1
ಲೂಕ. 10:19
ಕನ್ನಡ ಸತ್ಯವೇದವು C.L. Bible (BSI)
ಇಗೋ, ಸರ್ಪಗಳನ್ನು ಹಾಗೂ ಚೇಳುಗಳನ್ನು ತುಳಿಯುವುದಕ್ಕೂ ಶತ್ರುವಿನ ಸಮಸ್ತ ಶಕ್ತಿಯನ್ನು ಜಯಿಸುವುದಕ್ಕೂ ನಿಮಗೆ ಅಧಿಕಾರ ಕೊಟ್ಟಿದ್ದೇನೆ. ಯಾವುದೂ ನಿಮಗೆ ಹಾನಿಮಾಡದು.
Compare
Explore ಲೂಕ. 10:19
2
ಲೂಕ. 10:41-42
ಯೇಸು ಆಕೆಗೆ ಪ್ರತ್ಯುತ್ತರವಾಗಿ, “ಮಾರ್ತಾ, ಮಾರ್ತಾ, ನೀನು ಅನಾವಶ್ಯ ಚಿಂತೆ ಪೇಚಾಟಗಳಿಗೆ ಒಳಗಾಗಿರುವೆ. ಆದರೆ ಅಗತ್ಯವಾದುದು ಒಂದೇ. ಮರಿಯಳು ಉತ್ತಮವಾದುದನ್ನೇ ಆರಿಸಿಕೊಂಡಿದ್ದಾಳೆ. ಅದನ್ನು ಆಕೆಯಿಂದ ಕಸಿದುಕೊಳ್ಳಲಾಗದು,” ಎಂದರು.
Explore ಲೂಕ. 10:41-42
3
ಲೂಕ. 10:27
ಅವನು, “ ‘ನಿನ್ನ ಸರ್ವೇಶ್ವರನಾದ ದೇವರನ್ನು ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣಆತ್ಮದಿಂದಲೂ ನಿನ್ನ ಪೂರ್ಣಶಕ್ತಿಯಿಂದಲೂ ನಿನ್ನ ಪೂರ್ಣ ಮನಸ್ಸಿನಿಂದಲೂ ಪ್ರೀತಿಸು ಮತ್ತು ನಿನ್ನನ್ನು ನೀನೇ ಪ್ರೀತಿಸಿಕೊಳ್ಳುವಂತೆ ನಿನ್ನ ನೆರೆಯವನನ್ನೂ ಪ್ರೀತಿಸು’ ಎಂದಿದೆ,” ಎಂದು ಉತ್ತರಕೊಟ್ಟನು.
Explore ಲೂಕ. 10:27
4
ಲೂಕ. 10:2
ಕಳುಹಿಸುವಾಗ ಅವರಿಗೆ ಹೇಳಿದ್ದೇನೆಂದರೆ, “ಬೆಳೆಯೇನೋ ಹೇರಳವಾಗಿದೆ; ಕೊಯ್ಲುಗಾರರೊ ವಿರಳ. ಆದುದರಿಂದ ಕೊಯ್ಲಿಗೆ ಆಳುಗಳನ್ನು ಕಳುಹಿಸುವಂತೆ ಬೆಳೆಯ ಯಜಮಾನನನ್ನು ಬೇಡಿಕೊಳ್ಳಿ.
Explore ಲೂಕ. 10:2
5
ಲೂಕ. 10:36-37
“ದರೋಡೆಗಾರರ ಕೈಗೆ ಸಿಕ್ಕಿದವನಿಗೆ ಈ ಮೂವರಲ್ಲಿ ಯಾರು ನೆರೆಯವನೆಂದು ನಿನಗೆ ತೋರುತ್ತದೆ?” ಎಂದು ಯೇಸು ಆ ಶಾಸ್ತ್ರಜ್ಞನನ್ನು ಕೇಳಿದರು. ಅದಕ್ಕೆ ಅವನು, “ದಯೆತೋರಿದವನೇ ನೆರೆಯವನು,” ಎಂದನು. ಆಗ ಯೇಸು, “ಹೋಗು, ನೀನೂ ಹಾಗೆಯೇ ಮಾಡು,” ಎಂದು ಹೇಳಿದರು.
Explore ಲೂಕ. 10:36-37
6
ಲೂಕ. 10:3
ಹೋಗಿರಿ, ತೋಳಗಳ ನಡುವೆ ಕುರಿಮರಿಗಳನ್ನು ಬಿಟ್ಟಂತೆ ನಾನು ನಿಮ್ಮನ್ನು ಕಳುಹಿಸುತ್ತೇನೆ.
Explore ಲೂಕ. 10:3
Home
Bible
Plans
Videos