ಲೂಕ. 19
19
ಜೆರಿಕೊವಿನ ಜಕ್ಕಾಯ
1ಯೇಸುಸ್ವಾಮಿ ಜೆರಿಕೊ ಪಟ್ಟಣವನ್ನು ಪ್ರವೇಶಿಸಿ ಅದರ ಬೀದಿಗಳಲ್ಲಿ ಹಾದುಹೋಗುತ್ತಿದ್ದರು. 2ಅಲ್ಲಿ ಜಕ್ಕಾಯ ಎಂಬವನಿದ್ದನು. ಅವನು ಸುಂಕವಸೂಲಿಯವರ ಮುಖಂಡ ಹಾಗೂ ಧನಾಢ್ಯ. 3ಯೇಸು ಯಾರೆಂದು ನೋಡಬೇಕೆಂಬ ಅಪೇಕ್ಷೆ ಅವನದು. ಆದರೆ ಅವನು ಗಿಡ್ಡ ವ್ಯಕ್ತಿ. ಜನಜಂಗುಳಿಯ ಮಧ್ಯೆ ಯೇಸುವನ್ನು ನೋಡಲು ಪ್ರಯತ್ನಿಸಿದರೂ ಅವನಿಂದಾಗಲಿಲ್ಲ. 4ಆದಕಾರಣ ಮುಂದಕ್ಕೆ ಓಡಿಹೋಗಿ ಯೇಸು ಬರುತ್ತಿದ್ದ ಆ ಮಾರ್ಗದಲ್ಲಿ ಒಂದು ಆಲದ ಮರವನ್ನು ಕಂಡು ಅದನ್ನು ಹತ್ತಿದನು. 5ಯೇಸು ಆ ಸ್ಥಳಕ್ಕೆ ಬಂದು, ತಲೆಯೆತ್ತಿ ನೋಡಿ, “ಜಕ್ಕಾಯಾ, ಒಡನೆ ಇಳಿದು ಬಾ; ಈ ದಿನ ನಿನ್ನ ಮನೆಯಲ್ಲಿ ನಾನು ತಂಗಬೇಕು,” ಎಂದರು. 6ಜಕ್ಕಾಯನು ತಕ್ಷಣವೇ ಇಳಿದುಬಂದು ಯೇಸುವನ್ನು ಸಂತೋಷದಿಂದ ಸ್ವಾಗತಿಸಿದನು. 7ಇದನ್ನು ನೋಡಿದವರೆಲ್ಲರು, “ಯೇಸು ಪಾಪಿಷ್ಠನ ಮನೆಗೆ ಅತಿಥಿಯಾಗಿ ಹೋಗುತ್ತಾನಲ್ಲಾ?” ಎಂದು ಗೊಣಗುಟ್ಟಿದರು.
8ಜಕ್ಕಾಯನು ನೆರೆದಿದ್ದ ಜನರ ಮುಂದೆ ಎದ್ದುನಿಂತು ಯೇಸುವಿಗೆ, “ಪ್ರಭುವೇ, ನನ್ನ ಆಸ್ತಿಪಾಸ್ತಿಯಲ್ಲಿ ಅರ್ಧಭಾಗವನ್ನು ಬಡಬಗ್ಗರಿಗೆ ಕೊಟ್ಟುಬಿಡುತ್ತೇನೆ. ಯಾರಿಗಾದರೂ ಮೋಸಮಾಡಿ ಅವರಿಂದೇನಾದರೂ ನಾನು ಕಸಿದುಕೊಂಡಿದ್ದರೆ ಅದಕ್ಕೆ ನಾಲ್ಕರಷ್ಟು ಹಿಂದಕ್ಕೆ ಕೊಡುತ್ತೇನೆ,” ಎಂದನು. 9ಆಗ ಯೇಸು, “ಇಂದು, ಈ ಮನೆ ಉದ್ಧಾರವಾಯಿತು. ಇವನು ಕೂಡ ಅಬ್ರಹಾಮನ ವಂಶಕ್ಕೆ ಸೇರಿದವನಲ್ಲವೆ? 10ನರಪುತ್ರನು ಬಂದಿರುವುದು ಪತಿತರನ್ನು ಅರಸಿ ಉದ್ಧರಿಸುವುದಕ್ಕೆ,” ಎಂದು ಹೇಳಿದರು.
