ಯೋಹಾ 1
1
ಅನಾದಿಯಿಂದ ಇದ್ದ ದೇವರ ವಾಕ್ಯವು ಸಂಪೂರ್ಣ ಮನುಷ್ಯನಾಗಿದ್ದು
1 # 1:1 ಆದಿ 1:1; 1 ಯೋಹಾ 1:1: ಆದಿಯಲ್ಲಿ ವಾಕ್ಯವಿತ್ತು; ಆ ವಾಕ್ಯವು ದೇವರೊಂದಿಗಿತ್ತು; ಆ ವಾಕ್ಯವು ದೇವರಾಗಿತ್ತು. 2ಆ ವಾಕ್ಯವೆಂಬಾತನು ಆದಿಯಲ್ಲಿ ದೇವರೊಂದಿಗಿದ್ದನು. 3ಸಮಸ್ತವೂ ಆತನ ಮೂಲಕವಾಗಿ ಸೃಷ್ಟಿಯಾಯಿತು. ಸೃಷ್ಟಿಯಾದ ಎಲ್ಲವುಗಳಲ್ಲಿ ಆತನಿಲ್ಲದೆ ಒಂದಾದರೂ ಸೃಷ್ಟಿಯಾಗಲಿಲ್ಲ. 4ಆತನಲ್ಲಿ ಜೀವವಿತ್ತು. ಆ ಜೀವವು ಮನುಷ್ಯರಿಗೆ ಬೆಳಕಾಗಿತ್ತು. 5#1:5 ಯೋಹಾ 3:19:ಆ ಬೆಳಕು ಕತ್ತಲಲ್ಲಿ ಪ್ರಕಾಶಿಸುತ್ತದೆ. ಕತ್ತಲು ಆ ಬೆಳಕನ್ನು #1:5 ಅಥವಾ, ಗ್ರಹಿಸಲಿಲ್ಲ. ಮುಸುಕಲಿಲ್ಲ.
6ದೇವರು ಕಳುಹಿಸಿದ ಒಬ್ಬ ಮನುಷ್ಯನು ಬಂದನು. ಅವನ ಹೆಸರು ಯೋಹಾನನು. 7ಆ ಯೋಹಾನನು ಸಾಕ್ಷಿಗಾಗಿ ಬಂದನು. ತನ್ನ ಮೂಲಕವಾಗಿ ಎಲ್ಲರೂ ನಂಬುವಂತೆ ಅವನು ಬೆಳಕಿನ ವಿಷಯದಲ್ಲಿ ಸಾಕ್ಷಿಕೊಡಲು ಬಂದನು. 8ಅವನೇ ಆ ಬೆಳಕಲ್ಲ; ಆದರೆ ಆ ಬೆಳಕಿನ ವಿಷಯದಲ್ಲಿ ಸಾಕ್ಷಿ ನೀಡಲೆಂದೇ ಬಂದವನು.
9ನಿಜವಾದ ಬೆಳಕು ಲೋಕಕ್ಕೆ ಬರುವುದಾಗಿತ್ತು; ಆ ಬೆಳಕೇ ಪ್ರತಿ ಮನುಷ್ಯನಿಗೂ ಬೆಳಕನ್ನು ಕೊಡುವಂಥದು. 10ಆತನು ಲೋಕದಲ್ಲಿ ಇದ್ದನು ಮತ್ತು ಲೋಕವು ಆತನ ಮೂಲಕ ಉಂಟಾಯಿತು, ಆದರೂ ಲೋಕವು ಆತನನ್ನು ಅರಿತುಕೊಳ್ಳಲಿಲ್ಲ. 11ಆತನು ತನ್ನ ಸ್ವಂತ ಜನರ ಬಳಿಗೆ ಬಂದನು; ಆದರೆ ಸ್ವಂತ ಜನರು ಆತನನ್ನು ಸ್ವೀಕರಿಸಲಿಲ್ಲ. 12ಆದರೂ ಯಾರಾರು ಆತನನ್ನು #1:12 ಅಥವಾ, ಅಂಗೀಕರಿಸಿದರೋ. ಸ್ವೀಕರಿಸಿದರೋ, ಅಂದರೆ ಆತನ ಹೆಸರಿನಲ್ಲಿ ನಂಬಿಕೆಯಿಟ್ಟರೋ ಅವರಿಗೆ ದೇವರ ಮಕ್ಕಳಾಗುವ ಅಧಿಕಾರವನ್ನು ಆತನು ಕೊಟ್ಟನು. 13ಇವರು ರಕ್ತಸಂಬಂಧದಿಂದಾಗಲಿ, #1:13 ಅಥವಾ, ದೈಹಿಕ ಇಚ್ಛೆಯಿಂದಾಗಲಿ, ಪುರುಷನ ಇಚ್ಛೆಯಿಂದಾಗಲಿಶರೀರದ ಇಚ್ಛೆಯಿಂದಾಗಲಿ, ಪುರುಷ ಸಂಕಲ್ಪದಿಂದಾಗಲಿ ಹುಟ್ಟಿದವರಲ್ಲ; ದೇವರಿಂದಲೇ ಹುಟ್ಟಿದವರು.
