ಮಾರ್ಕ 4
4
ಬಿತ್ತುವವನ ಸಾಮತಿ
(ಮತ್ತಾ. 13:1-9; ಲೂಕ. 8:4-8)
1ಯೇಸುಸ್ವಾಮಿ ಗಲಿಲೇಯ ಸರೋವರದ ತೀರದಲ್ಲಿ ಮತ್ತೆ ಬೋಧಿಸಲಾರಂಭಿಸಿದರು. ಜನರು ಕಿಕ್ಕಿರಿದು ಸುತ್ತಲೂ ನೆರೆದುಬಂದಿದ್ದರು. ಆದುದರಿಂದ ಅವರು ಸರೋವರದಲ್ಲಿದ್ದ ದೋಣಿಯೊಂದನ್ನು ಹತ್ತಿ ಕುಳಿತರು. 2ಜನರು ದಡದಲ್ಲೇ ಉಳಿದರು. ಆಗ ಯೇಸು ಅವರಿಗೆ ಅನೇಕ ವಿಷಯಗಳನ್ನು ಸಾಮತಿಗಳ ಮೂಲಕ ಬೋಧಿಸುತ್ತಾ ಹೀಗೆಂದರು: 3“ಕೇಳಿ, ಒಬ್ಬ ರೈತ ಬಿತ್ತುವುದಕ್ಕೆ ಹೊರಟ. 4ಬಿತ್ತನೆಮಾಡುತ್ತಾ ಇದ್ದಾಗ ಕೆಲವು ಬೀಜಗಳು ಕಾಲ್ದಾರಿಯಲ್ಲಿ ಬಿದ್ದವು. ಬಿದ್ದುದೇ ಹಕ್ಕಿಗಳು ಬಂದು ಅವುಗಳನ್ನು ತಿಂದುಬಿಟ್ಟವು. 5ಬೇರೆ ಕೆಲವು ಬೀಜಗಳು ಹೆಚ್ಚು ಮಣ್ಣಿಲ್ಲದ ಕಲ್ಲುನೆಲದ ಮೇಲೆ ಬಿದ್ದವು. ಅಲ್ಲಿ ಮಣ್ಣು ಬಹಳ ತೆಳ್ಳಗಿದ್ದುದರಿಂದ ಅವು ಬೇಗನೆ ಮೊಳೆತವು; 6ಬಿಸಿಲೇರಿದಾಗ ಬಾಡಿದವು; ಆಳವಾಗಿ ಬೇರೂರಲು ಆಗದ ಕಾರಣ ಅವು ಒಣಗಿಹೋದವು. 7ಇನ್ನು ಕೆಲವು ಬೀಜಗಳು ಮುಳ್ಳುಪೊದೆಗಳ ನಡುವೆ ಬಿದ್ದವು. ಮುಳ್ಳುಪೊದೆಗಳು ಸಸ್ಯಗಳ ಸಮೇತ ಅವುಗಳನ್ನು ಅದುಮಿಬಿಟ್ಟವು. ಆದುದರಿಂದ ಅವು ಫಲಕೊಡಲಿಲ್ಲ. 8ಇನ್ನೂ ಕೆಲವು ಬೀಜಗಳು ಹದವಾದ ಭೂಮಿಯಲ್ಲಿ ಬಿದ್ದವು. ಅವು ಮೊಳೆತು, ಬೆಳೆದು ತೆನೆಬಿಟ್ಟವು. ಅವುಗಳಲ್ಲಿ ಕೆಲವು ಮೂವತ್ತರಷ್ಟು, ಕೆಲವು ಅರವತ್ತರಷ್ಟು ಮತ್ತೆ ಕೆಲವು ನೂರರಷ್ಟು ಫಸಲನ್ನು ಕೊಟ್ಟವು.” 9ಈ ಸಾಮತಿಯನ್ನು ಹೇಳಿದ ಬಳಿಕ ಯೇಸು, “ಕೇಳುವುದಕ್ಕೆ ಕಿವಿಯುಳ್ಳವನು ಕೇಳಿಸಿಕೊಳ್ಳಲಿ,” ಎಂದರು.
