ಯೇಸುಸ್ವಾಮಿ ಇನ್ನೂ ಮಾತನಾಡುತ್ತ ಇರುವಾಗಲೇ ಯಾಯೀರನ ಮನೆಯಿಂದ ಕೆಲವರು ಬಂದು ಅವನಿಗೆ, “ನಿಮ್ಮ ಮಗಳು ತೀರಿಹೋದಳು; ಇನ್ನೇಕೆ ಗುರುವಿಗೆ ತೊಂದರೆ ಕೊಡುತ್ತೀರಿ?” ಎಂದರು. ಅವರು ಹೇಳಿದ ಮಾತುಗಳನ್ನು ಯೇಸು ಕೇಳಿಯೂ ಅವನ್ನು ಲಕ್ಷ್ಯಕ್ಕೆ ತೆಗೆದುಕೊಳ್ಳದೆ ಯಾಯೀರನಿಗೆ, “ಭಯಪಡಬೇಡ, ನಿನ್ನಲ್ಲಿ ವಿಶ್ವಾಸ ಒಂದಿದ್ದರೆ ಸಾಕು,” ಎಂದರು.