14ಆ ವಾಕ್ಯವೆಂಬುವವನು #1:14 ದೇಹಧಾರಿಯಾಗಿ, ಮಾಂಸಧಾರಿ, ಅಥವಾ, ಆತ್ಮ ಪ್ರಾಣ, ಶರೀರ ಒಳಗೊಂಡ. ಮನುಷ್ಯನಾಗಿ ನಮ್ಮ ಮಧ್ಯದಲ್ಲಿ ವಾಸಮಾಡಿದನು. ನಾವು ಆತನ ಮಹಿಮೆಯನ್ನು ನೋಡಿದೆವು. ಆ ಮಹಿಮೆಯು ತಂದೆಯ ಬಳಿಯಿಂದ ಬಂದ ಒಬ್ಬನೇ ಮಗನಿಗೆ ಇರತಕ್ಕ ಮಹಿಮೆ. ಆತನು ಕೃಪೆಯಿಂದಲೂ, ಸತ್ಯದಿಂದಲೂ ತುಂಬಿದವನಾಗಿದ್ದನು.
15ಆತನ ವಿಷಯವಾಗಿ ಯೋಹಾನನು ಸಾಕ್ಷಿಕೊಡುತ್ತಾನೆ, ಹೇಗೆಂದರೆ #1:15 ಯೋಹಾ 1:30; ಮತ್ತಾ 3:11; ಮಾರ್ಕ 1:7; ಲೂಕ 3:16:“‘ನನ್ನ ನಂತರ ಬರುವಾತನು ನನಗಿಂತ ಮೊದಲೇ ಇದ್ದುದರಿಂದ ಆತನು ನನಗಿಂತಲೂ ಉನ್ನತನು’ ಎಂದು ನಾನು ಹೇಳಿದಾತನು ಈತನೇ” ಎಂದು ಘೋಷಿಸಿದನು.
16ಯೇಸು ಕ್ರಿಸ್ತನ ಪರಿಪೂರ್ಣತೆಯಿಂದ ನಾವೆಲ್ಲರೂ ಕೃಪೆಯ ಮೇಲೆ ಕೃಪೆಯನ್ನು ಹೊಂದಿದೆವು. 17ಧರ್ಮಶಾಸ್ತ್ರವು ಮೋಶೆಯ ಮುಖಾಂತರ ಕೊಡಲ್ಪಟ್ಟಿತು. ಆದರೆ ಕೃಪೆಯೂ, ಸತ್ಯವೂ ಯೇಸು ಕ್ರಿಸ್ತನ ಮುಖಾಂತರ ಬಂದವು. 18ದೇವರನ್ನು ಯಾರೂ ಎಂದೂ ನೋಡಿಲ್ಲ. ತಂದೆಯ ಹೃದಯದಲ್ಲಿರುವ ಏಕಪುತ್ರನೂ ಸ್ವತಃ ದೇವರೂ ಆಗಿರುವಾತನೇ, ತಂದೆಯನ್ನು ತಿಳಿಯಪಡಿಸಿದ್ದಾನೆ.