ವೃದ್ಧಿಯಾಗದ ವ್ಯವಹಾರ ರದ್ದು
(ಮತ್ತಾ. 25:14-30)
11ಯೇಸುಸ್ವಾಮಿ ಈಗ ಜೆರುಸಲೇಮಿಗೆ ಸಮೀಪದಲ್ಲೇ ಇದ್ದರು. ಅವರ ಮಾತುಗಳನ್ನು ಕೇಳುತ್ತಿದ್ದ ಜನರು ದೇವರ ಸಾಮ್ರಾಜ್ಯ ಇದೀಗಲೇ ಪ್ರತ್ಯಕ್ಷವಾಗುವುದೆಂದು ಭಾವಿಸಿದ್ದರು. 12ಈ ಕಾರಣ ಯೇಸು ಅವರಿಗೆ ಒಂದು ಸಾಮತಿಯನ್ನು ಹೇಳಿದರು: “ಕುಲೀನನೊಬ್ಬ ರಾಜಪದವಿಯನ್ನು ಗಳಿಸಿಬರಲು ದೂರದ ರಾಜಧಾನಿಗೆ ಹೊರಟ. 13ಹೊರಡುವಾಗ ತನ್ನ ಹತ್ತುಮಂದಿ ಸೇವಕರನ್ನು ಕರೆದು, ಒಬ್ಬೊಬ್ಬನಿಗೂ ಒಂದರಂತೆ ಹತ್ತು ಚಿನ್ನದ ನಾಣ್ಯಗಳನ್ನು ಕೊಟ್ಟು, “ನಾನು ಬರುವತನಕ ವ್ಯಾಪಾರ ಮಾಡಿಕೊಂಡಿರಿ,” ಎಂದು ಹೇಳಿ ಹೋದ. 14ಅವನ ನಾಡಿಗರಾದರೋ ಅವನನ್ನು ದ್ವೇಷಿಸುತ್ತಿದ್ದರು. ‘ಇವನು ನಮಗೆ ರಾಜನಾಗುವುದು ಬೇಡ,’ ಎಂದು ತಿಳಿಸಲು ಅವನ ಹಿಂದೆಯೇ ತಮ್ಮ ಪ್ರತಿನಿಧಿಗಳನ್ನು ಕಳುಹಿಸಿದರು.
15“ಆದರೂ ಅವನು ರಾಜಪದವಿಯನ್ನು ಪಡೆದು ಹಿಂದಿರುಗಿ ಬಂದ. ತನ್ನಿಂದ ಹಣಪಡೆದ ಸೇವಕರು ವ್ಯಾಪಾರಮಾಡಿ ಎಷ್ಟೆಷ್ಟು ಲಾಭಗಳಿಸಿದ್ದಾರೆಂದು ತಿಳಿದುಕೊಳ್ಳುವುದಕ್ಕಾಗಿ ಅವರನ್ನು ಕೂಡಲೇ ತನ್ನ ಬಳಿಗೆ ಕರೆತರಲು ಆಜ್ಞಾಪಿಸಿದ. 16ಮೊದಲನೆಯವನು ಮುಂದೆ ಬಂದು, ‘ಪ್ರಭುವೇ, ನಿಮ್ಮ ಒಂದು ನಾಣ್ಯದಿಂದ ನಾನು ಹತ್ತು ನಾಣ್ಯಗಳನ್ನು ಸಂಪಾದಿಸಿದ್ದೇನೆ,’ ಎಂದ. 17ಅದಕ್ಕೆ ಅವನು, ‘ಭಲಾ, ನೀನು ಒಳ್ಳೆಯ ಸೇವಕ, ಸ್ವಲ್ಪದರಲ್ಲಿ ನೀನು ಪ್ರಾಮಾಣಿಕನಾಗಿದ್ದೆ. ಆದ್ದರಿಂದ ಹತ್ತು ಪಟ್ಟಣಗಳಿಗೆ ಅಧಿಕಾರಿಯಾಗಿರು,’ ಎಂದ. 18ಎರಡನೆಯ ಸೇವಕನು ಬಂದು, ‘ಪ್ರಭುವೇ, ನೀವು ಕೊಟ್ಟ ಒಂದು ನಾಣ್ಯದಿಂದ ಐದು ನಾಣ್ಯಗಳನ್ನು ಸಂಪಾದಿಸಿದ್ದೇನೆ,’ ಎಂದ. 19ಅದಕ್ಕೆ ರಾಜ, ‘ನೀನು ಐದು ಪಟ್ಟಣಗಳಿಗೆ ಅಧಿಪತಿಯಾಗಿರು,’ ಎಂದ.
