1
ಆದಿ 22:14
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019
ಆ ಸ್ಥಳಕ್ಕೆ ಅಬ್ರಹಾಮನು “ಯೆಹೋವ ಯೀರೆ” ಎಂದು ಹೆಸರಿಟ್ಟನು. ಯೆಹೋವನು ಬೆಟ್ಟದಲ್ಲಿ ಒದಗಿಸುವನು ಎಂಬುದಾಗಿ ಇಂದಿನವರೆಗೂ ಹಾಗೆ ಹೇಳುವ ಪದ್ಧತಿ ಇದೆ.
Compare
Explore ಆದಿ 22:14
2
ಆದಿ 22:2
ಹೇಗೆಂದರೆ ಆತನು ಅವನನ್ನು, “ಅಬ್ರಹಾಮನೇ” ಎಂದು ಕರೆಯಲು ಅವನು, “ಇಗೋ, ಇದ್ದೇನೆ” ಎಂದನು. ಆಗ ಆತನು, “ನಿನಗೆ ಪ್ರಿಯನಾಗಿರುವ ಒಬ್ಬನೇ ಮಗನಾದ ಇಸಾಕನನ್ನು ಕರೆದುಕೊಂಡು ಮೊರೀಯ ದೇಶಕ್ಕೆ ಹೋಗಿ ಅಲ್ಲಿ ಅವನನ್ನು ನಾನು ಹೇಳುವ ಒಂದು ಬೆಟ್ಟದ ಮೇಲೆ ಸರ್ವಾಂಗಹೋಮವಾಗಿ ಅರ್ಪಿಸಬೇಕು” ಎಂದನು.
Explore ಆದಿ 22:2
3
ಆದಿ 22:12
ಆ ದೂತನು ಅವನಿಗೆ, “ಹುಡುಗನ ಮೇಲೆ ಕೈ ಹಾಕಬೇಡ, ಅವನಿಗೆ ಏನೂ ಮಾಡಬೇಡ. ನೀನು ನಿನ್ನ ಒಬ್ಬನೇ ಮಗನನ್ನು ನನಗೆ ಸಮರ್ಪಿಸುವುದಕ್ಕೆ ಹಿಂಜರಿಯಲಿಲ್ಲ. ಈಗ ನೀನು ದೇವರಲ್ಲಿ ಭಯಭಕ್ತಿಯುಳ್ಳವನು ಎಂದು ನನಗೆ ಗೊತ್ತಾಯಿತು” ಎಂದು ಹೇಳಿದನು.
Explore ಆದಿ 22:12
4
ಆದಿ 22:8
ಅಬ್ರಹಾಮನು, “ಮಗನೇ, ಹೋಮಕ್ಕೆ ಬೇಕಾದ ಕುರಿಮರಿಯನ್ನು ದೇವರೇ ಒದಗಿಸುವನು” ಎಂದನು.
Explore ಆದಿ 22:8
5
ಆದಿ 22:17-18
ನಾನು ನಿನ್ನನ್ನು ಆಶೀರ್ವದಿಸಿಯೇ ಆಶೀರ್ವದಿಸುವೆನು; ನಿನ್ನ ಸಂತತಿಯನ್ನು ಅಧಿಕವಾಗಿ ಹೆಚ್ಚಿಸುವೆನು, ಅದನ್ನು ಆಕಾಶದ ನಕ್ಷತ್ರಗಳಂತೆಯೂ, ಸಮುದ್ರ ತೀರದಲ್ಲಿರುವ ಮರಳಿನಂತೆಯೂ ಅಸಂಖ್ಯವಾಗುವಂತೆ ಮಾಡುವೆನು; ಅವರು ಶತ್ರುಗಳ ಪಟ್ಟಣಗಳನ್ನು ಸ್ವತ್ತಾಗಿ ಮಾಡಿಕೊಳ್ಳುವರು. ನೀನು ನನ್ನ ಮಾತಿಗೆ ವಿಧೇಯನಾಗಿ ಭೂಮಿಯ ಎಲ್ಲಾ ಜನಾಂಗಗಳಿಗೆ ನಿನ್ನ ಸಂತತಿಯ ಮೂಲಕ ಆಶೀರ್ವಾದವುಂಟಾಗುವುದು ಎಂಬುದಾಗಿ ಯೆಹೋವನು ವಾಗ್ದಾನ ಮಾಡಿದ್ದಾನೆ.” ಎಂದನು.
Explore ಆದಿ 22:17-18
6
ಆದಿ 22:1
ಈ ಸಂಗತಿಗಳು ಆದ ಮೇಲೆ ದೇವರು ಅಬ್ರಹಾಮನನ್ನು ಪರೀಕ್ಷಿಸಿದನು.
Explore ಆದಿ 22:1
7
ಆದಿ 22:11
ಆಗ ಯೆಹೋವನ ದೂತನು ಆಕಾಶದೊಳಗಿನಿಂದ, “ಅಬ್ರಹಾಮನೇ, ಅಬ್ರಹಾಮನೇ” ಎಂದು ಅವನನ್ನು ಕರೆದನು. ಅದಕ್ಕೆ ಅಬ್ರಹಾಮನು, “ಇಗೋ, ಇದ್ದೇನೆ” ಎಂದನು.
Explore ಆದಿ 22:11
8
ಆದಿ 22:15-16
ಯೆಹೋವನ ದೂತನು ಆಕಾಶದೊಳಗಿನಿಂದ ಎರಡನೆಯ ಸಾರಿ ಅಬ್ರಹಾಮನನ್ನು ಕರೆದು ಅವನಿಗೆ, “ನೀನು ನಿನ್ನ ಒಬ್ಬನೇ ಮಗನನ್ನು ಸಮರ್ಪಿಸುವುದಕ್ಕೆ ಹಿಂದೆಗೆಯದೆ ಹೋದುದರಿಂದ, ಯೆಹೋವನಾದ ನಾನು ನಿನಗೆ ಪ್ರಮಾಣವಾಗಿ ಹೇಳುವುದೇನಂದರೆ
Explore ಆದಿ 22:15-16
9
ಆದಿ 22:9
ದೇವರು ಹೇಳಿದ ಸ್ಥಳಕ್ಕೆ ಅವರು ಸೇರಿದಾಗ ಅಬ್ರಹಾಮನು ಯಜ್ಞವೇದಿಯನ್ನು ಕಟ್ಟಿ, ಕಟ್ಟಿಗೆಯನ್ನು ಜೋಡಿಸಿ ತನ್ನ ಮಗನಾದ ಇಸಾಕನ ಕೈಕಾಲುಗಳನ್ನು ಕಟ್ಟಿ ಅವನನ್ನು ಯಜ್ಞವೇದಿಯ ಮೇಲೆ ಇದ್ದ ಕಟ್ಟಿಗೆಯ ಮೇಲೆ ಮಲಗಿಸಿದನು.
Explore ಆದಿ 22:9
Home
Bible
Plans
Videos