1
ಲೂಕನ ಸುವಾರ್ತೆ 23:34
ಪರಿಶುದ್ದ ಬೈಬಲ್
ಯೇಸು, “ತಂದೆಯೇ, ಇವರನ್ನು ಕ್ಷಮಿಸು. ಇವರಿಗೆ ತಾವು ಮಾಡುತ್ತಿರುವುದು ತಿಳಿದಿಲ್ಲ” ಎಂದು ಪ್ರಾರ್ಥಿಸಿದನು. ಸೈನಿಕರು ಚೀಟುಹಾಕಿ ಯೇಸುವಿನ ಬಟ್ಟೆಗಳು ಯಾರಿಗೆ ಸೇರಬೇಕೆಂದು ತೀರ್ಮಾನಿಸಿದರು.
Compare
Explore ಲೂಕನ ಸುವಾರ್ತೆ 23:34
2
ಲೂಕನ ಸುವಾರ್ತೆ 23:43
ಆಗ ಯೇಸು ಅವನಿಗೆ, “ಕೇಳು! ನಾನು ಸತ್ಯವನ್ನೇ ಹೇಳುತ್ತೇನೆ. ಈ ದಿನವೇ ನೀನು ನನ್ನ ಸಂಗಡ ಪರದೈಸಿನಲ್ಲಿರುವಿ” ಎಂದು ಹೇಳಿದನು.
Explore ಲೂಕನ ಸುವಾರ್ತೆ 23:43
3
ಲೂಕನ ಸುವಾರ್ತೆ 23:42
ಬಳಿಕ ಆ ದುಷ್ಕರ್ಮಿಯು ಆತನಿಗೆ, “ಯೇಸುವೇ ನೀನು ನಿನ್ನ ರಾಜ್ಯವನ್ನು ಸ್ಥಾಪಿಸುವಾಗ ನನ್ನನ್ನು ನೆನಸಿಕೊ!” ಎಂದು ಹೇಳಿದನು.
Explore ಲೂಕನ ಸುವಾರ್ತೆ 23:42
4
ಲೂಕನ ಸುವಾರ್ತೆ 23:46
ಆಮೇಲೆ ಯೇಸು, “ತಂದೆಯೇ, ನನ್ನ ಆತ್ಮವನ್ನು ನಿನಗೆ ಒಪ್ಪಿಸುತ್ತೇನೆ” ಎಂದು ಮಹಾಧ್ವನಿಯಿಂದ ಕೂಗಿ ಪ್ರಾಣಬಿಟ್ಟನು.
Explore ಲೂಕನ ಸುವಾರ್ತೆ 23:46
5
ಲೂಕನ ಸುವಾರ್ತೆ 23:33
ಯೇಸುವನ್ನು ಮತ್ತು ಇಬ್ಬರು ದುಷ್ಕರ್ಮಿಗಳನ್ನು ಅವರು “ಕಪಾಲ”ವೆಂಬ ಸ್ಥಳಕ್ಕೆ ಕರೆದುಕೊಂಡು ಹೋದರು. ಅಲ್ಲಿ ಸೈನಿಕರು ಯೇಸುವನ್ನೂ ಆ ದುಷ್ಕರ್ಮಿಗಳನ್ನೂ ಶಿಲುಬೆಗಳಿಗೆ ಜಡಿದರು. ಒಬ್ಬನನ್ನು ಯೇಸುವಿನ ಬಲಗಡೆಯಲ್ಲಿಯೂ ಇನ್ನೊಬ್ಬನನ್ನು ಯೇಸುವಿನ ಎಡಗಡೆಯಲ್ಲಿಯೂ ಹಾಕಿದರು.
Explore ಲೂಕನ ಸುವಾರ್ತೆ 23:33
6
ಲೂಕನ ಸುವಾರ್ತೆ 23:44-45
ಇಷ್ಟರಲ್ಲಿ ಹೆಚ್ಚುಕಡಿಮೆ ಮಧ್ಯಾಹ್ನವಾಗಿತ್ತು. ಆದರೆ ಇಡೀ ಪ್ರದೇಶವು ಮಧ್ಯಾಹ್ನ ಮೂರು ಗಂಟೆಯ ತನಕ ಕತ್ತಲಾಯಿತು. ಸೂರ್ಯನ ಬೆಳಕೇ ಇರಲಿಲ್ಲ! ದೇವಾಲಯದ ಪರದೆಯು ಎರಡು ಭಾಗವಾಗಿ ಹರಿದುಹೋಯಿತು.
Explore ಲೂಕನ ಸುವಾರ್ತೆ 23:44-45
7
ಲೂಕನ ಸುವಾರ್ತೆ 23:47
ಅಲ್ಲಿದ್ದ ಶತಾಧಿಪತಿ ನಡೆದದ್ದನ್ನು ನೋಡಿ, “ಈ ಮನುಷ್ಯನು ಒಳ್ಳೆಯವನೆಂದು ನನಗೆ ಗೊತ್ತಿತ್ತು” ಎಂದು ಹೇಳಿ ದೇವರನ್ನು ಸ್ತುತಿಸಿದನು.
Explore ಲೂಕನ ಸುವಾರ್ತೆ 23:47
Home
Bible
Plans
Videos