20“ಬಳಿಕ ಮತ್ತೊಬ್ಬ ಸೇವಕನು ಬಂದು, ‘ಇಗೋ, ಪ್ರಭುವೇ, ನಿಮ್ಮ ಚಿನ್ನದ ನಾಣ್ಯ; ನಿಮಗೆ ಭಯಪಟ್ಟು ಇದನ್ನು ಬಟ್ಟೆಯಲ್ಲಿ ಭದ್ರವಾಗಿ ಕಟ್ಟಿ ಇಟ್ಟಿದ್ದೆ. 21ಏಕೆಂದರೆ, ನೀವು ಕಠಿಣ ಮನುಷ್ಯರು; ನೀವು ಕೂಡಿಡದ್ದನ್ನು ಕೊಂಡುಹೋಗುತ್ತೀರಿ, ಬಿತ್ತದಿದ್ದನ್ನು ಕೊಯಿಲು ಮಾಡುತ್ತೀರಿ,’ ಎಂದ. 22ರಾಜ ಅವನನ್ನು ನೋಡಿ, ‘ಎಲಾ ದುಷ್ಟ ಸೇವಕನೇ, ನೀನು ಆಡಿದ ಮಾತಿನಿಂದಲೇ ನಿನಗೆ ತೀರ್ಪುಕೊಡುತ್ತೇನೆ. ನಾನು ಕೂಡಿಡದ್ದನ್ನು ಕೊಂಡುಹೋಗುವ, ಬಿತ್ತದಿದ್ದನ್ನು ಕೊಯಿಲುಮಾಡುವ ಕಠಿಣ ಮನುಷ್ಯನೆಂದು ನಿನಗೆ ತಿಳಿದಿತ್ತು ಅಲ್ಲವೆ? 23ಹಾಗಾದರೆ ನನ್ನ ಹಣವನ್ನೇಕೆ ಬಡ್ಡಿ ಅಂಗಡಿಯಲ್ಲಿ ಹಾಕಿಡಲಿಲ್ಲ? ನಾನು ಬಂದು ಬಡ್ಡಿಸಮೇತ ನನ್ನ ಅಸಲನ್ನು ತೆಗೆದುಕೊಳ್ಳುತ್ತಿದ್ದೆನಲ್ಲಾ,’ ಎಂದು ಹೇಳಿ 24ಪರಿಚಾರಕರಿಗೆ, ‘ಇವನಿಂದ ಆ ಚಿನ್ನದ ನಾಣ್ಯವನ್ನು ಕಿತ್ತು ಹತ್ತು ನಾಣ್ಯಗಳುಳ್ಳವನಿಗೆ ಕೊಡಿ,’ ಎಂದ. 25ಅದಕ್ಕವರು, ‘ಪ್ರಭುವೇ, ಅವನಲ್ಲಿ ಈಗಾಗಲೇ ಹತ್ತು ನಾಣ್ಯಗಳಿವೆಯಲ್ಲಾ?’ ಎಂದರು. 26ಆಗ ರಾಜ, ‘ಉಳ್ಳ ಪ್ರತಿಯೊಬ್ಬನಿಗೆ ಇನ್ನೂ ಹೆಚ್ಚಾಗಿ ಕೊಡಲಾಗುತ್ತದೆ, ಇಲ್ಲದವನಿಂದ ಇರುವ ಕಿಂಚಿತ್ತನ್ನೂ ಕಸಿದುಕೊಳ್ಳಲಾಗುತ್ತದೆ, ಇದು ನಿಶ್ಚಯ,’ ಎಂದ.