ಸಾಮತಿಗಳ ಉದ್ದಿಶ್ಯ
(ಮತ್ತಾ. 13:10-17; ಲೂಕ. 8:9-10)
10ಈ ಉಪದೇಶವನ್ನು ಕೇಳಿದವರಲ್ಲಿ ಕೆಲವರು, ಯೇಸುಸ್ವಾಮಿ ಒಬ್ಬರೇ ಇದ್ದಾಗ, ಹನ್ನೆರಡುಮಂದಿ ಶಿಷ್ಯರೊಡನೆ ಬಂದು, ಅವರು ಹೇಳಿದ ಸಾಮತಿಗಳನ್ನು ವಿವರಿಸಬೇಕೆಂದು ಕೇಳಿಕೊಂಡರು. 11ಅದಕ್ಕೆ ಯೇಸು, “ದೇವರ ಸಾಮ್ರಾಜ್ಯದ ರಹಸ್ಯವನ್ನು ನಿಮಗೆ ತಿಳಿಸಲಾಗಿದೆ. ಮಿಕ್ಕವರಿಗಾದರೋ ಅದೆಲ್ಲವೂ ಸಾಮತಿಗಳ ರೂಪದಲ್ಲಿ ಮರೆಯಾಗಿದೆ. ಏಕೆಂದರೆ,
12‘ಕಣ್ಣಾರೆ ನೋಡಿಯೂ ಅವರು ಕಾಣರು;
ಕಿವಿಯಾರೆ ಕೇಳಿಯೂ ಅವರು ಗ್ರಹಿಸರು.
ಕಂಡು ಗ್ರಹಿಸಿದರೆ ಅವರು ದೇವರತ್ತ ತಿರುಗಿಯಾರು;
ಪಾಪಕ್ಷಮೆ ಹೊಂದಿಯಾರು’,” ಎಂದರು.
ಬಿತ್ತುವವನ ಸಾಮತಿಯ ವಿವರಣೆ
(ಮತ್ತಾ. 13:18-23; ಲೂಕ. 8:11-15)
13ಅನಂತರ ಯೇಸುಸ್ವಾಮಿ ಅವರಿಗೆ, “ಈ ಸಾಮತಿಯನ್ನು ನೀವು ಅರ್ಥಮಾಡಿಕೊಳ್ಳಲಿಲ್ಲವೇ? ಹಾಗಾದರೆ ಬೇರೆಲ್ಲಾ ಸಾಮತಿಗಳನ್ನು ಹೇಗೆ ಅರ್ಥಮಾಡಿಕೊಳ್ಳುವಿರಿ? 14ಈ ಸಾಮತಿಯಲ್ಲಿ, ಬಿತ್ತುವವನು ‘ದೇವರ ಸಂದೇಶ’ ಎಂಬ ಬೀಜವನ್ನು ಬಿತ್ತುತ್ತಾನೆ. 15ಕೆಲವರು ದೇವರ ಸಂದೇಶವನ್ನು ಕೇಳುತ್ತಾರೆ; ಸೈತಾನನು ತಕ್ಷಣವೇ ಬಂದು ಆ ಸಂದೇಶವನ್ನು ತೆಗೆದುಬಿಡುತ್ತಾನೆ. ಕಾಲ್ದಾರಿಯಲ್ಲಿ ಬಿದ್ದ ಬೀಜಕ್ಕೆ ಹೋಲಿಕೆಯಾಗಿರುವವರು ಇವರೇ. 16ಇನ್ನೂ ಕೆಲವರು ದೇವರ ಸಂದೇಶವನ್ನು ಕೇಳಿದ ಕೂಡಲೆ ಅದನ್ನು ಸಂತಸದಿಂದ ಸ್ವೀಕರಿಸುತ್ತಾರೆ. ಆದರೆ ಅವರಲ್ಲಿ ಅದು ಆಳವಾಗಿ ಬೇರೂರದ ಕಾರಣ ಕೊಂಚಕಾಲ ಮಾತ್ರ ಉಳಿಯುತ್ತದೆ. 