ಆದಿಕಾಂಡ 22
22
ಅಬ್ರಹಾಮನು ತನ್ನ ಮಗನನ್ನು ಅರ್ಪಿಸುತ್ತಿರುವಾಗ ದೇವರು ಅವನನ್ನು ತಡೆದು ಆಶೀರ್ವದಿಸಿದ್ದು
1ಈ ಸಂಗತಿಗಳು ಆದ ಮೇಲೆ ದೇವರು ಅಬ್ರಹಾಮನನ್ನು ಪರಿಶೋಧಿಸಿದನು. ಹೇಗಂದರೆ ಆತನು ಅವನನ್ನು - ಅಬ್ರಹಾಮನೇ ಎಂದು ಕರೆಯಲು ಅವನು - ಇಗೋ, ಇದ್ದೇನೆ ಅಂದನು. 2ಆಗಲಾತನು - ನಿನಗೆ ಪ್ರಿಯನಾಗಿರುವ ಒಬ್ಬನೇ ಮಗನಾದ ಇಸಾಕನನ್ನು ತೆಗೆದುಕೊಂಡು ಮೊರೀಯ ದೇಶಕ್ಕೆ ಹೋಗಿ ಅಲ್ಲಿ ಅವನನ್ನು ನಾನು ಹೇಳುವ ಒಂದು ಬೆಟ್ಟದ ಮೇಲೆ ಸರ್ವಾಂಗಹೋಮವಾಗಿ ಅರ್ಪಿಸಬೇಕು ಅಂದನು. 3ಬೆಳಿಗ್ಗೆ ಅಬ್ರಹಾಮನು ಎದ್ದು ಕತ್ತೆಗೆ ತಡಿಹಾಕಿಸಿ ಯಜ್ಞಕ್ಕೆ ಬೇಕಾದ ಕಟ್ಟಿಗೆಯನ್ನು ಒಡಿಸಿ ತನ್ನ ಸೇವಕರಲ್ಲಿ ಇಬ್ಬರನ್ನೂ ತನ್ನ ಮಗನಾದ ಇಸಾಕನನ್ನೂ ಕರೆದುಕೊಂಡು ದೇವರು ಹೇಳಿದ ಸ್ಥಳಕ್ಕೆ ಹೊರಟನು. 4ಮೂರನೆಯ ದಿನದಲ್ಲಿ ಅಬ್ರಹಾಮನು ಕಣ್ಣೆತ್ತಿ ನೋಡುವಾಗ ಆ ಸ್ಥಳವು ದೂರದಲ್ಲಿ ಕಾಣಿಸಲು 5ಅವನು ತನ್ನ ಸೇವಕರಿಗೆ - ನೀವು ಇಲ್ಲೇ ಕತ್ತೆಯ ಬಳಿಯಲ್ಲಿರ್ರಿ; ನಾನೂ ನನ್ನ ಮಗನೂ ಅಲ್ಲಿಗೆ ಹೋಗಿ ದೇವಾರಾಧನೆ ಮಾಡಿಕೊಂಡು ನಿಮ್ಮ ಬಳಿಗೆ ತಿರಿಗಿ ಬರುತ್ತೇವೆ ಎಂದು ಹೇಳಿದನು. 6ಆಗ ಅಬ್ರಹಾಮನು ಯಜ್ಞಕ್ಕೆ ಬೇಕಾದ ಕಟ್ಟಿಗೆಯನ್ನು ತನ್ನ ಮಗನಾದ ಇಸಾಕನ ಮೇಲೆ ಹೊರಿಸಿ ತನ್ನ ಕೈಯಲ್ಲೇ ಬೆಂಕಿಯನ್ನೂ ಕತ್ತಿಯನ್ನೂ ತೆಗೆದುಕೊಂಡನಂತರ ಅವರಿಬ್ಬರೂ ಹೊರಟು ಹೋದರು. 