27“ಅಲ್ಲದೆ, ‘ನಾನು ತಮಗೆ ರಾಜನಾಗುವುದು ಬೇಡವೆಂದ ನನ್ನ ಶತ್ರುಗಳನ್ನು ಇಲ್ಲಿಗೆ ಎಳೆದು ತಂದು ನನ್ನ ಮುಂದೆಯೇ ಸಂಹರಿಸಿರಿ,” ಎಂದ.”
ಜಯಘೋಷದೊಂದಿಗೆ ಜೆರುಸಲೇಮಿಗೆ ಪ್ರವೇಶ
(ಮತ್ತಾ. 21:1-11; ಮಾರ್ಕ. 11:1-11; ಯೊವಾ. 12:12-19)
28ಇದನ್ನೆಲ್ಲಾ ಹೇಳಿ ಆದಮೇಲೆ ಯೇಸುಸ್ವಾಮಿ ಅವರೆಲ್ಲರಿಗಿಂತ ಮುಂದಾಗಿ ನಡೆದು ಜೆರುಸಲೇಮಿನತ್ತ ತೆರಳಿದರು. 29ಓಲಿವ್ ತೋಪಿನ ಗುಡ್ಡದ ಬಳಿಯಿರುವ ಬೆತ್ಫಗೆ ಮತ್ತು ಬೆಥಾನಿಯ ಎಂಬ ಊರುಗಳನ್ನು ಸಮೀಪಿಸಿದಾಗ ತಮ್ಮ ಇಬ್ಬರು ಶಿಷ್ಯರನ್ನು ಕರೆದು, 30“ಎದುರಿಗೆ ಇರುವ ಆ ಹಳ್ಳಿಗೆ ಹೋಗಿರಿ. ನೀವು ಅದನ್ನು ಪ್ರವೇಶಿಸುವಾಗ ಅಲ್ಲೇ ಕಟ್ಟಿಹಾಕಿರುವ ಹೇಸರಗತ್ತೆಯ ಮರಿಯೊಂದನ್ನು ಕಾಣುವಿರಿ. ಈವರೆಗೆ ಅದರ ಮೇಲೆ ಯಾರೂ ಸವಾರಿಮಾಡಿಲ್ಲ. ಅದನ್ನು ಬಿಚ್ಚಿ ಇಲ್ಲಿಗೆ ತನ್ನಿ. 31ಯಾರಾದರೂ ನಿಮ್ಮನ್ನು, ‘ಅದನ್ನೇಕೆ ಬಿಚ್ಚುತ್ತೀರಿ?’ ಎಂದು ಕೇಳಿದರೆ, ‘ಪ್ರಭುವಿಗೆ ಇದು ಬೇಕಾಗಿದೆ’ ಎನ್ನಿರಿ,” ಎಂದು ಹೇಳಿ ಕಳುಹಿಸಿದರು.