ಸ್ನಾನಿಕನಾದ ಯೋಹಾನನು ಯೇಸುವಿನ ವಿಷಯವಾಗಿ ಸಾಕ್ಷಿ ಹೇಳಿದ್ದು
19ಯೆಹೂದ್ಯರು ಯೆರೂಸಲೇಮಿನಿಂದ ಯಾಜಕರನ್ನೂ, ಲೇವಿಯರನ್ನೂ ಯೋಹಾನನ ಬಳಿಗೆ ಕಳುಹಿಸಿ, “ನೀನು ಯಾರು?” ಎಂದು ಕೇಳಿದ್ದಕ್ಕೆ, 20ಅವನು ಮರೆಮಾಡದೆ ಎಲ್ಲರ ಮುಂದೆ, “ನಾನು ಕ್ರಿಸ್ತನಲ್ಲ,” ಎಂದು ಹೇಳಿದನು. 21ಅದಕ್ಕೆ ಅವರು, “ಹಾಗಾದರೆ ನೀನು ಯಾರು? #1:21 ಮಲಾ. 4:5:ಎಲೀಯನೋ?” ಎಂದು ಕೇಳಿದರು. ಅದಕ್ಕೆ ಅವನು, “ನಾನು ಎಲೀಯನಲ್ಲ” ಅಂದನು. “ನೀನು ಬರಬೇಕಾದ #1:21 ಧರ್ಮೋ 18:15:ಆ ಪ್ರವಾದಿಯೋ?” ಎಂದು ಕೇಳಿದ್ದಕ್ಕೆ “ಅಲ್ಲ,” ಅಂದನು. 22ಆಗ ಅವರು, “ಹಾಗಾದರೆ ನೀನು ಯಾರು? ನಮ್ಮನ್ನು ಕಳುಹಿಸಿದವರಿಗೆ ನಾವು ಉತ್ತರ ಕೊಡಬೇಕಲ್ಲಾ. ನಿನ್ನ ವಿಷಯವಾಗಿ ನೀನು ಏನು ಹೇಳುತ್ತೀ?” ಎಂದು ಕೇಳಿದರು. 23ಅದಕ್ಕೆ ಯೋಹಾನನು, “ಪ್ರವಾದಿಯಾದ ಯೆಶಾಯನು ಹೇಳಿದಂತೆ, #1:23 ಯೆಶಾ 40. 3: ‘ಕರ್ತನ ದಾರಿಯನ್ನು ನೆಟ್ಟಗೆ ಮಾಡಿರಿ ಎಂದು ಅಡವಿಯಲ್ಲಿ ಕೂಗುವವನ ಧ್ವನಿಯೇ ನಾನು’” ಎಂದು ಉತ್ತರ ಕೊಟ್ಟನು. 24ಅಲ್ಲಿ ಬಂದವರು ಫರಿಸಾಯರ ಕಡೆಯವರಾಗಿದ್ದರು. 25ಅವರು ಅವನಿಗೆ, “ನೀನು ಕ್ರಿಸ್ತನಾಗಲಿ, ಎಲೀಯನಾಗಲಿ ಆ ಪ್ರವಾದಿಯಾಗಲಿ ಆಗಿರದಿದ್ದರೆ, ನೀನು ದೀಕ್ಷಾಸ್ನಾನ ಕೊಡುವುದೇಕೆ?” ಎಂದು ಪ್ರಶ್ನಿಸಿದರು. 26ಅದಕ್ಕೆ ಯೋಹಾನನು, “ನಾನು ನೀರಿನಿಂದ ದೀಕ್ಷಾಸ್ನಾನ ಮಾಡಿಸುತ್ತೇನೆ. ಆದರೆ ನೀವು ಅರಿಯದೆ ಇರುವ ಒಬ್ಬಾತನು ನಿಮ್ಮ ಮಧ್ಯದಲ್ಲಿದ್ದಾನೆ. 27ಆತನೇ ನನ್ನ ನಂತರ ಬರತಕ್ಕವನು. ಆತನ ಚಪ್ಪಲಿಗಳ ಪಟ್ಟಿ ಬಿಚ್ಚುವುದಕ್ಕೂ ನಾನು ಯೋಗ್ಯನಲ್ಲ” ಅಂದನು. 28ಇದೆಲ್ಲಾ ಯೋಹಾನನು ದೀಕ್ಷಾಸ್ನಾನ ಮಾಡಿಸುತ್ತಿದ್ದ ಯೊರ್ದನ್ ನದಿಯ ಆಚೆಯಲ್ಲಿರುವ ಬೇಥಾನ್ಯ ಎಂಬ ಊರಿನಲ್ಲಿ ನಡೆಯಿತು.
