1
ಲೂಕ. 21:36
ಕನ್ನಡ ಸತ್ಯವೇದವು C.L. Bible (BSI)
ಬಂದೊದಗಲಿರುವ ಇವೆಲ್ಲವುಗಳಿಂದ ಪಾರಾಗಿ ನರಪುತ್ರನ ಮುಂದೆ ನಿಲ್ಲಲು ನೀವು ಶಕ್ತರಾಗುವಂತೆ ನಿರಂತರವಾಗಿ ಪ್ರಾರ್ಥನೆಮಾಡುತ್ತಾ ಎಚ್ಚರಿಕೆಯಿಂದಿರಿ,” ಎಂದರು.
Compara
Explorar ಲೂಕ. 21:36
2
ಲೂಕ. 21:34
“ಮಿತಿಮೀರಿದ ಭೋಜನದಿಂದಾಗಲಿ, ಕುಡಿತದಿಂದಾಗಲಿ, ಲೌಕಿಕ ಚಿಂತೆಗಳಿಂದಾಗಲಿ ಮಂದಮತಿಗಳಾಗಬೇಡಿ. ಆ ದಿನವು ಅನಿರೀಕ್ಷಿತ ಉರುಲಿನಂತೆ ನಿಮ್ಮನ್ನು ಸಿಕ್ಕಿಸೀತು, ಜಾಗರೂಕರಾಗಿರಿ!
Explorar ಲೂಕ. 21:34
3
ಲೂಕ. 21:19
ಸೈರಣೆಯಿಂದಿರಿ, ಸಂರಕ್ಷಣೆಯನ್ನು ಪಡೆಯುವಿರಿ.
Explorar ಲೂಕ. 21:19
4
ಲೂಕ. 21:15
ಏಕೆಂದರೆ ನಿಮ್ಮ ವಿರೋಧಿಗಳಾರೂ ಪ್ರತಿಭಟಿಸಲು ಅಥವಾ ವಿರೋಧಿಸಲು ಆಗದಂಥ ವಾಕ್ಚಾತುರ್ಯವನ್ನೂ ಜ್ಞಾನಶಕ್ತಿಯನ್ನೂ ನಿಮಗೆ ಕೊಡುವೆನು.
Explorar ಲೂಕ. 21:15
5
ಲೂಕ. 21:33
ಭೂಮ್ಯಾಕಾಶಗಳು ಗತಿಸಿಹೋಗುತ್ತವೆ; ಆದರೆ ನನ್ನ ಮಾತುಗಳು ಶಾಶ್ವತವಾಗಿ ಉಳಿಯುತ್ತವೆ.
Explorar ಲೂಕ. 21:33
6
ಲೂಕ. 21:25-27
“ಸೂರ್ಯ, ಚಂದ್ರ, ನಕ್ಷತ್ರಗಳಲ್ಲಿ ವಿಚಿತ್ರ ಸೂಚನೆಗಳು ಕಾಣಿಸಿಕೊಳ್ಳುವುವು; ಮೊರೆಯುವ ತೆರೆಗಳ ಹಾಗೂ ಭೋರ್ಗರೆಯುವ ಸಮುದ್ರದ ನಿಮಿತ್ತ ಭೂಮಿಯಲ್ಲಿ ಜನಾಂಗಗಳು ದಿಕ್ಕುತೋಚದೆ ತತ್ತರಿಸಿಹೋಗುವುವು. ಗ್ರಹಶಕ್ತಿಗಳು ಕದಲುವುದರಿಂದ ಧರೆಯಲ್ಲಿ ಏನೇನು ಸಂಭವಿಸುವುದೋ ಎಂಬ ಭಯಭೀತಿಯಿಂದ ಮಾನವರು ದಿಗ್ಭ್ರಮೆಗೊಳ್ಳುವರು. ಆಗ ನರಪುತ್ರನು ಮಹಾಶಕ್ತಿಯಿಂದಲೂ ಮಹಿಮಾ ಪ್ರಭಾವದಿಂದಲೂ ಮೇಘಾರೂಢನಾಗಿ ಬರುವುದನ್ನು ಜನರು ಕಾಣುವರು.
Explorar ಲೂಕ. 21:25-27
7
ಲೂಕ. 21:17
ನೀವು ನನ್ನವರು ಆದುದರಿಂದಲೇ ಎಲ್ಲರೂ ನಿಮ್ಮನ್ನು ದ್ವೇಷಿಸುವರು.
