1
ಪ್ರೇಷಿತರ ಕಾರ್ಯಕಲಾಪಗಳು 2:38
ಕನ್ನಡ ಸತ್ಯವೇದವು C.L. Bible (BSI)
ಅದಕ್ಕೆ ಪೇತ್ರನು, “ನಿಮ್ಮಲ್ಲಿ ಪ್ರತಿ ಒಬ್ಬನೂ ಪಶ್ಚಾತ್ತಾಪಪಟ್ಟು, ಪಾಪಕ್ಕೆ ವಿಮುಖನಾಗಿ ದೇವರಿಗೆ ಅಭಿಮುಖನಾಗಲಿ; ಯೇಸುಕ್ರಿಸ್ತರ ನಾಮದಲ್ಲಿ ದೀಕ್ಷಾಸ್ನಾನವನ್ನು ಪಡೆಯಲಿ. ಇದರಿಂದ ನೀವು ಪಾಪಕ್ಷಮೆಯನ್ನು ಪಡೆಯುವಿರಿ; ದೇವರ ವರವಾದ ಪವಿತ್ರಾತ್ಮರನ್ನು ಹೊಂದುವಿರಿ.
Compara
Explorar ಪ್ರೇಷಿತರ ಕಾರ್ಯಕಲಾಪಗಳು 2:38
2
ಪ್ರೇಷಿತರ ಕಾರ್ಯಕಲಾಪಗಳು 2:42
ಅಂದಿನಿಂದ ಅವರು ಪ್ರೇಷಿತರ ಬೋಧನೆಯನ್ನು ಕೇಳುವುದರಲ್ಲಿ ನಿರತರಾಗಿದ್ದರು; ಅನ್ಯೋನ್ಯವಾಗಿ ಬಾಳುತ್ತಿದ್ದರು; ರೊಟ್ಟಿ ಮುರಿಯುವ ಸಹಭೋಜನದಲ್ಲಿ ಪಾಲ್ಗೊಳ್ಳುತ್ತಿದ್ದರು ಹಾಗೂ ಪ್ರಾರ್ಥನಾಕೂಟಗಳಲ್ಲಿ ಭಾಗವಹಿಸುತ್ತಿದ್ದರು.
Explorar ಪ್ರೇಷಿತರ ಕಾರ್ಯಕಲಾಪಗಳು 2:42
3
ಪ್ರೇಷಿತರ ಕಾರ್ಯಕಲಾಪಗಳು 2:4
ಅವರೆಲ್ಲರೂ ಪವಿತ್ರಾತ್ಮಭರಿತರಾದರು. ಆ ಆತ್ಮಪ್ರೇರಣೆಯಿಂದ ಬೇರೆ ಬೇರೆ ಭಾಷೆಗಳಲ್ಲಿ ಮಾತನಾಡತೊಡಗಿದರು.
Explorar ಪ್ರೇಷಿತರ ಕಾರ್ಯಕಲಾಪಗಳು 2:4
4
ಪ್ರೇಷಿತರ ಕಾರ್ಯಕಲಾಪಗಳು 2:2-4
ಫಕ್ಕನೆ ಬಲವಾದ ಬಿರುಗಾಳಿ ಬೀಸುತ್ತಿದೆಯೋ ಎಂಬಂತೆ ಶಬ್ದವೊಂದು ಆಕಾಶದಿಂದ ಕೇಳಿಬಂತು. ಅದು ಅವರು ಕುಳಿತಿದ್ದ ಮನೆಯಲ್ಲೆಲ್ಲಾ ಮಾರ್ದನಿಸಿತು. ಅಲ್ಲದೆ ಅಗ್ನಿಜ್ವಾಲೆಗಳು ಕೆನ್ನಾಲಿಗೆಯಂತೆ ಕಾಣಿಸಿಕೊಂಡವು. ಅವು ವಿಂಗಡ ವಿಂಗಡವಾಗಿ ಪ್ರತಿಯೊಬ್ಬರ ಮೇಲೂ ನೆಲೆಸಿದವು. ಅವರೆಲ್ಲರೂ ಪವಿತ್ರಾತ್ಮಭರಿತರಾದರು. ಆ ಆತ್ಮಪ್ರೇರಣೆಯಿಂದ ಬೇರೆ ಬೇರೆ ಭಾಷೆಗಳಲ್ಲಿ ಮಾತನಾಡತೊಡಗಿದರು.
