ಅವರೆಲ್ಲರ ಊಟವಾದ ಮೇಲೆ ಯೇಸು ಸಿಮೋನ ಪೇತ್ರನನ್ನು ನೋಡಿ, ಯೊವಾನ್ನನ ಮಗನಾದ ಸಿಮೋನನೇ, ಇವರಿಗಿಂತಲೂ ಹೆಚ್ಚಾಗಿ ನೀನು ನನ್ನನ್ನು ಪ್ರೀತಿಸುತ್ತೀಯಾ?” ಎಂದು ಕೇಳಿದರು. ಅದಕ್ಕೆ ಪೇತ್ರನು, “ಹೌದು ಪ್ರಭೂ, ನಾನು ನಿಮ್ಮನ್ನು ಪ್ರೀತಿಸುತ್ತೇನೆಂದು ನೀವೇ ಬಲ್ಲಿರಿ,” ಎಂದನು. ಯೇಸು ಅವನಿಗೆ, “ನನ್ನ ಕುರಿಮರಿಗಳನ್ನು ಮೇಯಿಸು,” ಎಂದರು. ಯೇಸು ಎರಡನೆಯ ಬಾರಿ, “ಯೊವಾನ್ನನ ಮಗನಾದ ಸಿಮೋನನೇ, ನೀನು ನನ್ನನ್ನು ಪ್ರೀತಿಸುತ್ತೀಯಾ?” ಎಂದು ಕೇಳಲು, “ಹೌದು ಪ್ರಭುವೇ, ನಾನು ನಿಮ್ಮನ್ನು ಪ್ರೀತಿಸುತ್ತೇನೆಂದು ನೀವೇ ಬಲ್ಲಿರಿ,” ಎಂದು ಮರುನುಡಿದನು. ಯೇಸು ಅವನಿಗೆ, “ನನ್ನ ಕುರಿಗಳನ್ನು ಕಾಯಿ,” ಎಂದರು. ಮೂರನೇ ಬಾರಿಯೂ ಯೇಸು, “ಯೊವಾನ್ನನ ಮಗನಾದ ಸಿಮೋನನೇ, ನೀನು ನನ್ನನ್ನು ಪ್ರೀತಿಸುತ್ತೀಯಾ?” ಎಂದು ಕೇಳಿದರು. “ನೀನು ನನ್ನನ್ನು ಪ್ರೀತಿಸುತ್ತೀಯಾ?” ಎಂದು ಯೇಸು ಮೂರನೇ ಬಾರಿ ಕೇಳಿದ್ದನ್ನು ಕಂಡು ಪೇತ್ರನು ನೊಂದುಕೊಂಡನು. “ಪ್ರಭುವೇ, ನಿಮಗೆ ಎಲ್ಲವು ತಿಳಿದೇ ಇದೆ. ನಾನು ನಿಮ್ಮನ್ನು ಪ್ರೀತಿಸುತ್ತೇನೆ ಎಂದೂ ನಿಮಗೆ ತಿಳಿದಿದೆ,” ಎಂದು ಹೇಳಿದನು. ಅದಕ್ಕೆ ಯೇಸು, “ನನ್ನ ಕುರಿಗಳನ್ನು ಮೇಯಿಸು