1
ಯೋಹಾನ 11:25-26
ಕನ್ನಡ ಸಮಕಾಲಿಕ ಅನುವಾದ
ಯೇಸು ಆಕೆಗೆ, “ನಾನೇ ಪುನರುತ್ಥಾನವೂ ಜೀವವೂ ಆಗಿದ್ದೇನೆ. ನನ್ನಲ್ಲಿ ನಂಬಿಕೆ ಇಡುವವರು ಸತ್ತರೂ ಬದುಕುವರು. ಜೀವಿಸುವ ಪ್ರತಿಯೊಬ್ಬರೂ ನನ್ನಲ್ಲಿ ನಂಬಿಕೆಯಿಟ್ಟರೆ, ಅವರು ಎಂದಿಗೂ ಸಾಯುವುದಿಲ್ಲ. ಇದನ್ನು ನೀನು ನಂಬುತ್ತೀಯಾ?” ಎಂದು ಕೇಳಿದ್ದಕ್ಕೆ
Compare
Explore ಯೋಹಾನ 11:25-26
2
ಯೋಹಾನ 11:40
ಯೇಸು ಆಕೆಗೆ, “ನೀನು ನಂಬಿದರೆ ದೇವರ ಮಹಿಮೆಯನ್ನು ಕಾಣುವೆ ಎಂದು ನಾನು ನಿನಗೆ ಹೇಳಲಿಲ್ಲವೇ?” ಎಂದರು.
Explore ಯೋಹಾನ 11:40
3
ಯೋಹಾನ 11:35
ಯೇಸು ಕಣ್ಣೀರಿಟ್ಟರು.
Explore ಯೋಹಾನ 11:35
4
ಯೋಹಾನ 11:4
ಯೇಸು ಅದನ್ನು ಕೇಳಿ, “ಈ ಕಾಯಿಲೆಯು ಮರಣಕ್ಕಾಗಿಯಲ್ಲ. ದೇವರ ಮಹಿಮೆಗಾಗಿಯೇ ಬಂದದ್ದು. ಇದರಿಂದ ದೇವರ ಪುತ್ರನಿಗೆ ಮಹಿಮೆಯಾಗುವುದು,” ಎಂದು ಹೇಳಿದರು.
Explore ಯೋಹಾನ 11:4
5
ಯೋಹಾನ 11:43-44
ಯೇಸು ಹೀಗೆ ಹೇಳಿದ ಮೇಲೆ, “ಲಾಜರನೇ, ಹೊರಗೆ ಬಾ,” ಎಂದು ಗಟ್ಟಿಯಾದ ಸ್ವರದಿಂದ ಕೂಗಿದರು. ಆಗ ಸತ್ತಿದ್ದವನು ಹೊರಗೆ ಬಂದನು. ಅವನ ಕೈಕಾಲುಗಳು ಶವವಸ್ತ್ರದಿಂದ ಕಟ್ಟಿದ್ದವು, ಮುಖಕ್ಕೆ ವಸ್ತ್ರ ಸುತ್ತಲಾಗಿತ್ತು. ಯೇಸು ಅಲ್ಲಿದ್ದವರಿಗೆ, “ಕಟ್ಟುಗಳನ್ನು ಬಿಚ್ಚಿ ಅವನನ್ನು ಹೋಗಲು ಬಿಡಿ,” ಎಂದು ಹೇಳಿದರು.
Explore ಯೋಹಾನ 11:43-44
6
ಯೋಹಾನ 11:38
ಯೇಸು ತಿರುಗಿ ತಮ್ಮಲ್ಲಿ ನೊಂದುಕೊಳ್ಳುತ್ತಾ ಸಮಾಧಿಗೆ ಬಂದರು. ಅದು ಗವಿಯಾಗಿತ್ತು; ಒಂದು ಕಲ್ಲು ಅದರ ಬಾಗಿಲಿಗೆ ಮುಚ್ಚಲಾಗಿತ್ತು.
Explore ಯೋಹಾನ 11:38
7
ಯೋಹಾನ 11:11
ಇದನ್ನು ಹೇಳಿದ ತರುವಾಯ ಯೇಸು ಅವರಿಗೆ, “ನಮ್ಮ ಸ್ನೇಹಿತ ಲಾಜರನು ನಿದ್ರೆ ಮಾಡುತ್ತಿದ್ದಾನೆ. ಆದರೆ ನಾನು ಹೋಗಿ ಅವನನ್ನು ಎಬ್ಬಿಸಬೇಕು,” ಎಂದರು.
Explore ಯೋಹಾನ 11:11
Home
Bible
Plans
Videos