7ಹೋಗುವಾಗ ಇಸಾಕನು ತನ್ನ ತಂದೆಯಾದ ಅಬ್ರಹಾಮನಿಗೆ - ಅಪ್ಪಾ ಎಂದು ಕರೆಯಲು ಅಬ್ರಹಾಮನು - ಏನು ಮಗನೇ ಅಂದನು. ಇಸಾಕನು - ಇಗೋ, ಬೆಂಕಿಯೂ ಕಟ್ಟಿಗೆಯೂ ಉಂಟು; ಆದರೆ ಹೋಮಕ್ಕೆ ಬೇಕಾದ ಕುರಿ ಎಲ್ಲಿ ಎಂದು ಕೇಳಿದ್ದಕ್ಕೆ ಅಬ್ರಹಾಮನು - 8ಮಗನೇ, ಹೋಮಕ್ಕೆ ಬೇಕಾದ ಕುರಿಯನ್ನು ದೇವರೇ ಒದಗಿಸುವನು ಅಂದನು. ಹೀಗೆ ಅವರಿಬ್ಬರೂ ಹೋದರು. 9ದೇವರು ಹೇಳಿದ ಸ್ಥಳಕ್ಕೆ ಅವರು ಸೇರಿದಾಗ ಅಬ್ರಹಾಮನು ಯಜ್ಞವೇದಿಯನ್ನು ಕಟ್ಟಿ ಕಟ್ಟಿಗೆಯನ್ನು ಒಟ್ಟಿ ತನ್ನ ಮಗನಾದ ಇಸಾಕನ ಕೈಕಾಲುಗಳನ್ನು ಬಿಗಿದು ಅವನನ್ನು ವೇದಿಯಲ್ಲಿ ಕಟ್ಟಿಗೆಯ ಮೇಲೆ ಇಟ್ಟನು. 10ಆದರೆ ತನ್ನ ಮಗನನ್ನು ವಧಿಸುವದಕ್ಕೆ ಅವನು 11ಕೈಚಾಚಿ ಕತ್ತಿಯನ್ನು ಹಿಡಿದುಕೊಳ್ಳಲು ಯೆಹೋವನ ದೂತನು ಆಕಾಶದೊಳಗಿಂದ - ಅಬ್ರಹಾಮನೇ, ಅಬ್ರಹಾಮನೇ ಎಂದು ಅವನನ್ನು ಕರೆದನು. ಅದಕ್ಕೆ ಅಬ್ರಹಾಮನು - ಇಗೋ, ಇದ್ದೇನೆ ಅಂದನು. 12ಆ ದೂತನು ಅವನಿಗೆ - ನಿನ್ನ ಹುಡುಗನ ಮೇಲೆ ಕೈಹಾಕಬೇಡ, ಅವನಿಗೆ ಏನೂ ಮಾಡಬೇಡ. ನೀನು ನಿನ್ನ ಒಬ್ಬನೇ ಮಗನನ್ನಾದರೂ ನನಗೆ ಸಮರ್ಪಿಸುವದಕ್ಕೆ ಹಿಂದೆಗೆಯಲಿಲ್ಲವಾದ್ದರಿಂದ ನೀನು ದೇವರಲ್ಲಿ ಭಯಭಕ್ತಿಯುಳ್ಳವನೆಂಬದು ಈಗ ತೋರಬಂತು ಎಂದು ಹೇಳಿದನು. 13ಅಬ್ರಹಾಮನು ಕಣ್ಣೆತ್ತಿ ನೋಡುವಾಗ ತನ್ನ ಹಿಂದುಗಡೆ ಒಂದು ಟಗರು ಪೊದೆಯಲ್ಲಿ ಕೊಂಬುಗಳಿಂದ ಸಿಕ್ಕಿಕೊಂಡಿತ್ತು. ಅವನು ಹೋಗಿ ಅದನ್ನು ಹಿಡಿದುತಂದು ತನ್ನ ಮಗನಿಗೆ ಬದಲಾಗಿ ಹೋಮಮಾಡಿದನು. 14ಆ ಸ್ಥಳಕ್ಕೆ ಯೆಹೋವ#22.14 ಯೆಹೋವ ಯೀರೆ ಅಂದರೆ ಯೆಹೋವನು ಒದಗಿಸುವನು. ಯೀರೆ ಎಂದು ಹೆಸರಿಟ್ಟನು. ಯೆಹೋವನ ಬೆಟ್ಟದಲ್ಲಿ ಒದಗುವದು#22.14 ಅಥವಾ, ಕಾಣಿಸುವನು. ಎಂಬದಾಗಿ ಇಂದಿನವರೆಗೂ ಹೇಳುವದುಂಟಲ್ಲಾ.