29ಮರುದಿನ ಯೋಹಾನನು ತನ್ನ ಕಡೆಗೆ ಬರುತ್ತಿದ್ದ ಯೇಸುವನ್ನು ನೋಡಿ, “ಅಗೋ, ಲೋಕದ ಪಾಪವನ್ನು ನಿವಾರಣೆ ಮಾಡಲು ದೇವರು ನೇಮಿಸಿದ #1:29 ಯೋಹಾ 1:36; ಆದಿ 22:8; ವಿಮೋ 12:3; ಯೆಶಾ 53:4-12:ಯಜ್ಞದಕುರಿಮರಿ. 30‘ನನ್ನ ನಂತರ ಬರುವಾತನು ನನಗಿಂತ ಮೊದಲೇ ಇದ್ದುದರಿಂದ ಆತನು ನನಗಿಂತಲೂ ಉನ್ನತನು’ ಎಂದು ನಾನು ಹೇಳಿದ ಮಾತು ಈತನ ವಿಷಯವಾಗಿಯೇ. 31ನನಗೂ ಆತನ ಗುರುತಿರಲಿಲ್ಲ. ಆದರೆ ಆತನನ್ನು ಇಸ್ರಾಯೇಲ್ಯರಿಗೆ ಪ್ರಕಟಪಡಿಸುವುದಕ್ಕೊಸ್ಕರ ನಾನು ನೀರಿನಲ್ಲಿ ದೀಕ್ಷಾಸ್ನಾನವನ್ನು ಮಾಡಿಸುವವನಾಗಿ ಬಂದೆನು.” 32ಇದಲ್ಲದೆ ಯೋಹಾನನು ಸಾಕ್ಷಿ ಕೊಟ್ಟು ಹೇಳಿದ್ದೇನೆಂದರೆ, “ದೇವರಾತ್ಮನು ಪರಲೋಕದಿಂದ ಪಾರಿವಾಳದಂತೆ ಇಳಿಯುವುದನ್ನು ಮತ್ತು ಆತನ ಮೇಲೆ ನೆಲೆಗೊಂಡಿರುವುದನ್ನು ನಾನು ಕಂಡೆನು. 33ನನಗೂ ಆತನು ಯಾರೆಂಬುದು ತಿಳಿದಿರಲಿಲ್ಲ. ಆದರೆ ನೀರಿನಲ್ಲಿ ದೀಕ್ಷಾಸ್ನಾನ ಮಾಡಿಸುವುದಕ್ಕೆ ನನ್ನನ್ನು ಕಳುಹಿಸಿದಾತನು ‘ಯಾರ ಮೇಲೆ ಆತ್ಮನು ಇಳಿದುಬಂದು ನೆಲೆಯಾಗಿರುವುದನ್ನು ನೀನು ನೋಡುವಿಯೋ #1:33 ಮತ್ತಾ 3:11; ಮಾರ್ಕ 1:8; ಲೂಕ 3:16; ಅ. ಕೃ. 1:5:ಆತನೇ ಪವಿತ್ರಾತ್ಮನಿಂದ ದೀಕ್ಷಾಸ್ನಾನ ಕೊಡುವಾತನು’ ಎಂದು ತಾನೇ ನನಗೆ ಹೇಳಿದನು. 34ನಾನು ಅದನ್ನು ನೋಡಿದ್ದೇನೆ ಮತ್ತು ಈತನೇ ದೇವಕುಮಾರನೆಂದು ಸಾಕ್ಷಿ ಕೊಟ್ಟಿದ್ದೇನೆ” ಎಂದು ಹೇಳಿದನು.
