1
ಆದಿಕಾಂಡ 26:3
ಕನ್ನಡ ಸಮಕಾಲಿಕ ಅನುವಾದ
ಈ ದೇಶದಲ್ಲಿ ಪ್ರವಾಸಿಯಾಗಿರು. ಆಗ ನಾನು ನಿನ್ನ ಸಂಗಡ ಇದ್ದು, ನಿನ್ನನ್ನು ಆಶೀರ್ವದಿಸುವೆನು. ನಿನಗೂ, ನಿನ್ನ ಸಂತಾನಕ್ಕೂ ಈ ಪ್ರದೇಶಗಳನ್ನೆಲ್ಲಾ ಕೊಡುವೆನು. ನಿನ್ನ ತಂದೆ ಅಬ್ರಹಾಮನಿಗೆ ನಾನು ಮಾಡಿದ ಪ್ರಮಾಣವನ್ನು ಈಡೇರಿಸುವೆನು.
Compare
Explore ಆದಿಕಾಂಡ 26:3
2
ಆದಿಕಾಂಡ 26:4-5
ನಿನ್ನ ಸಂತತಿಯನ್ನು ಆಕಾಶದ ನಕ್ಷತ್ರಗಳಂತೆ ಹೆಚ್ಚಿಸುವೆನು. ನಿನ್ನ ಸಂತತಿಗೆ ಈ ಪ್ರದೇಶಗಳನ್ನೆಲ್ಲಾ ಕೊಡುವೆನು. ನಿನ್ನ ಸಂತತಿಯ ಮೂಲಕ ಭೂಮಿಯ ಎಲ್ಲಾ ಜನಾಂಗಗಳಿಗೂ ಆಶೀರ್ವಾದವಾಗುವುದು. ಏಕೆಂದರೆ ಅಬ್ರಹಾಮನು ನನ್ನ ಮಾತಿಗೆ ನನ್ನ ವಿಧಿಯನ್ನೂ, ನನ್ನ ಆಜ್ಞೆಗಳನ್ನೂ, ನನ್ನ ಕಟ್ಟಳೆಗಳನ್ನೂ ನನ್ನ ನೇಮಗಳನ್ನೂ, ಕೈಗೊಂಡು ನಡೆದನು,” ಎಂದರು.
Explore ಆದಿಕಾಂಡ 26:4-5
3
ಆದಿಕಾಂಡ 26:22
ಅಲ್ಲಿಂದ ಅವನು ಹೊರಟುಹೋಗಿ ಇನ್ನೊಂದು ಬಾವಿಯನ್ನು ಅಗೆದಾಗ, ಅದಕ್ಕಾಗಿ ಅವರು ಜಗಳವಾಡಲಿಲ್ಲ. ಅದಕ್ಕೆ ಅವನು, “ಈಗ ಯೆಹೋವ ದೇವರು ನಮಗೆ ಸ್ಥಳವನ್ನು ಮಾಡಿದ್ದಾರೆ. ನಾವು ಈ ದೇಶದಲ್ಲಿ ಅಭಿವೃದ್ಧಿ ಹೊಂದುವೆವು,” ಎಂದು ಹೇಳಿ ಅದಕ್ಕೆ, ರೆಹೋಬೋತ್, ಎಂದು ಹೆಸರಿಟ್ಟನು.
Explore ಆದಿಕಾಂಡ 26:22
4
ಆದಿಕಾಂಡ 26:2
ಆಗ ಯೆಹೋವ ದೇವರು ಅವನಿಗೆ ಕಾಣಿಸಿಕೊಂಡು, “ಈಜಿಪ್ಟಿಗೆ ಇಳಿದು ಹೋಗಬೇಡ. ನಾನು ನಿನಗೆ ಹೇಳುವ ದೇಶದಲ್ಲಿ ವಾಸವಾಗಿರು.
Explore ಆದಿಕಾಂಡ 26:2
5
ಆದಿಕಾಂಡ 26:25
ಆಗ ಇಸಾಕನು ಅಲ್ಲಿ ಬಲಿಪೀಠವನ್ನು ಕಟ್ಟಿ, ಯೆಹೋವ ದೇವರ ಹೆಸರನ್ನು ಹೇಳಿಕೊಂಡು, ತನ್ನ ಗುಡಾರವನ್ನು ಹಾಕಿದನು. ಆಗ ಇಸಾಕನ ಸೇವಕರು ಅಲ್ಲಿ ಒಂದು ಬಾವಿಯನ್ನು ಅಗೆದರು.
Explore ಆದಿಕಾಂಡ 26:25
Home
Bible
Plans
Videos