1
ಆದಿಕಾಂಡ 32:28
ಕನ್ನಡ ಸತ್ಯವೇದವು C.L. Bible (BSI)
ಅವನು ಯಕೋಬನಿಗೆ, “ಇನ್ನು ಮೇಲೆ ನೀನು ಯಕೋಬ ಎನಿಸಿಕೊಳ್ಳುವುದಿಲ್ಲ; ದೇವರ ಸಂಗಡ ಹಾಗು ಮನುಷ್ಯರ ಸಂಗಡ ಹೋರಾಡಿ ಗೆದ್ದವನಾದ್ದರಿಂದ ನಿನಗೆ ‘ಇಸ್ರಾಯೇಲ್’ ಎಂದು ಹೆಸರುಂಟಾಗುವುದು,” ಎಂದು ಹೇಳಿದನು.
Compare
Explore ಆದಿಕಾಂಡ 32:28
2
ಆದಿಕಾಂಡ 32:26
ಆ ಪುರುಷ, “ನನ್ನನ್ನು, ಹೋಗಬಿಡು, ಬೆಳಗು ಆಗುತ್ತಿದೆ,” ಎನ್ನಲು ಯಕೋಬನು, “ನೀವು ನನ್ನನ್ನು ಆಶೀರ್ವದಿಸಿದ ಹೊರತು, ನಿಮ್ಮನ್ನು ಹೋಗಬಿಡುವುದಿಲ್ಲ,” ಎಂದನು.
Explore ಆದಿಕಾಂಡ 32:26
3
ಆದಿಕಾಂಡ 32:24
ಯಕೋಬನು ಒಂಟಿಗನಾಗಿ ಹಿಂದೆ ನಿಂತಿದ್ದನು, ಯಾರೋ ಒಬ್ಬ ಪುರುಷ ಬೆಳಗಾಗುವ ತನಕ ಅವನ ಸಂಗಡ ಹೋರಾಡಿದನು.
Explore ಆದಿಕಾಂಡ 32:24
4
ಆದಿಕಾಂಡ 32:30
ಯಕೋಬನು, “ನಾನು ದೇವರನ್ನು ಮುಖಾಮುಖಿಯಾಗಿ ಕಂಡಿದ್ದರೂ ಪ್ರಾಣಸಹಿತ ಉಳಿದಿದ್ದೇನಲ್ಲಾ!” ಎಂದುಕೊಂಡು ಆ ಸ್ಥಳಕ್ಕೆ ‘ಪೆನೀಯೇಲ್’ ಎಂದು ಹೆಸರಿಟ್ಟನು.
Explore ಆದಿಕಾಂಡ 32:30
5
ಆದಿಕಾಂಡ 32:25
ಆ ಪುರುಷ ತಾನು ಗೆಲ್ಲದೆ ಇರುವುದನ್ನು ಕಂಡು ಯಕೋಬನ ತೊಡೆಯ ಕೀಲನ್ನು ಮುಟ್ಟಿದ್ದರಿಂದ ಹೋರಾಡುತ್ತಿರುವಾಗಲೆ ಯಕೋಬನ ತೊಡೆಯ ಕೀಲು ತಪ್ಪಿತು.
Explore ಆದಿಕಾಂಡ 32:25
6
ಆದಿಕಾಂಡ 32:27
ಆ ಪುರುಷ, “ನಿನ್ನ ಹೆಸರೇನು?” ಎಂದು ಕೇಳಿದ್ದಕ್ಕೆ ಯಕೋಬನು, “ನನ್ನ ಹೆಸರು ಯಕೋಬ” ಎಂದನು.