15ಯೆಹೋವನ ದೂತನು ಆಕಾಶದೊಳಗಿಂದ ಎರಡನೆಯ ಸಾರಿ ಅಬ್ರಹಾಮನನ್ನು ಕರೆದು ಅವನಿಗೆ - 16ಯೆಹೋವನು ನುಡಿದದ್ದನ್ನು ಕೇಳು; ನೀನು ನಿನ್ನ ಒಬ್ಬನೇ ಮಗನನ್ನು ಸಮರ್ಪಿಸುವದಕ್ಕೆ ಹಿಂದೆಗೆಯದೆ ಹೋದದ್ದರಿಂದ ನಾನು ನಿನ್ನನ್ನು ಆಶೀರ್ವದಿಸೇ ಆಶೀರ್ವದಿಸುವೆನು; 17ನಿನ್ನ ಸಂತತಿಯನ್ನು ಹೆಚ್ಚಿಸೇ ಹೆಚ್ಚಿಸುವೆನು; ಅದನ್ನು ಆಕಾಶದ ನಕ್ಷತ್ರಗಳಂತೆಯೂ ಸಮುದ್ರತೀರದಲ್ಲಿರುವ ಉಸುಬಿನಂತೆಯೂ ಅಸಂಖ್ಯವಾಗಿ ಮಾಡುವೆನು; ಅವರು ಶತ್ರುಗಳ ಪಟ್ಟಣಗಳನ್ನು ಸ್ವಾಧೀನಮಾಡಿಕೊಳ್ಳುವರು. 18ನೀನು ನನ್ನ ಮಾತನ್ನು ಕೇಳಿದ್ದರಿಂದ ಭೂವಿುಯ#22.18 ಅಥವಾ: ಎಲ್ಲಾ ಜನಾಂಗಗಳೂ ನಿನ್ನ ಸಂತತಿಯ ಭಾಗ್ಯವೇ ತಮಗೂ ಆಗಬೇಕೆಂದು ಕೋರುವವು; ಆದಿ. 12.3; 18.18; 26.4; ಗಲಾ. 3.8; ಅ. ಕೃ. 3.25. ಎಲ್ಲಾ ಜನಾಂಗಗಳಿಗೂ ನಿನ್ನ ಸಂತತಿಯ ಮೂಲಕ ಆಶೀರ್ವಾದವುಂಟಾಗುವದು ಎಂಬದಾಗಿ ಯೆಹೋವನು ತನ್ನಾಣೆಯಿಟ್ಟು ಹೇಳಿದ್ದಾನೆ ಅಂದನು.
19ತರುವಾಯ ಅಬ್ರಹಾಮನು ತನ್ನ ಸೇವಕರ ಬಳಿಗೆ ತಿರಿಗಿ ಬಂದನು. ಅವರು ಹೊರಟು ಅವನ ಜೊತೆಯಲ್ಲಿ ಬೇರ್ಷೆಬಕ್ಕೆ ಹೋದರು. ಅಬ್ರಹಾಮನು ಬೇರ್ಷೆಬದಲ್ಲಿ ವಾಸವಾಗಿದ್ದನು.
ಅಬ್ರಹಾಮನ ತಮ್ಮನ ಮಕ್ಕಳು
20ಇವುಗಳಾದ ಮೇಲೆ ಅಬ್ರಹಾಮನು ತನ್ನ ತಮ್ಮನಾದ ನಾಹೋರನಿಗೆ ವಿುಲ್ಕಳಲ್ಲಿ ಮಕ್ಕಳು ಹುಟ್ಟಿದರೆಂದು ವರ್ತಮಾನವನ್ನು ಕೇಳಿದನು. 21ಅವರು ಯಾರಾರಂದರೆ - ಅವನ ಚೊಚ್ಚಲನಾದ ಊಚ್, ಇವನ ತಮ್ಮನಾದ ಬೂಜ್, ಅರಾಮನ ತಂದೆಯಾದ ಕೆಮೂವೇಲ್, ಕೆಸೆದ್, ಹಜೋ, ಪಿಲ್ದಾಷ್, ಇದ್ಲಾಫ್, ಬೆತೂವೇಲ್ ಎಂಬಿವರೇ. 22ಬೆತೂವೇಲನು ರೆಬೆಕ್ಕಳನ್ನು ಪಡೆದನು. 23ಈ ಎಂಟು ಮಂದಿಯನ್ನು ವಿುಲ್ಕಳು ಅಬ್ರಹಾಮನ ತಮ್ಮನಾದ ನಾಹೋರನಿಗೆ ಹೆತ್ತಳು. 24ಇದಲ್ಲದೆ ಅವನ ಉಪಪತ್ನಿಯಾದ ರೂಮಳೆಂಬವಳು ಟೆಬಹ, ಗಹಮ್, ತಹಷ್, ಮಾಕಾ ಎಂಬವರನ್ನು ಹೆತ್ತಳು.
Currently Selected:
ಆದಿಕಾಂಡ 22: KANJV-BSI
Highlight
Share
Copy
Want to have your highlights saved across all your devices? Sign up or sign in
Kannada J.V. Bible © The Bible Society of India, 2016.
Used by permission. All rights reserved worldwide.

: