿಂದ ನಾನು ಅವನಿಗೆ ಮಾಡಿದ ಪ್ರಮಾಣವನ್ನು ನೆರವೇರಿಸುತ್ತೇನೆ. ನಿನ್ನ ಸಂತತಿಯನ್ನು ಆಕಾಶದಲ್ಲಿರುವ ನಕ್ಷತ್ರಗಳಂತೆ ಅಸಂಖ್ಯಾತವಾಗಿಸುತ್ತೇನೆ; ಅವರಿಗೆ ಈ ನಾಡೆಲ್ಲವನ್ನು ಕೊಡುತ್ತೇನೆ. ಜಗದ ಜನಾಂಗಗಳಿಗೆಲ್ಲ ನಿನ್ನ ಸಂತತಿಯ ಮುಖಾಂತರ ಆಶೀರ್ವಾದ ದೊರಕುವುದು.”
Explore ಆದಿಕಾಂಡ 26:4-5
3
ಆದಿಕಾಂಡ 26:22
ಅವನು ಅಲ್ಲಿಂದ ಮುಂದಕ್ಕೆ ತೆರಳಿ ಮತ್ತೊಂದು ಬಾವಿಯನ್ನು ಅಗೆಸಿದನು. ಅದರ ಬಗ್ಗೆ ಯಾರೂ ಜಗಳಕ್ಕೆ ಬರಲಿಲ್ಲ. ಈ ಕಾರಣ ಅವನು, “ಸರ್ವೇಶ್ವರ ನಮಗೀಗ ಸ್ಥಳಾವಕಾಶ ಮಾಡಿಕೊಟ್ಟಿದ್ದಾರೆ; ನಾವು ಅಭಿವೃದ್ಧಿಯಾಗುತ್ತೇವೆ,” ಎಂದು ಹೇಳಿ ಆ ಬಾವಿಗೆ ‘ರೆಹೋಬೋತ್’ ಎಂದು ಹೆಸರಿಟ್ಟನು.
Explore ಆದಿಕಾಂಡ 26:22
4
ಆದಿಕಾಂಡ 26:2
ಅಲ್ಲಿ ಸರ್ವೇಶ್ವರ ಸ್ವಾಮಿ ಇಸಾಕನಿಗೆ ದರ್ಶನ ಕೊಟ್ಟು ಇಂತೆಂದರು: “ನೀನು ಈಜಿಪ್ಟಿಗೆ ಹೋಗಬೇಡ
Explore ಆದಿಕಾಂಡ 26:2
5
ಆದಿಕಾಂಡ 26:25
ಇಸಾಕನು ಒಂದು ಬಲಿಪೀಠವನ್ನು ಕಟ್ಟಿಸಿ ಸರ್ವೇಶ್ವರ ಸ್ವಾಮಿಯ ನಾಮಸ್ಮರಣೆ ಮಾಡಿ ಆರಾಧಿಸಿ, ಅಲ್ಲಿ ಗುಡಾರ ಹಾಕಿಸಿಕೊಂಡನು. ಅವನ ಕೆಲಸಗಾರರು ಅಲ್ಲಿಯೂ ಒಂದು ಬಾವಿಯನ್ನು ತೋಡಿದರು.
Explore ಆದಿಕಾಂಡ 26:25
Home
Bible
Plans
Videos