ಅದೂ ಅಲ್ಲದೆ ಅವನು ಹೀಗೆಂದು ಹರಕೆ ಮಾಡಿಕೊಂಡನು; “ದೇವರು ನನ್ನ ಸಂಗಡವಿದ್ದು ನಾನು ಕೈಗೊಂಡ ಪ್ರಯಾಣದಲ್ಲಿ ನನ್ನನ್ನು ಕಾಪಾಡಿ, ಹೊಟ್ಟೆಗೆ ಊಟವನ್ನೂ ಮೈಗೆ ಬಟ್ಟೆಯನ್ನೂ ಕೊಟ್ಟು, ನನ್ನ ತಂದೆಯ ಮನೆಗೆ ಸುರಕ್ಷಿತವಾಗಿ ಮರಳಿ ಬರಮಾಡಿದರೆ ಸರ್ವೇಶ್ವರಸ್ವಾಮಿಯೇ ನನಗೆ ದೇವರು ಆಗುವರು. ನಾನು ಸ್ಮಾರಕಸ್ತಂಭವಾಗಿ ನೆಟ್ಟಿರುವ ಈ ಕಲ್ಲು ದೇವರ ಮನೆಯಾಗುವುದು; ಅದು ಮಾತ್ರವಲ್ಲ, ನೀವು ನನಗೆ ಕೊಡುವ ಎಲ್ಲ ಆಸ್ತಿಪಾಸ್ತಿಯಲ್ಲಿ ಹತ್ತರಲ್ಲಿ ಒಂದು ಪಾಲನ್ನು ನಿಮಗೆ ಸಮರ್ಪಿಸುತ್ತೇನೆಂದು ಮಾತುಕೊಡುತ್ತೇನೆ.”