17ದೇವರ ಸಂದೇಶದ ನಿಮಿತ್ತ ಕಷ್ಟಕೋಟಲೆಗಳು ಬಂದೊದಗಿದಾಗ ಕೂಡಲೇ ಎಡವಿ ಬೀಳುತ್ತಾರೆ. ಇವರೇ ಕಲ್ಲುನೆಲದ ಮೇಲೆ ಬಿದ್ದ ಬೀಜಕ್ಕೆ ಸಮಾನರಾದವರು. 18-19ಇನ್ನೂ ಕೆಲವರು ದೇವರ ಸಂದೇಶವನ್ನು ಕೇಳುತ್ತಾರೆ. ಆದರೆ ಅವರೊಳಗೆ ಇರುವ ಪ್ರಾಪಂಚಿಕ ಚಿಂತನೆಗಳೂ ಐಶ್ವರ್ಯದ ವ್ಯಾಮೋಹಗಳೂ ಇನ್ನಿತರ ಅಭಿಲಾಷೆಗಳೂ ದೇವರ ಸಂದೇಶವನ್ನು ಅದುಮಿ, ಅದು ಫಲಬಿಡದಂತೆ ಮಾಡುತ್ತವೆ. ಇವರೇ ಮುಳ್ಳುಪೊದೆಗಳ ನಡುವೆ ಬಿದ್ದ ಬೀಜಕ್ಕೆ ಅನುರೂಪ ಆದವರು. 20ಮತ್ತೆ ಕೆಲವರಾದರೋ ದೇವರ ಸಂದೇಶವನ್ನು ಕೇಳಿ ಅದನ್ನು ಸ್ವಾಗತಿಸುತ್ತಾರೆ. ಅಂಥವರಲ್ಲಿ ಕೆಲವರು ಮೂವತ್ತರಷ್ಟು, ಕೆಲವರು ಅರವತ್ತರಷ್ಟು, ಇನ್ನೂ ಕೆಲವರು ನೂರರಷ್ಟು ಫಲಕೊಡುತ್ತಾರೆ. ಇವರೇ ಹದವಾದ ಭೂಮಿಯಲ್ಲಿ ಬಿದ್ದ ಬೀಜಕ್ಕೆ ಸಮಾನರು,” ಎಂದರು.
ದೀಪದ ಸ್ಥಾನಮಾನ
(ಲೂಕ. 8:16-18)
21ಯೇಸುಸ್ವಾಮಿ ತಮ್ಮ ಬೋಧನೆಯನ್ನು ಮುಂದುವರಿಸುತ್ತಾ, “ಯಾರಾದರೂ ಉರಿಯುವ ದೀಪವನ್ನು ತಂದು ಬಟ್ಟಲ ಒಳಗಾಗಲಿ, ಮಂಚದ ಕೆಳಗಾಗಲಿ ಇಡುವುದುಂಟೇ? ನಿಶ್ಚಯವಾಗಿಯೂ ಇಲ್ಲ. ಅದನ್ನು ದೀಪಸ್ತಂಭದ ಮೇಲೆ ಇಡುತ್ತಾರೆ. 22ಬೆಳಕಿಗೆ ಬಾರದ ಮುಚ್ಚುಮರೆಯಿಲ್ಲ, ರಟ್ಟಾಗದ ಗುಟ್ಟಿಲ್ಲ. 23ಕೇಳುವುದಕ್ಕೆ ಕಿವಿಯುಳ್ಳವನು ಕೇಳಿಸಿಕೊಳ್ಳಲಿ.
24“ನೀವು ಕೇಳುವುದನ್ನು ಎಚ್ಚರಿಕೆಯಿಂದ ಗಮನಿಸಿರಿ; ಇತರರಿಗೆ ನೀವು ಕೊಟ್ಟ ಅಳತೆಯಲ್ಲೇ ದೇವರು ನಿಮಗೂ ಅಳೆದುಕೊಡುವರು; ಇನ್ನೂ ಅಧಿಕವಾಗಿ ಕೊಡುವರು. 25ಉಳ್ಳವನಿಗೆ ಇನ್ನೂ ಹೆಚ್ಚಾಗಿ ಕೊಡಲಾಗುತ್ತದೆ. ಇಲ್ಲದವನಿಂದ ಇರುವ ಕಿಂಚಿತ್ತನ್ನೂ ಕಸಿದುಕೊಳ್ಳಲಾಗುತ್ತದೆ,” ಎಂದರು.