ಯೇಸುವಿನ ಪ್ರಥಮ ಶಿಷ್ಯರು
35ಮರುದಿನ ಪುನಃ ಯೋಹಾನನೂ ತನ್ನ ಇಬ್ಬರು ಶಿಷ್ಯರೊಂದಿಗೆ ನಿಂತುಕೊಂಡಿದ್ದನು, 36ಆಗ ಅಲ್ಲಿ ಯೇಸು ಹೋಗುತ್ತಿರುವುದನ್ನು ನೋಡಿ, ಯೋಹಾನನೂ ಅಗೋ, “ಯಜ್ಞಕ್ಕೆ ದೇವರು ನೇಮಿಸಿರುವ ಕುರಿಮರಿ” ಎಂದು ಹೇಳಿದನು. 37ಆ ಇಬ್ಬರು ಶಿಷ್ಯರು ಯೋಹಾನನು ಹೇಳಿದ್ದನ್ನು ಕೇಳಿ ಯೇಸುವನ್ನು ಹಿಂಬಾಲಿಸಿದರು. 38ಯೇಸು ಹಿಂತಿರುಗಿ ತನ್ನನ್ನು ಹಿಂಬಾಲಿಸುತ್ತಿದ್ದ ಅವರನ್ನು ನೋಡಿ, “ನಿಮಗೆ ಏನು ಬೇಕು?” ಎಂದು ಕೇಳಲು ಅವರು, “ರಬ್ಬಿಯೇ, (ಅಂದರೆ ಗುರುವೇ) ನೀನು ವಾಸಿಸುವುದು ಎಲ್ಲಿ?” ಎಂದು ಕೇಳಿದರು. 39ಆತನು ಅವರಿಗೆ, “ನೀವೇ ಬಂದು ನೋಡಿರಿ” ಎಂದು ಹೇಳಲು, ಅವರು ಹೋಗಿ ಆತನು ವಾಸಿಸುತ್ತಿದ್ದ ಸ್ಥಳವನ್ನು ನೋಡಿ ಆ ದಿನ ಆತನ ಸಂಗಡ ಇದ್ದರು. ಆಗ ಹೆಚ್ಚುಕಡಿಮೆ #1:39 ಮೂಲ: ಹತ್ತು ತಾಸಾಗಿತ್ತು. ಸಂಜೆ ನಾಲ್ಕು ಗಂಟೆಯಾಗಿತ್ತು. 40ಯೋಹಾನನ ಮಾತನ್ನು ಕೇಳಿ ಯೇಸುವನ್ನು ಹಿಂಬಾಲಿಸಿದ ಆ ಇಬ್ಬರಲ್ಲಿ ಸೀಮೋನ್ ಪೇತ್ರನ ತಮ್ಮನಾದ ಅಂದ್ರೆಯನು ಒಬ್ಬನು. 41ಇವನು ಮೊದಲು ತನ್ನ ಅಣ್ಣನಾದ ಸೀಮೋನನನ್ನು ಕಂಡು ಅವನಿಗೆ “ನಾವು ಮೆಸ್ಸೀಯನನ್ನು ಕಂಡುಕೊಂಡೆವು” (ಮೆಸ್ಸೀಯನು ಎಂದರೆ #1:41 ಕ್ರಿಸ್ತನು ಎಂದರೆ ಅಭಿಷೇಕ ಹೊಂದಿದವನು, ಬರಬೇಕಾದ ರಕ್ಷಕನು. ಕ್ರಿಸ್ತನು) ಎಂದು ಹೇಳಿ, 42ಅವನನ್ನು ಯೇಸುವಿನ ಬಳಿಗೆ ಕರೆದುಕೊಂಡು ಬಂದನು. ಯೇಸು ಅವನನ್ನು ನೋಡಿ “ನೀನು ಯೋಹಾನನ ಮಗನಾದ ಸೀಮೋನನು. ಇನ್ನು ಮೇಲೆ ನೀನು ‘ಕೇಫ’ ಎಂದು ಕರೆಯಲ್ಪಡುವಿ” ಎಂದು ಹೇಳಿದನು. (ಕೇಫ ಎಂದರೆ #1:42 ಪೇತ್ರ ಎಂದರೆ ಗುಂಡು ಅಥವಾ ಬಂಡೆಗಲ್ಲು. ಮತ್ತಾ 16:18:ಪೇತ್ರ ಇಲ್ಲವೆ ಬಂಡೆ ಎಂದು ಅರ್ಥ)
