1
ಯೋಹಾನ 14:27
ಕನ್ನಡ ಸಮಕಾಲಿಕ ಅನುವಾದ
ನಾನು ಸಮಾಧಾನವನ್ನು ನಿಮಗೆ ಬಿಟ್ಟು ಹೋಗುತ್ತೇನೆ. ನನ್ನ ಸಮಾಧಾನವನ್ನು ನಾನು ನಿಮಗೆ ಕೊಡುತ್ತೇನೆ. ಲೋಕವು ಕೊಡುವಂತೆ ನಾನು ನಿಮಗೆ ಕೊಡುವುದಿಲ್ಲ. ನಿಮ್ಮ ಹೃದಯವು ಕಳವಳಗೊಳ್ಳದಿರಲಿ, ಅಂಜದಿರಲಿ.
Compare
Explore ಯೋಹಾನ 14:27
2
ಯೋಹಾನ 14:6
ಯೇಸು ಅವನಿಗೆ, “ನಾನೇ ಮಾರ್ಗವೂ ಸತ್ಯವೂ ಜೀವವೂ ಆಗಿದ್ದೇನೆ. ನನ್ನ ಮೂಲಕವಾಗಿ ಹೊರತು ಯಾರೂ ತಂದೆಯ ಬಳಿಗೆ ಬರಲಾರರು.
Explore ಯೋಹಾನ 14:6
3
ಯೋಹಾನ 14:1
“ನಿಮ್ಮ ಹೃದಯವು ಕಳವಳಗೊಳ್ಳದಿರಲಿ, ನೀವು ದೇವರನ್ನು ನಂಬಿರಿ; ನನ್ನನ್ನೂ ನಂಬಿರಿ.
Explore ಯೋಹಾನ 14:1
4
ಯೋಹಾನ 14:26
ತಂದೆಯು ನನ್ನ ಹೆಸರಿನಲ್ಲಿ ಕಳುಹಿಸಿಕೊಡುವ ಸಹಾಯಕ ‘ಪವಿತ್ರಾತ್ಮರು’ ಎಲ್ಲವನ್ನೂ ನಿಮಗೆ ಬೋಧಿಸಿ ನಾನು ನಿಮಗೆ ಹೇಳಿದ್ದನ್ನೆಲ್ಲಾ ನಿಮ್ಮ ನೆನಪಿಗೆ ತರುವರು.
Explore ಯೋಹಾನ 14:26
5
ಯೋಹಾನ 14:21
ನನ್ನ ಆಜ್ಞೆಗಳನ್ನು ಹೊಂದಿ ಅವುಗಳನ್ನು ಕೈಗೊಳ್ಳುವವರೇ ನನ್ನನ್ನು ಪ್ರೀತಿಸುವವರು. ನನ್ನನ್ನು ಪ್ರೀತಿಸುವವನು ತನ್ನ ತಂದೆಗೆ ಪ್ರಿಯನಾಗಿರುವನು. ನಾನು ಅವನನ್ನು ಪ್ರೀತಿಸಿ ಅವನಿಗೆ ನನ್ನನ್ನು ಪ್ರಕಟಿಸಿಕೊಳ್ಳುವೆನು,” ಎಂದು ಹೇಳಿದರು.
Explore ಯೋಹಾನ 14:21
6
ಯೋಹಾನ 14:16-17
ನಾನು ತಂದೆಯನ್ನು ಕೇಳಿಕೊಳ್ಳುವೆನು. ಆಗ ತಂದೆ ನಿಮಗೆ ಬೇರೊಬ್ಬ ಸಹಾಯಕರನ್ನು ಸದಾಕಾಲವೂ ನಿಮ್ಮೊಂದಿಗೆ ಇರುವುದಕ್ಕೆ ಕೊಡುವರು. ಅವರೇ ಸತ್ಯದ ಆತ್ಮರಾಗಿದ್ದಾರೆ. ಲೋಕವು ಅವರನ್ನು ನೋಡದೆಯೂ ತಿಳಿಯದೆಯೂ ಇರುವುದರಿಂದ ಸತ್ಯದ ಆತ್ಮರಾಗಿರುವ ಅವರನ್ನು ಸ್ವೀಕರಿಸಲಾರದು. ನೀವು ಅವರನ್ನು ಬಲ್ಲಿರಿ. ಏಕೆಂದರೆ ಅವರು ನಿಮ್ಮೊಂದಿಗಿರುವರು ಮತ್ತು ನಿಮ್ಮೊಳಗೂ ನೆಲೆಸಿರುವರು.
Explore ಯೋಹಾನ 14:16-17
7
ಯೋಹಾನ 14:13-14
ನನ್ನ ಹೆಸರಿನಲ್ಲಿ ನೀವು ಏನೇನು ಕೇಳಿಕೊಳ್ಳುವಿರೋ ಅದನ್ನು ನಾನು ಮಾಡುವೆನು. ಹೀಗೆ ತಂದೆಗೆ ಪುತ್ರನಲ್ಲಿ ಮಹಿಮೆ ಉಂಟಾಗುವುದು. ನೀವು ನನ್ನ ಹೆಸರಿನಲ್ಲಿ ನನ್ನನ್ನು ಏನಾದರೂ ಕೇಳಿಕೊಂಡರೆ ನಾನು ಅದನ್ನು ಮಾಡುವೆನು.
Explore ಯೋಹಾನ 14:13-14
8
ಯೋಹಾನ 14:15
“ನೀವು ನನ್ನನ್ನು ಪ್ರೀತಿಸುವವರಾದರೆ ನನ್ನ ಆಜ್ಞೆಗಳನ್ನು ಅನುಸರಿಸುವಿರಿ.
Explore ಯೋಹಾನ 14:15
9
ಯೋಹಾನ 14:2
ನನ್ನ ತಂದೆಯ ಮನೆಯಲ್ಲಿ ಅನೇಕ ವಾಸಸ್ಥಾನಗಳಿವೆ. ಇಲ್ಲದಿದ್ದರೆ ನಾನು ನಿಮಗೆ ಹೇಳುತ್ತಿದ್ದೆನು. ನಾನು ನಿಮಗಾಗಿ ಸ್ಥಳವನ್ನು ಸಿದ್ಧಮಾಡುವುದಕ್ಕೆ ಹೋಗುತ್ತೇನಲ್ಲಾ.
Explore ಯೋಹಾನ 14:2
10
ಯೋಹಾನ 14:3
ನಾನು ಹೋಗಿ ನಿಮಗಾಗಿ ಸ್ಥಳವನ್ನು ಸಿದ್ಧಮಾಡಿದ ಮೇಲೆ ಪುನಃ ಬಂದು ನಿಮ್ಮನ್ನು ನನ್ನ ಬಳಿಗೆ ಸೇರಿಸಿಕೊಳ್ಳುವೆನು. ಆಗ ನಾನಿರುವಲ್ಲಿ ನೀವು ಸಹ ಇರುವಿರಿ.
Explore ಯೋಹಾನ 14:3
11
ಯೋಹಾನ 14:5
ಆಗ ತೋಮನು ಯೇಸುವಿಗೆ, “ಸ್ವಾಮೀ, ನೀವು ಎಲ್ಲಿಗೆ ಹೋಗುತ್ತೀರೋ ನಮಗೆ ತಿಳಿಯದು. ಆದ್ದರಿಂದ ನಮಗೆ ಮಾರ್ಗವು ಹೇಗೆ ತಿಳಿದೀತು?” ಎಂದನು.
Explore ಯೋಹಾನ 14:5
Home
Bible
Plans
Videos