ಅವರ ಊಟವಾದ ಮೇಲೆ ಯೇಸು ಸೀಮೋನ್ ಪೇತ್ರನಿಗೆ, “ಯೋಹಾನನ ಮಗನಾದ ಸೀಮೋನನೇ, ನೀನು ಇವರಿಗಿಂತ ಹೆಚ್ಚಾಗಿ ನನ್ನನ್ನು ಪ್ರೀತಿಸುತ್ತಿಯೋ?” ಎಂದು ಕೇಳಲು ಅವನು “ಹೌದು, ಕರ್ತನೇ, ನಾನು ನಿನ್ನ ಮೇಲೆ ಮಮತೆ ಇಟ್ಟಿದ್ದೇನೆಂದು ನೀನೇ ಬಲ್ಲೆ” ಎಂದನು. ಆತನು ಅವನಿಗೆ, “ನನ್ನ ಕುರಿಮರಿಗಳನ್ನು ಮೇಯಿಸು” ಎಂದು ಹೇಳಿದನು. ಆತನು ತಿರುಗಿ ಎರಡನೆಯ ಸಾರಿ ಅವನಿಗೆ, “ಯೋಹಾನನ ಮಗನಾದ ಸೀಮೋನನೇ, ನೀನು ನನ್ನನ್ನು ಪ್ರೀತಿಸುತ್ತೀಯೋ?” ಎಂದು ಕೇಳಲು, ಅವನು ಹೌದು ಕರ್ತನೇ, ನಾನು ನಿನ್ನ ಮೇಲೆ ಮಮತೆ ಇಟ್ಟಿದ್ದೇನೆಂದು ನೀನೇ ಬಲ್ಲೆ ಎಂದನು. ಆತನು ಅವನಿಗೆ “ನನ್ನ ಕುರಿಗಳನ್ನು ಪಾಲಿಸು” ಎಂದು ಹೇಳಿದನು. ಯೇಸು ಮೂರನೆಯ ಸಾರಿ, “ಯೋಹಾನನ ಮಗನಾದ ಸೀಮೋನನೇ ನೀನು ನನ್ನ ಮೇಲೆ ಮಮತೆ ಇಟ್ಟಿದ್ದಿಯೋ?” ಎಂದು ಕೇಳಿದನು, ಮೂರನೆಯ ಸಾರಿ ಆತನು, “ನನ್ನ ಮೇಲೆ ಮಮತೆ ಇಟ್ಟಿದ್ದೀಯೋ?” ಎಂದು ತನ್ನನ್ನು ಕೇಳಿದ್ದಕ್ಕೆ ಪೇತ್ರನು ದುಃಖಪಟ್ಟು, “ಕರ್ತನೇ, ನಿನಗೆ ಎಲ್ಲವೂ ತಿಳಿದಿದೆ. ನಾನು ನಿನ್ನ ಮೇಲೆ ಮಮತೆ ಇಟ್ಟೀದ್ದೇನೆಂದು ನಿನಗೆ ತಿಳಿದಿದೆ” ಎಂದನು. ಆಗ ಅವನಿಗೆ ಯೇಸು “ನನ್ನ ಕುರಿಗಳನ್ನು ಮೇಯಿಸು” ಎಂದನು.