1
ಲೂಕ. 15:20
ಕನ್ನಡ ಸತ್ಯವೇದವು C.L. Bible (BSI)
ಅಂತೆಯೇ ಎದ್ದು ತಂದೆಯ ಬಳಿಗೆ ಹೊರಟ. “ಮಗನು ಇನ್ನೂ ಅಷ್ಟು ದೂರದಲ್ಲಿ ಇರುವಾಗಲೇ ತಂದೆ ನೋಡಿದ. ಆತನ ಹೃದಯ ಕನಿಕರದಿಂದ ಕರಗಿಹೋಯಿತು. ಓಡಿಹೋಗಿ, ಮಗನನ್ನು ಬಿಗಿಯಾಗಿ ತಬ್ಬಿಕೊಂಡು ಮುತ್ತಿಟ್ಟ.
Compara
Explorar ಲೂಕ. 15:20
2
ಲೂಕ. 15:24
ಏಕೆಂದರೆ, ಈ ನನ್ನ ಮಗ ಸತ್ತುಹೋಗಿದ್ದ, ಈಗ ಬದುಕಿ ಬಂದಿದ್ದಾನೆ. ತಪ್ಪಿಹೋಗಿದ್ದ, ಈಗ ಸಿಕ್ಕಿದ್ದಾನೆ,’ ಎಂದು ಹೇಳಿದ. ಒಡನೆಯೇ ಹಬ್ಬದ ಸಡಗರ ತೊಡಗಿತು.
Explorar ಲೂಕ. 15:24
3
ಲೂಕ. 15:7
“ಅದೇ ರೀತಿಯಲ್ಲಿ, ಪಶ್ಚಾತ್ತಾಪದ ಅವಶ್ಯಕತೆಯಿಲ್ಲದ ತೊಂಬತ್ತೊಂಬತ್ತು ಸತ್ಪುರುಷರ ವಿಷಯವಾಗಿ ಸ್ವರ್ಗದಲ್ಲಿ ಉಂಟಾಗುವ ಸಂತೋಷಕ್ಕಿಂತ, ಪಶ್ಚಾತ್ತಾಪಪಟ್ಟು ಪಾಪಕ್ಕೆ ವಿಮುಖನಾಗಿ ದೇವರಿಗೆ ಅಭಿಮುಖನಾಗುವ ಒಬ್ಬ ಪಾಪಿಯ ವಿಷಯವಾಗಿ ಹೆಚ್ಚು ಸಂತೋಷ ಉಂಟಾಗುತ್ತದೆ ಎಂಬುದರಲ್ಲಿ ಸಂದೇಹವಿಲ್ಲ.
Explorar ಲೂಕ. 15:7
4
ಲೂಕ. 15:18
ನಾನು ಇದೀಗಲೇ ಹೊರಟು, ತಂದೆಯ ಬಳಿಗೆ ಹೋಗಿ, ‘ಅಪ್ಪಾ, ದೇವರಿಗೂ ನಿಮಗೂ ವಿರುದ್ಧವಾಗಿ ಪಾಪಮಾಡಿದ್ದೇನೆ; ನಿಮ್ಮ ಮಗನು ಎನಿಸಿಕೊಳ್ಳುವ ಯೋಗ್ಯತೆಯೂ ನನಗಿಲ್ಲ
Explorar ಲೂಕ. 15:18
5
ಲೂಕ. 15:21
ಆದರೂ ಮಗನು, ‘ಅಪ್ಪಾ, ದೇವರಿಗೂ ನಿಮಗೂ ವಿರುದ್ಧವಾಗಿ ಪಾಪಮಾಡಿದ್ದೇನೆ; ನಿಮ್ಮ ಮಗನೆನಿಸಿಕೊಳ್ಳುವ ಯೋಗ್ಯತೆಯೂ ನನಗಿಲ್ಲ’ ಎಂದ.
Explorar ಲೂಕ. 15:21
6
ಲೂಕ. 15:4
“ನಿಮ್ಮಲ್ಲಿ ಯಾರ ಬಳಿಯಾದರೂ ನೂರು ಕುರಿಗಳು ಇವೆ ಎನ್ನೋಣ. ಅವುಗಳಲ್ಲಿ ಒಂದು ಕುರಿ ಕಾಣದೆಹೋದಾಗ ಅವನೇನು ಮಾಡುತ್ತಾನೆ? ಇರುವ ತೊಂಬತ್ತೊಂಬತ್ತು ಕುರಿಗಳನ್ನು ಹುಲ್ಲುಗಾವಲಿನಲ್ಲೇ ಬಿಟ್ಟು ಕಾಣದೆಹೋದ ಆ ಒಂದು ಕುರಿ ಸಿಕ್ಕುವ ತನಕ ಹುಡುಕಿಕೊಂಡು ಹೋಗುತ್ತಾನಲ್ಲವೆ?
Explorar ಲೂಕ. 15:4
Inici
La Bíblia
Plans
Vídeos