ಆಗ ನಾನು ತಂದೆಯನ್ನು ಕೇಳಿಕೊಳ್ಳುವೆನು, ಆತನು ನಿಮಗೆ ಬೇರೊಬ್ಬ ಸಹಾಯಕನನ್ನು ಸದಾಕಾಲವೂ ನಿಮ್ಮೊಂದಿಗೆ ಇರುವುದಕ್ಕೆ ಕಳುಹಿಸಿ ಕೊಡುವನು. ಆ ಸಹಾಯಕನು ಯಾರೆಂದರೆ ಸತ್ಯದ ಆತ್ಮನೇ. ಲೋಕವು ಆತನನ್ನು ನೋಡದೆಯೂ, ತಿಳಿಯದೆಯೂ ಇರುವುದರಿಂದ ಆತನನ್ನು ಸ್ವೀಕರಿಸಲಾರದು. ನೀವು ಆತನನ್ನು ಬಲ್ಲಿರಿ, ಹೇಗೆಂದರೆ ಆತನು ನಿಮ್ಮೊಂದಿಗೆ ವಾಸಮಾಡುತ್ತಾನೆ ಮತ್ತು ನಿಮ್ಮೊಳಗೆ ಇರುವನು.