32ಆ ಶಿಷ್ಯರಿಬ್ಬರೂ ಹೊರಟು ಯೇಸು ತಮಗೆ ಹೇಳಿದ್ದಂತೆಯೇ ಎಲ್ಲವನ್ನೂ ಕಂಡರು. 33ಆ ಮರಿ ಹೇಸರಗತ್ತೆಯನ್ನು ಬಿಚ್ಚುತ್ತಿದ್ದಾಗ ಅದರ ಯಜಮಾನ, ‘ಅದನ್ನೇಕೆ ಬಿಚ್ಚುತ್ತೀರಿ?’ ಎಂದು ಕೇಳಿದನು. 34ಇದು ಪ್ರಭುವಿಗೆ ಬೇಕಾಗಿದೆ,’ ಎಂದು ಶಿಷ್ಯರು ಉತ್ತರಕೊಟ್ಟು, ಅದನ್ನು ಯೇಸುವಿನ ಬಳಿಗೆ ತಂದರು. 35ಅನಂತರ ತಮ್ಮ ಮೇಲಂಗಿಗಳನ್ನು ಅದರ ಮೇಲೆ ಹಾಸಿ ಯೇಸುವನ್ನು ಕೂರಿಸಿದರು. 36ಅವರು ಮುಂದಕ್ಕೆ ಸಾಗುತ್ತಿದ್ದಂತೆ ಜನರು ತಮ್ಮ ಹೊದಿಕೆಗಳನ್ನು ದಾರಿಯಲ್ಲಿ ಹಾಸಿದರು. 37ಯೇಸು ಜೆರುಸಲೇಮನ್ನು ಸಮೀಪಿಸುತ್ತಾ ಓಲಿವ್ ಗುಡ್ಡದ ಇಳಿಜಾರನ್ನು ಮುಟ್ಟಿದಾಗ ಶಿಷ್ಯಸಮೂಹವೆಲ್ಲವೂ ತಾವು ಕಂಡ ಎಲ್ಲ ಮಹತ್ಕಾರ್ಯಗಳನ್ನು ಕುರಿತು ಹರ್ಷಾವೇಶರಾಗಿ ದೇವರ ಸ್ತುತಿಮಾಡುತ್ತಾ -
38“ಸರ್ವೇಶ್ವರನ ನಾಮದಲಿ ಬರುವ
ಅರಸನಿಗೆ ಜಯಜಯವಾಗಲಿ!
ಶಾಂತಿ ಸ್ವರ್ಗದಲಿ,
ಮಹಿಮೆ ಮಹೋನ್ನತದಲಿ!”
ಎಂದು ಜಯಘೋಷ ಮಾಡುತ್ತಿದ್ದರು.
39ಆಗ ಜನಸಮೂಹದಲ್ಲಿದ್ದ ಫರಿಸಾಯರಲ್ಲಿ ಕೆಲವರು, “ಬೋಧಕರೇ, ಸುಮ್ಮನಿರುವಂತೆ ನಿಮ್ಮ ಶಿಷ್ಯರನ್ನು ಗದರಿಸಿರಿ,” ಎಂದರು. 40ಅದಕ್ಕೆ ಯೇಸು, “ಇವರು ಸುಮ್ಮನಾದರೆ ಈ ಕಲ್ಲುಗಳೇ ಕೂಗತೊಡಗುವುವು ಎಂಬುದು ನಿಮಗೆ ತಿಳಿದಿರಲಿ,” ಎಂದರು.
