1
ಆದಿಕಾಂಡ 25:23
ಕನ್ನಡ ಸಮಕಾಲಿಕ ಅನುವಾದ
ಯೆಹೋವ ದೇವರು ಆಕೆಗೆ ಹೀಗೆ ಹೇಳಿದರು: “ನಿನ್ನ ಹೊಟ್ಟೆಯಲ್ಲಿ ಎರಡು ಜನಾಂಗಗಳು ಇವೆ. ನಿನ್ನ ಗರ್ಭದೊಳಗಿನಿಂದಲೇ ಎರಡು ಜನಾಂಗಗಳು ಹೊರಟುಬಂದು ಬೇರೆಯಾಗುವುವು. ಒಂದು ಇನ್ನೊಂದಕ್ಕಿಂತ ಬಲವಾಗಿರುವುದು. ಇದಲ್ಲದೆ ಹಿರಿಯನು ಕಿರಿಯವನಿಗೆ ಸೇವೆಮಾಡುವನು.”
Compara
Explorar ಆದಿಕಾಂಡ 25:23
2
ಆದಿಕಾಂಡ 25:30
ಏಸಾವನು ಯಾಕೋಬನಿಗೆ, “ಆ ಕೆಂಪಾದ ಪದಾರ್ಥವನ್ನು ತಿನ್ನುವುದಕ್ಕೆ ನನಗೆ ಕೊಡು, ನಾನು ದಣಿದಿದ್ದೇನೆ,” ಎಂದನು. ಆದ್ದರಿಂದ ಅವನಿಗೆ, ಎದೋಮ್, ಎಂದು ಹೆಸರಾಯಿತು.
Explorar ಆದಿಕಾಂಡ 25:30
3
ಆದಿಕಾಂಡ 25:21
ಆದರೆ ಆಕೆಯು ಬಂಜೆಯಾಗಿದ್ದುದರಿಂದ ಇಸಾಕನು ತನ್ನ ಹೆಂಡತಿಗೋಸ್ಕರ ಯೆಹೋವ ದೇವರನ್ನು ಬೇಡಿಕೊಂಡನು. ಯೆಹೋವ ದೇವರು ಅವನ ಬೇಡಿಕೆಯನ್ನು ಪೂರೈಸಿದರು. ಆದ್ದರಿಂದ ಅವನ ಹೆಂಡತಿ ರೆಬೆಕ್ಕಳು ಗರ್ಭಿಣಿಯಾದಳು.
Explorar ಆದಿಕಾಂಡ 25:21
4
ಆದಿಕಾಂಡ 25:32-33
ಏಸಾವನು, “ಇಗೋ, ನಾನು ಸಾಯುತ್ತಿದ್ದೇನೆ, ಜೇಷ್ಠ ಪುತ್ರನ ಹಕ್ಕಿನಿಂದ ನನಗೇನು ಲಾಭ?” ಎಂದನು. ಯಾಕೋಬನು, “ಈ ಹೊತ್ತು ನನಗೆ ಪ್ರಮಾಣಮಾಡು,” ಎಂದನು. ಆಗ ಅವನು ಯಾಕೋಬನಿಗೆ ಪ್ರಮಾಣಮಾಡಿ, ತನ್ನ ಜೇಷ್ಠ ಪುತ್ರನ ಹಕ್ಕನ್ನು ಅವನಿಗೆ ಮಾರಿದನು.
Explorar ಆದಿಕಾಂಡ 25:32-33
5
ಆದಿಕಾಂಡ 25:26
ತರುವಾಯ ಅವನ ತಮ್ಮನು ಏಸಾವನ ಹಿಮ್ಮಡಿಯನ್ನು ಕೈಯಿಂದ ಹಿಡಿದುಕೊಂಡು ಹೊರಗೆ ಬಂದನು. ಅವನಿಗೆ, ಯಾಕೋಬ, ಎಂದು ಹೆಸರಿಟ್ಟರು. ಆಕೆಯು ಇವರನ್ನು ಹೆತ್ತಾಗ ಇಸಾಕನು ಅರವತ್ತು ವರ್ಷದವನಾಗಿದ್ದನು.
Explorar ಆದಿಕಾಂಡ 25:26
6
ಆದಿಕಾಂಡ 25:28
ಬೇಟೆಯಲ್ಲಿ ಆಸಕ್ತನಾಗಿದ್ದ ಇಸಾಕನು ಏಸಾವನನ್ನು ಪ್ರೀತಿಸಿದನು. ಆದರೆ ರೆಬೆಕ್ಕಳು ಯಾಕೋಬನನ್ನು ಪ್ರೀತಿಸಿದಳು.
Explorar ಆದಿಕಾಂಡ 25:28
Inici
La Bíblia
Plans
Vídeos