YouVersion Logo
Search Icon

ಆದಿಕಾಂಡ 39:7-9

ಆದಿಕಾಂಡ 39:7-9 KSB

ಸ್ವಲ್ಪ ಸಮಯದ ನಂತರ ಯೋಸೇಫನ ಯಜಮಾನನ ಹೆಂಡತಿಯು ಅವನ ಮೇಲೆ ಕಣ್ಣು ಹಾಕಿ, “ನನ್ನ ಸಂಗಡ ಮಲಗು,” ಎಂದಳು. ಆದರೆ ಅವನು ಅದಕ್ಕೆ ಒಪ್ಪದೆ, ತನ್ನ ಯಜಮಾನನ ಹೆಂಡತಿಗೆ, “ನನ್ನ ಯಜಮಾನನು ತನ್ನ ಮನೆಯಲ್ಲಿರುವ ಯಾವುದರ ಬಗ್ಗೆಯೂ ಚಿಂತಿಸದೆ, ತನಗಿದ್ದದ್ದನ್ನೆಲ್ಲಾ ನನಗೆ ಒಪ್ಪಿಸಿದ್ದಾನೆ. ಈ ಮನೆಯಲ್ಲಿ ನನಗಿಂತ ದೊಡ್ಡವನಾರೂ ಇಲ್ಲ. ನೀನು ಅವನ ಹೆಂಡತಿಯಾಗಿರುವುದರಿಂದ, ನಿನ್ನನ್ನು ಹೊರತುಪಡಿಸಿ ನನಗೆ ಮತ್ತೇನೂ ಮರೆಮಾಡಲಿಲ್ಲ. ಹಾಗಿರುವಲ್ಲಿ ನಾನು ಈ ಮಹಾ ದುಷ್ಕೃತ್ಯ ಮಾಡಿ, ದೇವರಿಗೆ ವಿರೋಧವಾಗಿ ಪಾಪ ಮಾಡುವುದು ಹೇಗೆ?” ಎಂದನು.