1
ಲೂಕ. 6:38
ಕನ್ನಡ ಸತ್ಯವೇದವು C.L. Bible (BSI)
ಪರರನ್ನು ಕ್ಷಮಿಸಿರಿ, ದೇವರು ನಿಮ್ಮನ್ನೂ ಕ್ಷಮಿಸುವರು; ಪರರಿಗೆ ಕೊಡಿ, ದೇವರು ನಿಮಗೂ ಕೊಡುವರು; ಅಳತೆಯಲ್ಲಿ ತುಂಬಿ, ಕುಲುಕಿ, ಅದುಮಿ ತುಳುಕುವಂತೆ ಅಳೆದು ನಿಮ್ಮ ಮಡಿಲಿಗೆ ಹಾಕುವರು. ನೀವು ಕೊಟ್ಟ ಅಳತೆಯಲ್ಲೇ ದೇವರು ನಿಮಗೂ ಅಳೆದುಕೊಡುವರು,” ಎಂದರು.
Compare
Explore ಲೂಕ. 6:38
2
ಲೂಕ. 6:45
ಒಳ್ಳೆಯವನು ತನ್ನ ಹೃದಯವೆಂಬ ಬೊಕ್ಕಸದಿಂದ ಒಳ್ಳೆಯದನ್ನೇ ಹೊರತರುತ್ತಾನೆ. ಕೆಟ್ಟವನು ಕೆಟ್ಟ ಬೊಕ್ಕಸದಿಂದ ಕೆಟ್ಟದ್ದನ್ನೇ ಹೊರತರುತ್ತಾನೆ. ಹೃದಯದಲ್ಲಿ ತುಂಬಿರುವುದೇ ಬಾಯಿಮಾತಾಗಿ ತುಳುಕುತ್ತದೆ.
Explore ಲೂಕ. 6:45
3
ಲೂಕ. 6:35
“ಆದುದರಿಂದ ನಿಮ್ಮ ಶತ್ರುಗಳನ್ನು ಪ್ರೀತಿಸಿರಿ. ಅವನಿಗೆ ಒಳಿತನ್ನೇ ಮಾಡಿರಿ. ಪ್ರತಿಯಾಗಿ ಪಡೆಯುವ ಆಶೆಯಿಡದೆ ಸಾಲಕೊಡಿ. ಆಗ ನಿಮಗೆ ಮಹತ್ತಾದ ಸಂಭಾವನೆ ದೊರಕುವುದು. ನೀವು ಮಹೋನ್ನತ ದೇವರ ಮಕ್ಕಳಾಗುವಿರಿ. ದೇವರು ದುರ್ಜನರಿಗೂ ಒಳ್ಳೆಯವರು, ಕೃತಘ್ನರಿಗೂ ಒಳ್ಳೆಯವರು.
Explore ಲೂಕ. 6:35
4
ಲೂಕ. 6:36
ನಿಮ್ಮ ತಂದೆಯಾದ ದೇವರಂತೆ ನೀವೂ ದಯಾವಂತರಾಗಿರಿ.
Explore ಲೂಕ. 6:36
5
ಲೂಕ. 6:37
“ನೀವು ಇತರರ ಬಗ್ಗೆ ತೀರ್ಪು ಕೊಡಬೇಡಿ. ಆಗ ದೇವರು ನಿಮ್ಮ ಬಗ್ಗೆ ತೀರ್ಪು ಕೊಡುವುದಿಲ್ಲ; ಪರರನ್ನು ದಂಡನೆಗೆ ಗುರಿಮಾಡಬೇಡಿ, ದೇವರು ನಿಮ್ಮನ್ನೂ ದಂಡನೆಗೆ ಗುರಿಮಾಡುವುದಿಲ್ಲ.
Explore ಲೂಕ. 6:37
6
ಲೂಕ. 6:27-28
“ನನ್ನನ್ನು ಆಲಿಸುತ್ತಿರುವವರೇ, ನನ್ನ ಮಾತನ್ನು ಕೇಳಿರಿ: ‘ನಿಮ್ಮ ಶತ್ರುಗಳನ್ನು ಪ್ರೀತಿಸಿರಿ, ನಿಮ್ಮನ್ನು ದ್ವೇಷಿಸುವವರನ್ನು ಸತ್ಕರಿಸಿರಿ. ನಿಮ್ಮನ್ನು ಶಪಿಸುವವರನ್ನು ಆಶೀರ್ವದಿಸಿರಿ, ನಿಮ್ಮನ್ನು ನಿಂದಿಸುವವರಿಗಾಗಿ ಪ್ರಾರ್ಥಿಸಿರಿ.
Explore ಲೂಕ. 6:27-28
7
ಲೂಕ. 6:31
ಅಲ್ಲದೆ, ಇತರರು ನಿಮಗೆ ಏನೇನು ಮಾಡಬೇಕೆಂದು ನೀವು ಅಪೇಕ್ಷಿಸುತ್ತೀರೋ ಅದನ್ನೇ ನೀವು ಅವರಿಗೆ ಮಾಡಿರಿ.
Explore ಲೂಕ. 6:31
8
ಲೂಕ. 6:29-30
ನಿನ್ನ ಒಂದು ಕೆನ್ನೆಗೆ ಹೊಡೆಯುವವನಿಗೆ ಇನ್ನೊಂದು ಕೆನ್ನೆಯನ್ನು ಒಡ್ಡು, ನಿನ್ನ ಮೇಲಂಗಿಯನ್ನು ಕಿತ್ತುಕೊಳ್ಳುವವನಿಗೆ ಒಳ ಅಂಗಿಯನ್ನೂ ತೆಗೆದುಕೊಳ್ಳಲು ಬಿಡು. ಕೇಳಿಕೊಳ್ಳುವ ಪ್ರತಿಯೊಬ್ಬನಿಗೂ ಕೊಡು ನಿನ್ನ ಸೊತ್ತನ್ನು ಕಸಿದುಕೊಳ್ಳುವವನಿಂದ ತಿರುಗಿ ಕೇಳದಿರು.
Explore ಲೂಕ. 6:29-30
9
ಲೂಕ. 6:43
“ಒಳ್ಳೆಯ ಮರವು ಕೆಟ್ಟ ಫಲವನ್ನು ಕೊಡುವುದಿಲ್ಲ; ಕೆಟ್ಟ ಮರವು ಒಳ್ಳೆಯ ಫಲವನ್ನು ಕೊಡುವುದಿಲ್ಲ.
Explore ಲೂಕ. 6:43
10
ಲೂಕ. 6:44
ಪ್ರತಿಯೊಂದು ಮರದ ಗುಣವನ್ನು ಅದರ ಹಣ್ಣಿನಿಂದ ಗುರುತಿಸಬಹುದು. ಮುಳ್ಳುಗಿಡದಲ್ಲಿ ಅಂಜೂರ ಕೀಳುವಂತಿಲ್ಲ. ಮುಳ್ಳು ಕಳ್ಳಿಯಲ್ಲಿ ದ್ರಾಕ್ಷಿ ಕೊಯ್ಯುವಂತಿಲ್ಲ.
Explore ಲೂಕ. 6:44
Home
Bible
Plans
Videos