YouVersion Logo
Search Icon

ಲೂಕ. 7:7-9

ಲೂಕ. 7:7-9 KANCLBSI

ನಾನೇ ತಮ್ಮಲ್ಲಿಗೆ ಬರೋಣವೆಂದರೆ ಆ ಯೋಗ್ಯತೆಯೂ ನನಗಿಲ್ಲ. ತಾವು ಒಂದು ಮಾತು ಹೇಳಿದರೆ ಸಾಕು, ನನ್ನ ಸೇವಕ ಸ್ವಸ್ಥನಾಗುವನು. ಏಕೆಂದರೆ, ನಾನೂ ಮತ್ತೊಬ್ಬರ ಕೈಕೆಳಗಿರುವವನು; ನನ್ನ ಅಧೀನದಲ್ಲೂ ಸೈನಿಕರಿದ್ದಾರೆ. ಅವರಲ್ಲಿ ಒಬ್ಬನಿಗೆ ನಾನು ‘ಬಾ,’ ಎಂದರೆ ಬರುತ್ತಾನೆ. ಇನ್ನೊಬ್ಬನಿಗೆ ‘ಹೋಗು,’ ಎಂದರೆ ಹೋಗುತ್ತಾನೆ. ಸೇವಕನಿಗೆ ‘ಇಂಥದ್ದನ್ನು ಮಾಡು,’ ಎಂದರೆ ಮಾಡುತ್ತಾನೆ,” ಎಂದು ಹೇಳಿ ಕಳುಹಿಸಿದನು. ಅವನ ಈ ಮಾತುಗಳನ್ನು ಕೇಳಿದಾಗ ಯೇಸುವಿಗೆ ಆಶ್ಚರ್ಯವಾಯಿತು. ತಮ್ಮ ಹಿಂದೆ ಬರುತ್ತಿದ್ದ ಜನರ ಗುಂಪಿನ ಕಡೆ ತಿರುಗಿನೋಡಿ, “ಇಂಥ ಗಾಢ ವಿಶ್ವಾಸವನ್ನು ನಾನು ಇಸ್ರಯೇಲ್ ಜನರಲ್ಲೂ ಕಾಣಲಿಲ್ಲವೆಂದು ನಿಮಗೆ ನಿಶ್ಚಯವಾಗಿ ಹೇಳುತ್ತೇನೆ,” ಎಂದರು.