Explorar ಲೂಕ. 21:17
8
ಲೂಕ. 21:11
ಭೀಕರ ಭೂಕಂಪಗಳಾಗುವುವು; ಕ್ಷಾಮಡಾಮರಗಳು ತಲೆದೋರುವುವು, ಭಯಂಕರ ಘಟನೆಗಳೂ ಬಾಹ್ಯಾಕಾಶದಲ್ಲಿ ಅಪೂರ್ವ ಸೂಚನೆಗಳೂ ಕಾಣಿಸಿಕೊಳ್ಳುವುವು.
Explorar ಲೂಕ. 21:11
9
ಲೂಕ. 21:9-10
ಸಮರ ಸಂಕಲಹಗಳ ಸುದ್ದಿ ಬಂದಾಗ ದಿಗಿಲುಗೊಳ್ಳಬೇಡಿ; ಇವೆಲ್ಲವೂ ಮೊದಲು ಸಂಭವಿಸಲೇಬೇಕು. ಆದರೂ ಅಂತ್ಯವು ಕೂಡಲೇ ಬರುವುದಿಲ್ಲ,” ಎಂದರು. ಅದೂ ಅಲ್ಲದೆ ಯೇಸು ಇಂತೆಂದರು: “ಜನಾಂಗಕ್ಕೆ ವಿರುದ್ಧವಾಗಿ ಜನಾಂಗ, ರಾಷ್ಟ್ರಕ್ಕೆ ವಿರುದ್ಧವಾಗಿ ರಾಷ್ಟ್ರ ಯುದ್ಧಕ್ಕಿಳಿಯುವುವು
Explorar ಲೂಕ. 21:9-10
10
ಲೂಕ. 21:25-26
“ಸೂರ್ಯ, ಚಂದ್ರ, ನಕ್ಷತ್ರಗಳಲ್ಲಿ ವಿಚಿತ್ರ ಸೂಚನೆಗಳು ಕಾಣಿಸಿಕೊಳ್ಳುವುವು; ಮೊರೆಯುವ ತೆರೆಗಳ ಹಾಗೂ ಭೋರ್ಗರೆಯುವ ಸಮುದ್ರದ ನಿಮಿತ್ತ ಭೂಮಿಯಲ್ಲಿ ಜನಾಂಗಗಳು ದಿಕ್ಕುತೋಚದೆ ತತ್ತರಿಸಿಹೋಗುವುವು. ಗ್ರಹಶಕ್ತಿಗಳು ಕದಲುವುದರಿಂದ ಧರೆಯಲ್ಲಿ ಏನೇನು ಸಂಭವಿಸುವುದೋ ಎಂಬ ಭಯಭೀತಿಯಿಂದ ಮಾನವರು ದಿಗ್ಭ್ರಮೆಗೊಳ್ಳುವರು.
Explorar ಲೂಕ. 21:25-26
11
ಲೂಕ. 21:10
ಅದೂ ಅಲ್ಲದೆ ಯೇಸು ಇಂತೆಂದರು: “ಜನಾಂಗಕ್ಕೆ ವಿರುದ್ಧವಾಗಿ ಜನಾಂಗ, ರಾಷ್ಟ್ರಕ್ಕೆ ವಿರುದ್ಧವಾಗಿ ರಾಷ್ಟ್ರ ಯುದ್ಧಕ್ಕಿಳಿಯುವುವು
Explorar ಲೂಕ. 21:10
12
ಲೂಕ. 21:8
ಅದಕ್ಕೆ ಯೇಸುಸ್ವಾಮಿ, “ನೀವು ಮೋಸಹೋಗದಂತೆ ಜಾಗರೂಕರಾಗಿರಿ. ‘ಅನೇಕರು ನಾನೇ ಆತ, ನಾನೇ ಆತ,’ ಎನ್ನುತ್ತಾ ನನ್ನ ಹೆಸರನ್ನೇ ಇಟ್ಟುಕೊಂಡು ಬಂದು, ‘ಕಾಲವು ಸಮೀಪಿಸಿಬಿಟ್ಟಿತು,’ ಎಂದು ಹೇಳುತ್ತಾರೆ. ಅವರನ್ನು ಹಿಂಬಾಲಿಸಬೇಡಿ.
Explorar ಲೂಕ. 21:8
Inici
La Bíblia
Plans
Vídeos