ಬೆಳವಣಿಗೆಯ ರಹಸ್ಯ
26ಯೇಸುಸ್ವಾಮಿ ಇನ್ನೊಂದು ಸಾಮತಿಯನ್ನು ಹೇಳಿದರು: “ದೇವರ ಸಾಮ್ರಾಜ್ಯವು ರೈತನೊಬ್ಬನು ತನ್ನ ಹೊಲದಲ್ಲಿ ಮಾಡಿದ ಬಿತ್ತನೆಗೆ ಹೋಲಿಕೆಯಾಗಿದೆ. 27ಬಿತ್ತನೆಯಾದ ಬಳಿಕ ಅವನು ರಾತ್ರಿಯಲ್ಲಿ ಮಲಗಿರಲಿ, ಹಗಲಲ್ಲಿ ಎದ್ದಿರಲಿ, ಅವನಿಗೆ ಹೇಗೆಂದು ತಿಳಿಯದೆಯೇ ಆ ಬೀಜವು ಮೊಳೆತು ಬೆಳೆಯುತ್ತಿರುತ್ತದೆ. 28ಭೂಮಿ ಮೊದಲು ಸಸಿಯನ್ನೂ ಅನಂತರ ಹೊಡೆಯನ್ನೂ ತರುವಾಯ ತೆನೆತುಂಬ ಕಾಳನ್ನೂ ತನ್ನಷ್ಟಕ್ಕೆ ತಾನೇ ಉತ್ಪತ್ತಿಮಾಡುತ್ತದೆ. 29ಬೆಳೆಯು ಮಾಗಿದಾಗ ಸುಗ್ಗಿಯು ಬಂತೆಂದು ವ್ಯವಸಾಯಗಾರನು ಕುಡುಗೋಲನ್ನು ಬಳಸುತ್ತಾನೆ,” ಎಂದರು.
ಸಾಸಿವೆ ಕಾಳಿನ ಸಾಮತಿ
(ಮತ್ತಾ. 13:31-32; ಲೂಕ. 13:18-19)
30ಯೇಸುಸ್ವಾಮಿ ತಮ್ಮ ಉಪದೇಶವನ್ನು ಮುಂದುವರಿಸಿ, “ದೇವರ ಸಾಮ್ರಾಜ್ಯವನ್ನು ಇನ್ನು ಯಾವುದಕ್ಕೆ ಹೋಲಿಸೋಣ? ಅದಕ್ಕಾಗಿ ಯಾವ ಸಾಮತಿಯನ್ನು ಉಪಯೋಗಿಸೋಣ? 31ಭೂಮಿಯಲ್ಲಿರುವ ಕಾಳುಗಳಲ್ಲಿ ಅತಿ ಚಿಕ್ಕದಾಗಿರುವ ಸಾಸಿವೆಕಾಳಿಗೂ ಅದನ್ನು ಹೋಲಿಸಬಹುದು. 32ಸಾಸಿವೆಕಾಳು ಚಿಕ್ಕದಾಗಿದ್ದರೂ ಬಿತ್ತನೆಯ ತರುವಾಯ ಮೊಳೆತು ಎಲ್ಲಾ ಕಾಯಿಪಲ್ಯದ ಸಸ್ಯಗಳಿಗಿಂತಲೂ ದೊಡ್ಡದಾಗಿ ಬೆಳೆಯುತ್ತದೆ. ಹಕ್ಕಿಗಳು ಕೂಡ ಬಂದು ಅದರ ನೆರಳಿನಲ್ಲಿ ಗೂಡುಕಟ್ಟಿ ವಾಸಿಸುವಷ್ಟು ದೊಡ್ಡದಾದ ರೆಂಬೆಗಳನ್ನು ಅದು ತಳೆಯುತ್ತದೆ,” ಎಂದರು.
ಸಾಮತಿಗಳ ಪ್ರಯೋಗವೇಕೆ?
(ಮತ್ತಾ. 13:34)
33ಯೇಸುಸ್ವಾಮಿ ಈ ಬಗೆಯ ಸಾಮತಿಗಳನ್ನು ಉಪಯೋಗಿಸಿ ಜನರಿಗೆ ದೇವರ ಸಂದೇಶವನ್ನು ಅವರವರ ತಿಳುವಳಿಕೆಗೆ ತಕ್ಕಂತೆ ಉಪದೇಶಿಸುತ್ತಿದ್ದರು. ಸಾಮತಿಗಳನ್ನು ಉಪಯೋಗಿಸದೆ ಅವರು ಬೋಧಿಸುತ್ತಿರಲಿಲ್ಲ. 34ಆದರೆ ತಮ್ಮ ಆಪ್ತಶಿಷ್ಯರೊಡನೆ ಪ್ರತ್ಯೇಕವಾಗಿದ್ದಾಗ ಅವರಿಗೆ ಎಲ್ಲವನ್ನು ವಿವರಿಸಿ ಹೇಳುತ್ತಿದ್ದರು.