Explore ಆದಿಕಾಂಡ 32:27
7
ಆದಿಕಾಂಡ 32:29
ಯಕೋಬನು, “ನಿಮ್ಮ ಹೆಸರನ್ನು ದಯವಿಟ್ಟು ನನಗೆ ತಿಳಿಸಬೇಕು,” ಎಂದಾಗ ಆ ಪುರುಷ, “ನನ್ನ ಹೆಸರನ್ನು ವಿಚಾರಿಸುವುದೇಕೆ?” ಎಂದು ಹೇಳಿ ಅಲ್ಲೇ ಅವನನ್ನು ಆಶೀರ್ವದಿಸಿದನು.
Explore ಆದಿಕಾಂಡ 32:29
8
ಆದಿಕಾಂಡ 32:10
ದಾಸನಾದ ನನ್ನ ಮೇಲೆ ಎಷ್ಟೋ ಪ್ರೀತಿಯನ್ನಿಟ್ಟು ನಿಮ್ಮ ವಾಗ್ದಾನವನ್ನು ನೆರವೇರಿಸಿದ್ದೀರಿ. ನಾನು ಅದಕ್ಕೆ ಕೇವಲ ಅಪಾತ್ರನು. ನಾನು ಮೊದಲು ಈ ಜೋರ್ಡನ್ ನದಿಯನ್ನು ದಾಟಿದಾಗ ನನಗಿದ್ದುದು ಒಂದು ಊರುಗೋಲು ಮಾತ್ರ. ಈಗ ಎರಡು ಪರಿವಾರಗಳಿಗೆ ಒಡೆಯನಾಗಿದ್ದೇನೆ.
Explore ಆದಿಕಾಂಡ 32:10
9
ಆದಿಕಾಂಡ 32:32
ಆ ಪುರುಷನು ಯಕೋಬನ ತೊಡೆಯ ಕೀಲನ್ನು ಮುಟ್ಟಿದ್ದರಿಂದ ಇಸ್ರೆಯೇಲರು ಇಂದಿನವರೆಗೂ ತೊಡೆಯ ಕೀಲಿನ ಮೇಲಿರುವ ಮಾಂಸವನ್ನು ತಿನ್ನುವುದಿಲ್ಲ.
Explore ಆದಿಕಾಂಡ 32:32
10
ಆದಿಕಾಂಡ 32:9
ಇದಲ್ಲದೆ ಯಕೋಬನು ದೇವರನ್ನು ಹೀಗೆಂದು ಪ್ರಾರ್ಥಿಸಿದನು: “ಸ್ವಾಮಿ ಸರ್ವೇಶ್ವರಾ, ನನ್ನ ತಂದೆ ತಾತಂದಿರಾದ ಇಸಾಕ, ಅಬ್ರಹಾಮರ ದೇವರೇ, ಸ್ವಂತ ನಾಡಿಗೆ, ಬಂಧುಬಳಗದವರ ಬಳಿಗೆ ಹಿಂದಿರುಗಬೇಕೆಂದು ನನಗೆ ನೀವೇ ಆಜ್ಞಾಪಿಸಿದಿರಿ: 'ನಿನಗೆ ಒಳ್ಳೆಯದನ್ನೇ ಮಾಡುತ್ತೇನೆ' ಎಂದು ವಾಗ್ದಾನ ಮಾಡಿದವರು ನೀವೇ ಅಲ್ಲವೆ?
Explore ಆದಿಕಾಂಡ 32:9
11
ಆದಿಕಾಂಡ 32:11
ನನ್ನ ಅಣ್ಣ ಏಸಾವನು ಬಂದು ನನ್ನನ್ನೂ ನನ್ನ ಮಕ್ಕಳನ್ನೂ ಅವರ ತಾಯಂದಿರನ್ನೂ ಕೊಲ್ಲುವನೋ ಏನೋ ಎಂಬ ಭಯ ನನಗಿದೆ. ಅವನ ಕೈಗೆ ಸಿಕ್ಕದಂತೆ ನಮ್ಮನ್ನು ಕಾಪಾಡಬೇಕೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ.
Explore ಆದಿಕಾಂಡ 32:11
Home
Bible
Plans
Videos