1
ಯೊವಾನ್ನ 10:10
ಕನ್ನಡ ಸತ್ಯವೇದವು C.L. Bible (BSI)
ಕಳ್ಳನು ಬರುವುದು ಕಳ್ಳತನಕ್ಕಾಗಿ, ಕೊಲ್ಲುವುದಕ್ಕಾಗಿ ಮತ್ತು ನಾಶಮಾಡುವುದಕ್ಕಾಗಿ ಮಾತ್ರ. ನಾನು ಬಂದದ್ದಾದರೋ ಜೀವನೀಡಲು, ಯಥೇಚ್ಛವಾಗಿ ನೀಡಲು.
Compara
Explorar ಯೊವಾನ್ನ 10:10
2
ಯೊವಾನ್ನ 10:11
“ನಾನೇ ಉತ್ತಮ ಕುರಿಗಾಹಿ. ಉತ್ತಮ ಕುರಿಗಾಹಿಯು ಕುರಿಗಳಿಗೋಸ್ಕರ ತನ್ನ ಪ್ರಾಣವನ್ನೇ ಕೊಡುತ್ತಾನೆ.
Explorar ಯೊವಾನ್ನ 10:11
3
ಯೊವಾನ್ನ 10:27
ನನ್ನ ಕುರಿಗಳಾದರೋ ನನ್ನ ಸ್ವರವನ್ನು ಗುರುತಿಸುತ್ತವೆ. ನಾನು ಅವನ್ನು ಬಲ್ಲೆನು. ಅವು ನನ್ನನ್ನು ಹಿಂಬಾಲಿಸುತ್ತವೆ.
Explorar ಯೊವಾನ್ನ 10:27
4
ಯೊವಾನ್ನ 10:28
ನಾನು ಅವುಗಳಿಗೆ ನಿತ್ಯಜೀವವನ್ನು ಕೊಡುತ್ತೇನೆ. ಅವು ಎಂದಿಗೂ ನಾಶ ಆಗುವುದಿಲ್ಲ. ನನ್ನ ಕೈಯಿಂದ ಅವನ್ನು ಯಾರೂ ಕಸಿದುಕೊಳ್ಳಲಾರರು
Explorar ಯೊವಾನ್ನ 10:28
5
ಯೊವಾನ್ನ 10:9
ಹೌದು, ನಾನೇ ಬಾಗಿಲು, ನನ್ನ ಮೂಲಕ ಒಳಹೋಗುವವನು ಸುರಕ್ಷಿತನಾಗಿರುತ್ತಾನೆ. ಅವನು ಒಳಗೆ ಹೋಗುತ್ತಾನೆ, ಹೊರಗೆ ಬರುತ್ತಾನೆ; ಮೇವನ್ನು ಕಂಡುಕೊಳ್ಳುತ್ತಾನೆ.
Explorar ಯೊವಾನ್ನ 10:9
6
ಯೊವಾನ್ನ 10:14-15
ನಾನಾದರೋ ಉತ್ತಮ ಕುರಿಗಾಹಿ. ಪಿತನು ನನ್ನನ್ನು ಬಲ್ಲರು; ನಾನೂ ಪಿತನನ್ನು ಬಲ್ಲೆ. ಅಂತೆಯೇ ನಾನು ನನ್ನ ಕುರಿಗಳನ್ನು ಬಲ್ಲೆನು; ಅವು ನನ್ನನ್ನು ಬಲ್ಲವು. ಅವುಗಳಿಗೋಸ್ಕರ ನಾನು ನನ್ನ ಪ್ರಾಣವನ್ನೇ ಕೊಡುತ್ತೇನೆ.
Explorar ಯೊವಾನ್ನ 10:14-15
7
ಯೊವಾನ್ನ 10:29-30
ಅವನ್ನು ನನಗೆ ಕೊಟ್ಟ ಪಿತ ಸರ್ವಶ್ರೇಷ್ಠರು. ಪಿತನ ಕೈಯಿಂದ ಅವನ್ನು ಯಾರೂ ಕಸಿದುಕೊಳ್ಳಲಾರರು. ನಾನೂ ಪಿತನೂ ಒಂದೇ ಆಗಿದ್ದೇವೆ,” ಎಂದರು.
Explorar ಯೊವಾನ್ನ 10:29-30
8
9
ಯೊವಾನ್ನ 10:18
ನನ್ನ ಪ್ರಾಣವನ್ನು ಯಾರೂ ನನ್ನಿಂದ ಕಸಿದುಕೊಳ್ಳಲಾರರು; ನಾನಾಗಿಯೇ ಅದನ್ನು ಧಾರೆಯೆರೆಯುತ್ತೇನೆ. ಅದನ್ನು ಧಾರೆಯೆರೆಯುವ ಹಕ್ಕು ನನಗಿದೆ. ಅದನ್ನು ಪುನಃ ಪಡೆಯುವ ಹಕ್ಕು ಸಹ ನನಗಿದೆ. ಈ ಆಜ್ಞೆಯನ್ನು ನಾನು ನನ್ನ ಪಿತನಿಂದ ಪಡೆದಿದ್ದೇನೆ,” ಎಂದು ನುಡಿದರು.
Explorar ಯೊವಾನ್ನ 10:18
10
ಯೊವಾನ್ನ 10:7
ಆದುದರಿಂದ ಯೇಸು ಸ್ವಾಮಿ, “ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ: ಕುರಿಗಳಿಗೆ ನಾನೇ ಬಾಗಿಲು.
Explorar ಯೊವಾನ್ನ 10:7
11
ಯೊವಾನ್ನ 10:12
ಕುರಿಗಾಹಿಯಾಗಲಿ, ಕುರಿಗಳ ಒಡೆಯನಾಗಲಿ ಅಲ್ಲದ ಕೂಲಿಯಾಳು, ತೋಳ ಬರುವುದನ್ನು ಕಂಡದ್ದೇ, ಕುರಿಗಳನ್ನು ಬಿಟ್ಟು ಓಡಿಹೋಗುತ್ತಾನೆ. ತೋಳವು ಬಂದು ಕುರಿಗಳ ಮೇಲೆ ಎರಗಿ, ಮಂದೆಯನ್ನು ಚದರಿಸುತ್ತದೆ.
Explorar ಯೊವಾನ್ನ 10:12
12
ಯೊವಾನ್ನ 10:1
“ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ: ಕುರಿಹಟ್ಟಿಗೆ ಬಾಗಿಲ ಮೂಲಕ ಬರದೆ ಗೋಡೆ ಹತ್ತಿಬರುವವನು ಕಳ್ಳ ಹಾಗೂ ಕೊಳ್ಳೆಗಾರ.
Explorar ಯೊವಾನ್ನ 10:1
Inici
La Bíblia
Plans
Vídeos