1
ಮಾರ್ಕ 2:17
ಕನ್ನಡ ಸತ್ಯವೇದವು C.L. Bible (BSI)
KANCLBSI
ಇದನ್ನು ಕೇಳಿಸಿಕೊಂಡ ಯೇಸು ಅವರಿಗೆ, “ವೈದ್ಯನ ಅವಶ್ಯಕತೆ ಇರುವುದು ರೋಗಿಗಳಿಗೆ, ಆರೋಗ್ಯವಂತರಿಗಲ್ಲ, ನಾನು ಕರೆಯಲು ಬಂದಿರುವುದು ಧರ್ಮಿಷ್ಠರನ್ನಲ್ಲ, ಪಾಪಿಷ್ಠರನ್ನು,” ಎಂದರು.
Compare
Explore ಮಾರ್ಕ 2:17
2
ಮಾರ್ಕ 2:5
ಯೇಸು ಅವರ ವಿಶ್ವಾಸವನ್ನು ಮೆಚ್ಚಿ ಆ ಪಾರ್ಶ್ವವಾಯು ರೋಗಿಗೆ, “ಮಗು, ನಿನ್ನ ಪಾಪಗಳನ್ನು ಕ್ಷಮಿಸಲಾಗಿದೆ,” ಎಂದರು.
Explore ಮಾರ್ಕ 2:5
3
ಮಾರ್ಕ 2:27
ಬಳಿಕ ಯೇಸು ಅವರಿಗೆ, “ಸಬ್ಬತ್ದಿನ ಇರುವುದು ಮನುಷ್ಯನಿಗಾಗಿ ಹೊರತು ಮನುಷ್ಯ ಇರುವುದು ಸಬ್ಬತ್ತಿಗಾಗಿ ಅಲ್ಲ.
Explore ಮಾರ್ಕ 2:27
4
ಮಾರ್ಕ 2:4
ಜನಸಂದಣಿಯ ನಿಮಿತ್ತ ಅವನನ್ನು ಯೇಸುವಿನ ಸಮೀಪಕ್ಕೆ ಸಾಗಿಸಲು ಸಾಧ್ಯವಾಗಲಿಲ್ಲ. ಆದುದರಿಂದ ಅವರು ಯೇಸು ಇದ್ದ ಮನೆಯ ಮೇಲ್ಛಾವಣಿಯನ್ನು ತೆರೆದು, ದೊಡ್ಡ ಕಿಂಡಿಯೊಂದನ್ನು ಮಾಡಿ, ರೋಗಿಯನ್ನು ಹಾಸಿಗೆಯ ಸಮೇತ ಕೆಳಗಿಳಿಸಿದರು.
Explore ಮಾರ್ಕ 2:4
5
ಮಾರ್ಕ 2:10-11
ಭೂಲೋಕದಲ್ಲಿ ಪಾಪಗಳನ್ನು ಕ್ಷಮಿಸಲು ನರಪುತ್ರನಿಗೆ ಅಧಿಕಾರವುಂಟೆಂದು ಈ ಮೂಲಕ ನಿಮಗೆ ಖಚಿತವಾಗಬೇಕು,” ಎಂದು ಹೇಳಿ, ಆ ಪಾರ್ಶ್ವವಾಯು ರೋಗಿಯನ್ನು ನೋಡಿ, “ನಾನು ನಿನಗೆ ಆಜ್ಞಾಪಿಸುತ್ತೇನೆ; ಏಳು, ನಿನ್ನ ಹಾಸಿಗೆಯನ್ನು ಎತ್ತಿಕೊಂಡು ಮನೆಗೆ ಹೋಗು” ಎಂದರು.
Explore ಮಾರ್ಕ 2:10-11
6
ಮಾರ್ಕ 2:9
ಈ ಪಾರ್ಶ್ವವಾಯು ರೋಗಿಗೆ, ‘ನಿನ್ನ ಪಾಪಗಳನ್ನು ಕ್ಷಮಿಸಲಾಗಿದೆ,’ ಎಂದು ಹೇಳುವುದು ಸುಲಭವೋ ಅಥವಾ ‘ಎದ್ದು ನಿನ್ನ ಹಾಸಿಗೆಯನ್ನು ಎತ್ತಿಕೊಂಡು ನಡೆ’ ಎನ್ನುವುದು ಸುಲಭವೋ?
Explore ಮಾರ್ಕ 2:9
7
ಮಾರ್ಕ 2:12
ಎಲ್ಲರೂ ನೋಡುತ್ತಿದ್ದ ಹಾಗೆ ಅವನು ಎದ್ದುನಿಂತನು; ತನ್ನ ಹಾಸಿಗೆಯನ್ನು ತಾನೇ ಎತ್ತಿಕೊಂಡು ಹೊರಟುಹೋದನು. ನೆರೆದಿದ್ದ ಎಲ್ಲರೂ ಆಶ್ಚರ್ಯಚಕಿತರಾಗಿ, “ಇಂಥ ಕಾರ್ಯವನ್ನು ನಾವು ನೋಡಿದ್ದೇ ಇಲ್ಲ!", ಎಂದು ದೇವರನ್ನು ಕೊಂಡಾಡಿದರು.
Explore ಮಾರ್ಕ 2:12
Home
Bible
Plans
Videos