ಒಮ್ಮೆ ಅವರೆಲ್ಲರೂ ಒಂದುಗೂಡಿದ್ದ ಸಂದರ್ಭದಲ್ಲಿ, “ನೀವು ಯೆರೂಸಲೇಮನ್ನು ಬಿಟ್ಟುಹೋಗದೆ, ನನ್ನಿಂದ ಕೇಳಿದಂಥ ಮತ್ತು ತಂದೆಯು ಮಾಡಿದ ವಾಗ್ದಾನಗಳಿಗಾಗಿ ಇಲ್ಲೇ ಕಾದುಕೊಂಡಿರಿ, ಏಕೆಂದರೆ, ಯೋಹಾನನಂತೂ ನೀರಿನಿಂದ ದೀಕ್ಷಾಸ್ನಾನ ಮಾಡಿಸುತ್ತಿದ್ದನು ಆದರೆ ಇನ್ನು ಕೆಲವೇ ದಿನಗಳಲ್ಲಿ ನಿಮಗೆ ಪವಿತ್ರಾತ್ಮನಿಂದ ದೀಕ್ಷಾಸ್ನಾನವಾಗುವುದು” ಎಂದು ಅಪ್ಪಣೆ ಕೊಟ್ಟನು.