Explorar ಪ್ರೇಷಿತರ ಕಾರ್ಯಕಲಾಪಗಳು 2:2-4
5
ಪ್ರೇಷಿತರ ಕಾರ್ಯಕಲಾಪಗಳು 2:46-47
ದಿನಂಪ್ರತಿ ಅವರು ಒಮ್ಮನಸ್ಸಿನಿಂದ ದೇವಾಲಯದಲ್ಲಿ ಸಭೆ ಸೇರುತ್ತಿದ್ದರು. ತಮ್ಮ ಮನೆಗಳಲ್ಲಿ ರೊಟ್ಟಿ ಮುರಿಯುವ ಸಹಭೋಜನವನ್ನು ಏರ್ಪಡಿಸಿ ಸಂತೋಷದಿಂದಲೂ ಸಹೃದಯದಿಂದಲೂ ಭಾಗವಹಿಸುತ್ತಿದ್ದರು. ದೇವರನ್ನು ಸ್ತುತಿಸುತ್ತಾ ಸಕಲರಿಗೆ ಅಚ್ಚುಮೆಚ್ಚಾಗಿ ಬಾಳುತ್ತಿದ್ದರು. ಜೀವೋದ್ಧಾರವನ್ನು ಹೊಂದುತ್ತಿದ್ದವರನ್ನೆಲ್ಲಾ ಪ್ರಭು ಈ ಸಭೆಗೆ ದಿನೇದಿನೇ ಸೇರಿಸಿಕೊಳ್ಳುತ್ತಿದ್ದರು.
Explorar ಪ್ರೇಷಿತರ ಕಾರ್ಯಕಲಾಪಗಳು 2:46-47
6
ಪ್ರೇಷಿತರ ಕಾರ್ಯಕಲಾಪಗಳು 2:17
ಸುರಿಸುವೆನು ಸರ್ವರ ಮೇಲೂ ಎನ್ನಾತ್ಮವನು ಅಂತಿಮ ದಿನಗಳಲಿ; ಪ್ರವಾದಿಸುವರಾಗ ನಿಮ್ಮ ಕುವರ ಕುವರಿಯರು; ದಿವ್ಯದರ್ಶನ ಪಡೆವರು ನಿಮ್ಮ ಯುವಜನರು; ಕನಸುಕಾಣುವರು ನಿಮ್ಮ ವಯೋವೃದ್ಧರು.
Explorar ಪ್ರೇಷಿತರ ಕಾರ್ಯಕಲಾಪಗಳು 2:17
7
ಪ್ರೇಷಿತರ ಕಾರ್ಯಕಲಾಪಗಳು 2:44-45
ಭಕ್ತವಿಶ್ವಾಸಿಗಳೆಲ್ಲರೂ ಅನ್ಯೋನ್ಯವಾಗಿ ಬಾಳುತ್ತಿದ್ದರು. ತಮ್ಮಲ್ಲಿದ್ದುದನ್ನು ಹುದುವಾಗಿ ಹಂಚಿಕೊಳ್ಳುತ್ತಿದ್ದರು. ತಮ್ಮ ತಮ್ಮ ಆಸ್ತಿಪಾಸ್ತಿಯನ್ನು ಮಾರಿ ಬಂದ ಹಣವನ್ನು ಅವರವರ ಅವಶ್ಯಕತೆಗೆ ತಕ್ಕಂತೆ ಎಲ್ಲರಿಗೂ ಹಂಚುತ್ತಿದ್ದರು.
Explorar ಪ್ರೇಷಿತರ ಕಾರ್ಯಕಲಾಪಗಳು 2:44-45
8
ಪ್ರೇಷಿತರ ಕಾರ್ಯಕಲಾಪಗಳು 2:21
ಪ್ರಭುವಿನ ನಾಮಸ್ಮರಣೆ ಮಾಡುವವರೆಲ್ಲ ಪಡೆಯುವರಾಗ ಜೀವೋದ್ಧಾರ.
Explorar ಪ್ರೇಷಿತರ ಕಾರ್ಯಕಲಾಪಗಳು 2:21
9
ಪ್ರೇಷಿತರ ಕಾರ್ಯಕಲಾಪಗಳು 2:20
ರವಿ ಕಪ್ಪಾಗುವನು, ಶಶಿ ಕಡುಗೆಂಪಾಗುವನು, ಪ್ರಭುವಿನ ಮಹಿಮಾದಿನಕ್ಕೆ ಮುನ್ನ ಸಂಭವಿಸುವುವು ಇವೆಲ್ಲಾ.
Explorar ಪ್ರೇಷಿತರ ಕಾರ್ಯಕಲಾಪಗಳು 2:20
Inici
La Bíblia
Plans
Vídeos