ಒಮ್ಮೆ ಅವರೆಲ್ಲರೂ ಒಂದುಗೂಡಿದ್ದ ಸಂದರ್ಭದಲ್ಲಿ, “ನೀವು ಜೆರುಸಲೇಮನ್ನು ಬಿಟ್ಟು ಹೋಗಬೇಡಿ; ನಾನು ನಿಮಗೆ ತಿಳಿಸಿದಂತೆ ನನ್ನ ಪಿತನು ವಾಗ್ದಾನ ಮಾಡಿರುವ ವರಕ್ಕಾಗಿ ಕಾದುಕೊಂಡಿರಿ. ಏಕೆಂದರೆ, ಯೊವಾನ್ನನು ನೀರಿನಿಂದ ಸ್ನಾನದೀಕ್ಷೆ ಕೊಡುತ್ತಿದ್ದನು; ಆದರೆ ಇನ್ನು ಕೆಲವೇ ದಿನಗಳಲ್ಲಿ ನೀವು ಪವಿತ್ರಾತ್ಮ ಅವರಿಂದ ದೀಕ್ಷಾಸ್ನಾನ ಪಡೆಯುವಿರಿ,” ಎಂದು ಆಜ್ಞಾಪಿಸಿದರು.