1
ಆದಿಕಾಂಡ 22:14
ಕನ್ನಡ ಸಮಕಾಲಿಕ ಅನುವಾದ
ಅಬ್ರಹಾಮನು ಆ ಸ್ಥಳಕ್ಕೆ ಯೆಹೋವ ಯೀರೆ ಎಂದು ಹೆಸರಿಟ್ಟನು. “ಯೆಹೋವ ದೇವರು ಪರ್ವತದ ಮೇಲೆ ಒದಗಿಸುವರು,” ಎಂದು ಇಂದಿನವರೆಗೂ ಜನರು ಹೇಳುತ್ತಾರೆ.
Compara
Explorar ಆದಿಕಾಂಡ 22:14
2
ಆದಿಕಾಂಡ 22:2
ಆಗ ದೇವರು, “ನೀನು ಪ್ರೀತಿ ಮಾಡುವ ನಿನ್ನ ಒಬ್ಬನೇ ಮಗ ಇಸಾಕನನ್ನು ಈಗ ತೆಗೆದುಕೊಂಡು, ಮೊರೀಯಾ ದೇಶಕ್ಕೆ ಹೋಗಿ, ಅಲ್ಲಿ ನಾನು ನಿನಗೆ ಹೇಳುವ ಒಂದು ಬೆಟ್ಟದ ಮೇಲೆ ಅವನನ್ನು ದಹನಬಲಿಯಾಗಿ ಅರ್ಪಿಸು,” ಎಂದರು.
Explorar ಆದಿಕಾಂಡ 22:2
3
ಆದಿಕಾಂಡ 22:12
ಯೆಹೋವ ದೇವರ ದೂತನು ಅಬ್ರಹಾಮನಿಗೆ, “ಹುಡುಗನ ಮೇಲೆ ಕೈ ಹಾಕಬೇಡ; ಅವನಿಗೆ ಏನೂ ಮಾಡಬೇಡ; ಏಕೆಂದರೆ ನೀನು ದೇವರಿಗೆ ಭಯಪಡುತ್ತೀ ಎಂದು ಈಗ ನಾನು ತಿಳಿದಿದ್ದೇನೆ. ನೀನು ನಿನ್ನ ಒಬ್ಬನೇ ಮಗನನ್ನು ನನಗೆ ಅರ್ಪಿಸುವುದಕ್ಕೆ ಹಿಂಜರಿಯಲಿಲ್ಲ,” ಎಂದು ಹೇಳಿದನು.
Explorar ಆದಿಕಾಂಡ 22:12
4
ಆದಿಕಾಂಡ 22:8
ಅಬ್ರಹಾಮನು, “ನನ್ನ ಮಗನೇ, ದೇವರೇ ದಹನಬಲಿಗೋಸ್ಕರ ಕುರಿಮರಿಯನ್ನು ಒದಗಿಸುವರು,” ಎಂದು ಉತ್ತರಕೊಟ್ಟನು. ಹೀಗೆ ಅವರಿಬ್ಬರೂ ಜೊತೆಯಲ್ಲಿ ಹೋದರು.
Explorar ಆದಿಕಾಂಡ 22:8
5
ಆದಿಕಾಂಡ 22:17-18
ನಿಶ್ಚಯವಾಗಿ ನಾನು ನಿನ್ನನ್ನು ಆಶೀರ್ವದಿಸೇ ಆಶೀರ್ವದಿಸುವೆನು. ನಿನ್ನ ಸಂತಾನವನ್ನು ಆಕಾಶದ ನಕ್ಷತ್ರಗಳ ಹಾಗೆಯೂ ಸಮುದ್ರದ ತೀರದಲ್ಲಿರುವ ಮರಳಿನ ಹಾಗೆಯೂ ಹೆಚ್ಚಿಸುವೆನು. ನಿನ್ನ ಸಂತಾನದವರು ತಮ್ಮ ಶತ್ರುಗಳ ಪಟ್ಟಣಗಳನ್ನು ವಶಪಡಿಸಿಕೊಳ್ಳುವರು. ನೀನು ನನಗೆ ವಿಧೇಯನಾದದ್ದರಿಂದ, ನಿನ್ನ ಸಂತತಿಯ ಮೂಲಕ ಭೂಲೋಕದ ಎಲ್ಲಾ ಜನಾಂಗಗಳಿಗೂ ಆಶೀರ್ವಾದ ಉಂಟಾಗುವುದು,” ಎಂದರು.
Explorar ಆದಿಕಾಂಡ 22:17-18
6
ಆದಿಕಾಂಡ 22:1
ಕೆಲವು ಕಾಲದ ನಂತರ, ದೇವರು ಅಬ್ರಹಾಮನನ್ನು ಪರೀಕ್ಷಿಸುವುದಕ್ಕಾಗಿ ಅವನಿಗೆ, “ಅಬ್ರಹಾಮನೇ,” ಎಂದು ಕರೆದರು. ಅದಕ್ಕವನು, “ಇಗೋ, ಇಲ್ಲಿದ್ದೇನೆ,” ಎಂದು ಉತ್ತರಕೊಟ್ಟನು.
Explorar ಆದಿಕಾಂಡ 22:1
7
ಆದಿಕಾಂಡ 22:11
ಆಗ ಯೆಹೋವ ದೇವರ ದೂತನು ಆಕಾಶದೊಳಗಿಂದ, “ಅಬ್ರಹಾಮನೇ, ಅಬ್ರಹಾಮನೇ,” ಎಂದು ಅವನನ್ನು ಕರೆದನು. ಅವನು, “ಇಲ್ಲಿ ಇದ್ದೇನೆ,” ಎಂದನು.
Explorar ಆದಿಕಾಂಡ 22:11
8
ಆದಿಕಾಂಡ 22:15-16
ಯೆಹೋವ ದೇವರ ದೂತನು ಆಕಾಶದೊಳಗಿಂದ ಎರಡನೆಯ ಸಾರಿ ಅಬ್ರಹಾಮನನ್ನು ಕರೆದು ಅವನಿಗೆ, “ನೀನು ಈ ಕಾರ್ಯವನ್ನು ಮಾಡಿ, ನಿನ್ನ ಒಬ್ಬನೇ ಮಗನನ್ನು ಸಹ ನನಗೆ ಕೊಡುವುದಕ್ಕೆ ಹಿಂಜರಿಯದೆ ಇದ್ದುದರಿಂದ, ಯೆಹೋವ ದೇವರಾದ ನಾನು ನಿನಗೆ ಪ್ರಮಾಣವಾಗಿ ಹೇಳುವುದೇನಂದರೆ
Explorar ಆದಿಕಾಂಡ 22:15-16
9
ಆದಿಕಾಂಡ 22:9
ದೇವರು ಅವನಿಗೆ ಹೇಳಿದ ಸ್ಥಳಕ್ಕೆ ಬಂದಾಗ, ಅಬ್ರಹಾಮನು ಅಲ್ಲಿ ಬಲಿಪೀಠವನ್ನು ಕಟ್ಟಿ, ಕಟ್ಟಿಗೆಗಳನ್ನು ಅದರ ಮೇಲೆ ಕ್ರಮವಾಗಿ ಜೋಡಿಸಿ, ತನ್ನ ಮಗ ಇಸಾಕನನ್ನು ಕಟ್ಟಿ, ಬಲಿಪೀಠದ ಮೇಲೆ ಇದ್ದ ಕಟ್ಟಿಗೆಗಳ ಮೇಲೆ ಇಟ್ಟನು.
Explorar ಆದಿಕಾಂಡ 22:9
Inici
La Bíblia
Plans
Vídeos