“ಶಾಸ್ತ್ರಿಗಳ ವಿಷಯದಲ್ಲಿ ಎಚ್ಚರಿಕೆಯಾಗಿರಿ. ಅವರು ನಿಲುವಂಗಿಗಳನ್ನು ತೊಟ್ಟುಕೊಂಡು ತಿರುಗಾಡುವುದರಲ್ಲಿ ಮನಸ್ಸುಳ್ಳವರೂ, ಅಂಗಡಿಬೀದಿಗಳಲ್ಲಿ ನಮಸ್ಕಾರಗಳು, ಸಭಾಮಂದಿರಗಳಲ್ಲಿ ಮುಖ್ಯ ಪೀಠಗಳು, ಔತಣಕೂಟಗಳಲ್ಲಿ ಪ್ರಥಮಸ್ಥಾನ, ಇವುಗಳನ್ನು ಬಯಸುವವರೂ ಆಗಿದ್ದಾರೆ. ಅವರು ವಿಧವೆಯರ ಮನೆಗಳನ್ನು ನುಂಗಿ, ನಟನೆಗಾಗಿ ದೇವರಿಗೆ ಉದ್ದವಾದ ಪ್ರಾರ್ಥನೆಗಳನ್ನು ಮಾಡುತ್ತಾರೆ. ಇಂಥವರು ಹೆಚ್ಚಾದ ದಂಡನೆಯನ್ನು ಹೊಂದುವರು” ಅಂದನು.