43ಮರುದಿನ ಯೇಸು ಗಲಿಲಾಯಕ್ಕೆ ಹೋಗಬೇಕೆಂದಿರುವಾಗ ಫಿಲಿಪ್ಪನನ್ನು ಕಂಡು, “ನನ್ನನ್ನು ಹಿಂಬಾಲಿಸು” ಎಂದನು. 44ಈ ಫಿಲಿಪ್ಪನು, ಅಂದ್ರೆಯ ಮತ್ತು ಪೇತ್ರರ ಪಟ್ಟಣವಾದ ಬೆತ್ಸಾಯಿದದವನಾಗಿದ್ದನು. 45ಫಿಲಿಪ್ಪನು ನತಾನಯೇಲನನ್ನು ಕಂಡು ಅವನಿಗೆ “ಮೋಶೆಯು ಧರ್ಮಶಾಸ್ತ್ರದಲ್ಲಿ ಯಾರ ವಿಷಯವಾಗಿ ಬರೆದನೋ ಮತ್ತು ಪ್ರವಾದಿಗಳು ಯಾರ ವಿಚಾರವಾಗಿ ಬರೆದರೋ ಆತನು ನಮಗೆ ಸಿಕ್ಕಿದನು, ಆತನು ಯಾರೆಂದರೆ ಯೋಸೇಫನ ಮಗನಾದ ನಜರೇತಿನ ಯೇಸುವೇ” ಎಂದು ಹೇಳಿದನು. 46ನತಾನಯೇಲನು “ನಜರೇತಿನಿಂದ ಒಳ್ಳೆಯದೇನಾದರೂ ಬರಲು ಸಾಧ್ಯವೋ?” ಎಂದು ಕೇಳಲು, ಫಿಲಿಪ್ಪನು “ಬಂದು ನೋಡು,” ಅಂದನು. 47ಯೇಸು ತನ್ನ ಕಡೆಗೆ ಬರುವ ನತಾನಯೇಲನನ್ನು ಕಂಡು ಅವನನ್ನು ಕುರಿತು “ಇಗೋ, #1:47 ರೋಮಾ. 9:4,6:ಇವನು ನಿಜವಾದ ಇಸ್ರಾಯೇಲನು, #1:47 ಕೀರ್ತ 32:2:ಇವನಲ್ಲಿ ಕಪಟವಿಲ್ಲ” ಎಂದು ಹೇಳಿದನು. 48ಅದಕ್ಕೆ ನತಾನಯೇಲನು “ನೀನು ನನ್ನನ್ನು ಹೇಗೆ ಬಲ್ಲೆ?” ಎಂದು ಯೇಸುವನ್ನು ಕೇಳಿದ್ದಕ್ಕೆ ಆತನು “ಫಿಲಿಪ್ಪನು ನಿನ್ನನ್ನು ಕರೆಯುವುದಕ್ಕಿಂತ ಮೊದಲೇ ನೀನು ಆ ಅಂಜೂರದ ಮರದ ಕೆಳಗಿರುವುದನ್ನು ನಾನು ನೋಡಿದೆನು” ಎಂದು ಹೇಳಿದನು. 49ಅದಕ್ಕೆ ನತಾನಯೇಲನು, “ಗುರುವೇ, ನೀನು ದೇವಕುಮಾರನು! ನೀನೇ ಇಸ್ರಾಯೇಲಿನ ಅರಸನು” ಎಂದನು. 50ಅದಕ್ಕೆ ಯೇಸು “ಆ ಅಂಜೂರದ ಮರದ ಕೆಳಗೆ ನಿನ್ನನ್ನು ನೋಡಿದೆನೆಂದು ನಾನು ನಿನಗೆ ಹೇಳಿದ ಮಾತ್ರಕ್ಕೆ ನಂಬುತ್ತೀಯೋ? ನೀನು ಇವುಗಳಿಗಿಂತಲೂ ಹೆಚ್ಚಿನ ಮಹತ್ಕಾರ್ಯಗಳನ್ನು ನೋಡುವೆ,” ಎಂದನು. 51ಯೇಸು “ನಾನು ನಿಮಗೆ ನಿಜ ನಿಜವಾಗಿ ಹೇಳುತ್ತೇನೆ. #1:51 ಯೆಹೆ. 1:1:ಪರಲೋಕವು ತೆರೆದಿರುವುದನ್ನೂ ಮನುಷ್ಯಕುಮಾರನ ಮೇಲೆ #1:51 ಆದಿ 28:12:ದೇವದೂತರು ಏರುತ್ತಾ ಇಳಿಯುತ್ತಾ ಇರುವುದನ್ನೂ ನೀವು ನೋಡುವಿರಿ” ಎಂದು ಹೇಳಿದನು.
Currently Selected:
ಯೋಹಾ 1: IRVKan
Highlight
Share
Copy
Want to have your highlights saved across all your devices? Sign up or sign in
KAN-IRV
Creative Commons License
Indian Revised Version (IRV) - kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.