1
ಲೂಕ. 12:40
ಕನ್ನಡ ಸತ್ಯವೇದವು C.L. Bible (BSI)
ಇದನ್ನು ಚೆನ್ನಾಗಿ ತಿಳಿದುಕೊಂಡು ನೀವು ಸಹ ಸಿದ್ಧರಾಗಿರಿ. ಏಕೆಂದರೆ, ನರಪುತ್ರನು ನೀವು ನಿರೀಕ್ಷಿಸದ ಗಳಿಗೆಯಲ್ಲಿ ಬರುವನು,” ಎಂದರು.
Compare
Explore ಲೂಕ. 12:40
2
ಲೂಕ. 12:31
ನೀವಾದರೋ ದೇವರ ಸಾಮ್ರಾಜ್ಯಕ್ಕಾಗಿ ತವಕಪಡಿರಿ. ಇದರ ಸಮೇತ ಅವು ಕೂಡ ನಿಮಗೆ ಕೊಡಲಾಗುವುವು.
Explore ಲೂಕ. 12:31
3
ಲೂಕ. 12:15
ಅನಂತರ ಜನರನ್ನುದ್ದೇಶಿಸಿ, “ಎಚ್ಚರಿಕೆ, ಯಾವ ವಿಧವಾದ ಲೋಭಕ್ಕೂ ಒಳಗಾಗದಂತೆ ಜಾಗರೂಕರಾಗಿರಿ. ಏಕೆಂದರೆ, ಒಬ್ಬನಿಗೆ ಎಷ್ಟೇ ಸಿರಿಸಂಪತ್ತಿರಲಿ, ಅವನ ನಿಜವಾದ ಜೀವನ ಅದನ್ನು ಅವಲಂಬಿಸಿಲ್ಲ,” ಎಂದು ಹೇಳಿದರು.
Explore ಲೂಕ. 12:15
4
ಲೂಕ. 12:34
ನಿಮ್ಮ ನಿಧಿ ಎಲ್ಲಿದೆಯೋ ಅಲ್ಲೇ ಇರುವುದು ನಿಮ್ಮ ಹೃದಯ.
Explore ಲೂಕ. 12:34
5
ಲೂಕ. 12:25
ಚಿಂತಿಸಿ, ಚಿಂತಿಸಿ, ನಿಮ್ಮ ಜೀವನಾವಧಿಯನ್ನು ಕೊಂಚಕಾಲವಾದರೂ ದೀರ್ಘಮಾಡಲು ನಿಮ್ಮಲ್ಲಿ ಯಾರಿಂದಾದೀತು?
Explore ಲೂಕ. 12:25
6
ಲೂಕ. 12:22
ಅನಂತರ ಯೇಸುಸ್ವಾಮಿ ತಮ್ಮ ಶಿಷ್ಯರಿಗೆ, “ಈ ಕಾರಣದಿಂದ ನೀವು ನಿಮ್ಮ ‘ಪ್ರಾಣಧಾರಣೆಗೆ ಏನು ಉಣ್ಣುವುದು, ದೇಹರಕ್ಷಣೆಗೆ ಏನು ಹೊದೆಯುವುದು’ ಎಂದು ಚಿಂತೆಮಾಡಬೇಡಿ.
Explore ಲೂಕ. 12:22
7
ಲೂಕ. 12:7
ಅಷ್ಟುಮಾತ್ರವಲ್ಲ, ನಿಮ್ಮ ತಲೆಗೂದಲುಗಳು ಸಹ ಎಲ್ಲವೂ ಎಣಿಕೆಯಾಗಿವೆ. ಭಯಪಡಬೇಡಿ; ಅನೇಕ ಗುಬ್ಬಚ್ಚಿಗಳಿಗಿಂತ ನೀವು ಎಷ್ಟೋ ಮೌಲ್ಯವುಳ್ಳವರು.
Explore ಲೂಕ. 12:7
8
ಲೂಕ. 12:32
“ಪುಟ್ಟಮಂದೆಯೇ, ಭಯಪಡಬೇಡ. ನಿನ್ನ ತಂದೆ ತಮ್ಮ ಸಾಮ್ರಾಜ್ಯವನ್ನು ನಿನಗೆ ನೀಡಲು ಇಷ್ಟಪಟ್ಟಿದ್ದಾರೆ.
Explore ಲೂಕ. 12:32
9
ಲೂಕ. 12:24
ಕಾಗೆಗಳನ್ನು ಗಮನಿಸಿರಿ; ಅವು ಬಿತ್ತುವುದಿಲ್ಲ, ಕೊಯ್ಯುವುದಿಲ್ಲ. ಅವುಗಳಿಗೆ ಉಗ್ರಾಣವೂ ಇಲ್ಲ, ಕಣಜವೂ ಇಲ್ಲ. ಆದರೂ ದೇವರು ಅವುಗಳನ್ನು ಪೋಷಿಸುತ್ತಾರೆ. ಪಕ್ಷಿಗಳಿಗಿಂತ ನೀವು ಎಷ್ಟೋ ಮೇಲಾದವರು!
Explore ಲೂಕ. 12:24
10
ಲೂಕ. 12:29
ಅಲ್ಲದೆ, ಅನ್ನಪಾನಗಳಿಗೆ ಏನು ಮಾಡೋಣ ಎಂದು ತೊಳಲಾಡಬೇಡಿ, ಪೇಚಾಡಬೇಡಿ.
Explore ಲೂಕ. 12:29
11
ಲೂಕ. 12:28
ಎಲೈ ಅಲ್ಪವಿಶ್ವಾಸಿಗಳೇ, ಇಂದಿದ್ದು ನಾಳೆ ಒಲೆಪಾಲಾಗುವ ಬಯಲಿನ ಹುಲ್ಲಿಗೇ ದೇವರು ಹೀಗೆ ಉಡಿಸಿದರೆ, ನಿಮಗೆ ಇನ್ನೆಷ್ಟು ಮಾಡಲಾರರು!
Explore ಲೂಕ. 12:28
12
ಲೂಕ. 12:2
ಮುಚ್ಚುಮರೆಯಾಗಿರುವುದೆಲ್ಲಾ ಬಟ್ಟಬಯಲಾಗುವುದು; ಗುಟ್ಟಾಗಿರುವುದೆಲ್ಲಾ ರಟ್ಟಾಗುವುದು.
Explore ಲೂಕ. 12:2
Home
Bible
Plans
Videos