ಜೆರುಸಲೇಮಿಗಾಗಿ ಕಂಬನಿ
41ಯೇಸುಸ್ವಾಮಿ ಜೆರುಸಲೇಮ್ ಪಟ್ಟಣಕ್ಕೆ ಇನ್ನೂ ಹತ್ತಿರವಾಗಿ ಬಂದು ಅದನ್ನು ನೋಡಿ, 42“ಇಂದಾದರೂ ನೀನು ಶಾಂತಿಮಾರ್ಗವನ್ನು ಅರಿತುಕೊಂಡಿದ್ದರೆ ಎಷ್ಟೋ ಚೆನ್ನಾಗಿರುತ್ತಿತ್ತು. ಆದರೆ ಅದು ಈಗ ನಿನ್ನ ಕಣ್ಣಿಗೆ ಮರೆಯಾಗಿದೆ. 43ಕಾಲವು ಬರುವುದು. ಆಗ ಶತ್ರುಗಳು ನಿನ್ನ ಸುತ್ತಲೂ ಆಳ್ವೇಲಿಯೆಬ್ಬಿಸಿ, ಮುತ್ತಿಗೆ ಹಾಕಿ, ಎಲ್ಲೆಡೆಯೂ ನುಗ್ಗಿ, 44ನಿನ್ನನ್ನೂ ನಿನ್ನೊಳಗಿನ ಜನರನ್ನೂ ಧ್ವಂಸಮಾಡುವರು; ನಿನ್ನಲ್ಲಿ ಕಲ್ಲಿನ ಮೇಲೆ ಕಲ್ಲು ನಿಲ್ಲದಂತೆ ಮಾಡುವರು. ಏಕೆಂದರೆ, ದೇವರು ನಿನ್ನನ್ನು ಅರಸಿ ಬಂದ ಕಾಲವನ್ನು ನೀನು ಅರಿತುಕೊಳ್ಳದೆಹೋದೆ,” ಎಂದು ಅದರ ಸಲುವಾಗಿ ಕಣ್ಣೀರಿಟ್ಟರು.
ಕರ್ತರ ಆಲಯ ಕಳ್ಳಕಾಕರ ಗುಹೆಯಲ್ಲ!
(ಮತ್ತಾ. 21:12-17; ಮಾರ್ಕ. 11:15-19; ಯೊವಾ. 2:13-22)
45ಅನಂತರ ಯೇಸುಸ್ವಾಮಿ ಮಹಾದೇವಾಲಯವನ್ನು ಪ್ರವೇಶಿಸಿದರು. ಅಲ್ಲಿ ಮಾರಾಟ ಮಾಡುತ್ತಿದ್ದವರನ್ನು ಹೊರಗಟ್ಟುತ್ತಾ, 46“ ‘ಪ್ರಾರ್ಥನಾಲಯವೀ ನನ್ನ ಆಲಯ!’ ಎಂದು ಪವಿತ್ರಗ್ರಂಥದಲ್ಲಿ ಬರೆದಿದೆ; ನೀವಾದರೋ ಇದನ್ನು ಕಳ್ಳಕಾಕರ ಗುಹೆಯನ್ನಾಗಿ ಮಾರ್ಪಡಿಸಿದ್ದೀರಿ,” ಎಂದರು.
47ಪ್ರತಿನಿತ್ಯ ಯೇಸು ದೇವಾಲಯದಲ್ಲಿ ಬೋಧಿಸುತ್ತಿದ್ದರು. ಇತ್ತ ಮುಖ್ಯಯಾಜಕರೂ ಧರ್ಮಶಾಸ್ತ್ರಿಗಳೂ ಪ್ರಜಾಪ್ರಮುಖರೂ ಅವರನ್ನು ಕೊಲೆಮಾಡಲು ಹವಣಿಸುತ್ತಿದ್ದರು.
48ಆದರೆ ಅವರಿಂದ ಏನೂ ಮಾಡಲಾಗಲಿಲ್ಲ. ಏಕೆಂದರೆ, ಜನರೆಲ್ಲರೂ ಯೇಸುವಿನ ಬೋಧನೆಗೆ ಮಾರುಹೋಗಿದ್ದರು. ಅವರ ಬಾಯಿಂದ ಬಂದ ಒಂದೊಂದು ಮಾತನ್ನು ಕೇಳಲು ಆತುರರಾಗಿದ್ದರು.
Currently Selected:
ಲೂಕ. 19: KANCLBSI
Highlight
Share
Copy
Want to have your highlights saved across all your devices? Sign up or sign in
Kannada C.L. Bible - ಸತ್ಯವೇದವು C.L.
Copyright © 2016 by The Bible Society of India
Used by permission. All rights reserved worldwide.

: