1
ಲೂಕ 22:42
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019
“ತಂದೆಯೇ, ನಿನಗೆ ಇಷ್ಟವಿದ್ದರೆ ಈ ಪಾತ್ರೆಯನ್ನು ನನ್ನಿಂದ ತೊಲಗಿಸು. ಹೇಗೂ ನನ್ನ ಚಿತ್ತವಲ್ಲ, ನಿನ್ನ ಚಿತ್ತದಂತೆಯೇ ಆಗಲಿ” ಪ್ರಾರ್ಥಿಸಿದನು.
Compara
Explorar ಲೂಕ 22:42
2
ಲೂಕ 22:32
ಆದರೆ ನಿನ್ನ ನಂಬಿಕೆ ಕುಂದಿಹೋಗಬಾರದೆಂದು ನಾನು ನಿನ್ನ ವಿಷಯದಲ್ಲಿ ದೇವರಿಗೆ ವಿಜ್ಞಾಪನೆ ಮಾಡಿಕೊಂಡೆನು. ನೀನು ತಿರುಗಿಕೊಂಡ ಮೇಲೆ ನಿನ್ನ ಸಹೋದರರನ್ನು ದೃಢಪಡಿಸು” ಎಂದು ಹೇಳಿದನು.
Explorar ಲೂಕ 22:32
3
ಲೂಕ 22:19
ಬಳಿಕ ಆತನು ರೊಟ್ಟಿಯನ್ನು ತೆಗೆದುಕೊಂಡು ಸ್ತೋತ್ರಮಾಡಿ ಮುರಿದು ಅವರಿಗೆ ಕೊಟ್ಟು, “ಇದು ನಿಮಗೋಸ್ಕರ ಕೊಟ್ಟಿರುವ ನನ್ನ ದೇಹ, ನನ್ನನ್ನು ನೆನಪಿಸಿಕೊಳ್ಳುವುದಕ್ಕೋಸ್ಕರ ಹೀಗೆ ಮಾಡಿರಿ” ಅಂದನು.
Explorar ಲೂಕ 22:19
4
ಲೂಕ 22:20
ಊಟವಾದ ಮೇಲೆ ಆತನು ಅದೇ ರೀತಿಯಾಗಿ ಪಾತ್ರೆಯನ್ನು ತೆಗೆದುಕೊಂಡು, “ಈ ಪಾತ್ರೆಯು ನಿಮಗೋಸ್ಕರ ಸುರಿಸಲ್ಪಡುವ, ನನ್ನ ರಕ್ತದಿಂದ ಸ್ಥಾಪಿತವಾಗುವ ಹೊಸ ಒಡಂಬಡಿಕೆಯನ್ನು ಸೂಚಿಸುತ್ತದೆ.
Explorar ಲೂಕ 22:20
5
ಲೂಕ 22:44
ಯೇಸು ತೀವ್ರವಾದ ಮನೋವ್ಯಥೆಯುಳ್ಳವನಾಗಿ, ಆಸಕ್ತಿಯಿಂದ ಪ್ರಾರ್ಥಿಸುತ್ತಿರಲಾಗಿ, ಆತನ ಬೆವರು ರಕ್ತದ ಹನಿಗಳೋಪಾದಿಯಲ್ಲಿ ನೆಲಕ್ಕೆ ಬೀಳುತ್ತಿತ್ತು.
Explorar ಲೂಕ 22:44
6
ಲೂಕ 22:26
ನೀವು ಹಾಗಿರಬಾರದು, ನಿಮ್ಮಲ್ಲಿ ದೊಡ್ಡವನು ಚಿಕ್ಕವನಂತಾಗಬೇಕು, ಮುಖ್ಯಸ್ಥನು ಸೇವಕನಂತಾಗಬೇಕು.
Explorar ಲೂಕ 22:26
7
ಲೂಕ 22:34
ಆತನು, “ಪೇತ್ರನೇ, ನನ್ನ ವಿಷಯದಲ್ಲಿ ಇವನನ್ನು ಅರಿಯೆನೆಂದು ನೀನು ಮೂರು ಸಾರಿ ಹೇಳುವ ತನಕ ಈಹೊತ್ತು ಕೋಳಿ ಕೂಗುವುದಿಲ್ಲವೆಂದು ನಿನಗೆ ಹೇಳುತ್ತೇನೆ” ಅಂದನು.
Explorar ಲೂಕ 22:34
Inici
La Bíblia
Plans
Vídeos