1
ಮಾರ್ಕ 4:39-40
ಕನ್ನಡ ಸತ್ಯವೇದವು C.L. Bible (BSI)
KANCLBSI
ಆಗ ಯೇಸು ಎಚ್ಚೆತ್ತು, ಬಿರುಗಾಳಿಯನ್ನು ಗದರಿಸಿದರು. ಸರೋವರಕ್ಕೆ, “ಶಾಂತವಾಗಿರು! ಮೊರೆಯಬೇಡ,” ಎಂದು ಆಜ್ಞಾಪಿಸಿದರು. ತಕ್ಷಣ ಬಿರುಗಾಳಿ ನಿಂತಿತು. ವಾತಾವರಣ ಪ್ರಶಾಂತವಾಯಿತು. ಅನಂತರ ತಮ್ಮ ಶಿಷ್ಯರಿಗೆ, “ಏಕೆ ಇಷ್ಟು ಭಯ? ಇನ್ನೂ ನಿಮಗೆ ವಿಶ್ವಾಸವಿಲ್ಲವೇ?” ಎಂದರು.
Compare
Explore ಮಾರ್ಕ 4:39-40
2
ಮಾರ್ಕ 4:41
ಶಿಷ್ಯರಾದರೋ ಭಯಭ್ರಾಂತರಾಗಿ, “ಗಾಳಿಯೂ ಸರೋವರವೂ ಇವರು ಹೇಳುವಂತೆ ಕೇಳಬೇಕಾದರೆ ಇವರು ಯಾರಿರಬಹುದು?” ಎಂದು ತಮ್ಮತಮ್ಮೊಳಗೆ ಮಾತಾಡಿಕೊಂಡರು.
Explore ಮಾರ್ಕ 4:41
3
ಮಾರ್ಕ 4:38
ಯೇಸುವಾದರೋ ದೋಣಿಯ ಹಿಂಭಾಗದಲ್ಲಿ ದಿಂಬನ್ನು ಒರಗಿ ನಿದ್ದೆ ಮಾಡುತ್ತಿದ್ದರು. ಶಿಷ್ಯರು ಅವರನ್ನು ಎಬ್ಬಿಸಿ, “ಗುರುವೇ, ನಾವು ಸಾಯುತ್ತಿದ್ದೇವೆ, ತಮಗೆ ಚಿಂತೆಯೇ ಇಲ್ಲವೆ?” ಎಂದರು.
Explore ಮಾರ್ಕ 4:38
4
ಮಾರ್ಕ 4:24
“ನೀವು ಕೇಳುವುದನ್ನು ಎಚ್ಚರಿಕೆಯಿಂದ ಗಮನಿಸಿರಿ; ಇತರರಿಗೆ ನೀವು ಕೊಟ್ಟ ಅಳತೆಯಲ್ಲೇ ದೇವರು ನಿಮಗೂ ಅಳೆದುಕೊಡುವರು; ಇನ್ನೂ ಅಧಿಕವಾಗಿ ಕೊಡುವರು.
Explore ಮಾರ್ಕ 4:24
5
ಮಾರ್ಕ 4:26-27
ಯೇಸುಸ್ವಾಮಿ ಇನ್ನೊಂದು ಸಾಮತಿಯನ್ನು ಹೇಳಿದರು: “ದೇವರ ಸಾಮ್ರಾಜ್ಯವು ರೈತನೊಬ್ಬನು ತನ್ನ ಹೊಲದಲ್ಲಿ ಮಾಡಿದ ಬಿತ್ತನೆಗೆ ಹೋಲಿಕೆಯಾಗಿದೆ. ಬಿತ್ತನೆಯಾದ ಬಳಿಕ ಅವನು ರಾತ್ರಿಯಲ್ಲಿ ಮಲಗಿರಲಿ, ಹಗಲಲ್ಲಿ ಎದ್ದಿರಲಿ, ಅವನಿಗೆ ಹೇಗೆಂದು ತಿಳಿಯದೆಯೇ ಆ ಬೀಜವು ಮೊಳೆತು ಬೆಳೆಯುತ್ತಿರುತ್ತದೆ.
Explore ಮಾರ್ಕ 4:26-27
6
ಮಾರ್ಕ 4:23
ಕೇಳುವುದಕ್ಕೆ ಕಿವಿಯುಳ್ಳವನು ಕೇಳಿಸಿಕೊಳ್ಳಲಿ.
Explore ಮಾರ್ಕ 4:23
Home
Bible
Plans
Videos