ಯೇಸು ಪ್ರಕೃತಿಗೂ ಒಡೆಯ
(ಮತ್ತಾ. 8:23-27; ಲೂಕ. 8:22-25)
35ಆ ದಿನ ಸಾಯಂಕಾಲ ಯೇಸುಸ್ವಾಮಿ ತಮ್ಮ ಶಿಷ್ಯರಿಗೆ, “ಸರೋವರದ ಆಚೆದಡಕ್ಕೆ ಹೋಗೋಣ,” ಎಂದರು. 36ಆಗ ಶಿಷ್ಯರು ಜನರ ಗುಂಪನ್ನು ಬಿಟ್ಟು ದೋಣಿಯಲ್ಲಿ ಕುಳಿತಿದ್ದ ಯೇಸುವನ್ನು ಹಾಗೆಯೇ ತಮ್ಮ ಜೊತೆಯಲ್ಲಿ ಕರೆದುಕೊಂಡು ಹೊರಟರು. 37ಆ ದೋಣಿಯ ಸಂಗಡ ಬೇರೆ ದೋಣಿಗಳು ಇದ್ದವು. ಸ್ವಲ್ಪ ಮುಂದೆ ಹೋಗುವಷ್ಟರಲ್ಲೇ ದೊಡ್ಡ ಬಿರುಗಾಳಿ ಎದ್ದಿತು. ಅಲೆಗಳು ದೋಣಿಗೆ ಅಪ್ಪಳಿಸತೊಡಗಿದವು. ದೋಣಿಯೊಳಗೆ ನೀರು ನುಗ್ಗಿ ಅದು ತುಂಬಿಹೋಗುವುದರಲ್ಲಿತ್ತು. 38ಯೇಸುವಾದರೋ ದೋಣಿಯ ಹಿಂಭಾಗದಲ್ಲಿ ದಿಂಬನ್ನು ಒರಗಿ ನಿದ್ದೆ ಮಾಡುತ್ತಿದ್ದರು. ಶಿಷ್ಯರು ಅವರನ್ನು ಎಬ್ಬಿಸಿ, “ಗುರುವೇ, ನಾವು ಸಾಯುತ್ತಿದ್ದೇವೆ, ತಮಗೆ ಚಿಂತೆಯೇ ಇಲ್ಲವೆ?” ಎಂದರು.
39ಆಗ ಯೇಸು ಎಚ್ಚೆತ್ತು, ಬಿರುಗಾಳಿಯನ್ನು ಗದರಿಸಿದರು. ಸರೋವರಕ್ಕೆ, “ಶಾಂತವಾಗಿರು! ಮೊರೆಯಬೇಡ,” ಎಂದು ಆಜ್ಞಾಪಿಸಿದರು. ತಕ್ಷಣ ಬಿರುಗಾಳಿ ನಿಂತಿತು. ವಾತಾವರಣ ಪ್ರಶಾಂತವಾಯಿತು. 40ಅನಂತರ ತಮ್ಮ ಶಿಷ್ಯರಿಗೆ, “ಏಕೆ ಇಷ್ಟು ಭಯ? ಇನ್ನೂ ನಿಮಗೆ ವಿಶ್ವಾಸವಿಲ್ಲವೇ?” ಎಂದರು. 41ಶಿಷ್ಯರಾದರೋ ಭಯಭ್ರಾಂತರಾಗಿ, “ಗಾಳಿಯೂ ಸರೋವರವೂ ಇವರು ಹೇಳುವಂತೆ ಕೇಳಬೇಕಾದರೆ ಇವರು ಯಾರಿರಬಹುದು?” ಎಂದು ತಮ್ಮತಮ್ಮೊಳಗೆ ಮಾತಾಡಿಕೊಂಡರು.
Currently Selected:
ಮಾರ್ಕ 4: KANCLBSI
Highlight
Share
Copy

Want to have your highlights saved across all your devices? Sign up or sign in
Kannada C.L. Bible - ಸತ್ಯವೇದವು C.L.
Copyright © 2016 by The Bible Society of India
Used by permission. All rights reserved worldwide.

: