1
ಆದಿಕಾಂಡ 32:28
ಕನ್ನಡ ಸಮಕಾಲಿಕ ಅನುವಾದ
ಅದಕ್ಕೆ ಅವನು, “ನಿನ್ನ ಹೆಸರು ಇನ್ನು ಮೇಲೆ ಯಾಕೋಬನೆಂದು ಎನಿಸಿಕೊಳ್ಳದೆ, ಇಸ್ರಾಯೇಲ್ ಎಂದು ನಿನಗೆ ಹೆಸರಾಗುವುದು. ಏಕೆಂದರೆ ನೀನು ದೇವರ ಸಂಗಡವೂ, ಮನುಷ್ಯರ ಸಂಗಡವೂ ಹೋರಾಡಿ ಜಯಿಸಿದ್ದೀ,” ಎಂದನು.
Compara
Explorar ಆದಿಕಾಂಡ 32:28
2
ಆದಿಕಾಂಡ 32:26
ಅವನು ಯಾಕೋಬನಿಗೆ, “ಉದಯವಾಯಿತು, ನನ್ನನ್ನು ಹೋಗಗೊಡು,” ಎಂದಾಗ. ಯಾಕೋಬನು, “ನೀನು ನನ್ನನ್ನು ಆಶೀರ್ವದಿಸದ ಹೊರತು, ನಾನು ನಿನ್ನನ್ನು ಹೋಗಗೊಡಿಸೆನು,” ಎಂದನು.
Explorar ಆದಿಕಾಂಡ 32:26
3
ಆದಿಕಾಂಡ 32:24
ಆಗ ಯಾಕೋಬನು ಒಬ್ಬನೇ ಉಳಿದಾಗ, ಒಬ್ಬ ಮನುಷ್ಯನು ಉದಯವಾಗುವವರೆಗೆ ಅವನ ಸಂಗಡ ಹೋರಾಡಿದನು.
Explorar ಆದಿಕಾಂಡ 32:24
4
ಆದಿಕಾಂಡ 32:30
ಆಗ ಯಾಕೋಬನು, “ನಾನು ದೇವರನ್ನು ಮುಖಾಮುಖಿಯಾಗಿ ನೋಡಿದರೂ, ನನ್ನ ಪ್ರಾಣ ಉಳಿಯಿತು,” ಎಂದು ಹೇಳಿ ಆ ಸ್ಥಳಕ್ಕೆ ಪೆನೀಯೇಲ್ ಎಂದು ಹೆಸರಿಟ್ಟನು.
Explorar ಆದಿಕಾಂಡ 32:30
5
ಆದಿಕಾಂಡ 32:25
ಆ ಮನುಷ್ಯನು ಅವನನ್ನು ಜಯಿಸದೆ ಇರುವುದನ್ನು ಕಂಡು, ಅವನ ತೊಡೆಯ ಕೀಲನ್ನು ಮುಟ್ಟಿದನು. ಅವನು ಹಾಗೆಯೇ ಸಂಗಡ ಹೋರಾಡುತ್ತಿರುವಾಗಲೇ ಯಾಕೋಬನ ತೊಡೆಯ ಕೀಲು ತಪ್ಪಿತು.
Explorar ಆದಿಕಾಂಡ 32:25
6
ಆದಿಕಾಂಡ 32:27
ಆ ಮನುಷ್ಯನು ಅವನಿಗೆ, “ನಿನ್ನ ಹೆಸರು ಏನು?” ಎಂದಾಗ. ಅವನು, “ಯಾಕೋಬ,” ಎಂದನು.
Explorar ಆದಿಕಾಂಡ 32:27
7
ಆದಿಕಾಂಡ 32:29
ಯಾಕೋಬನು, “ನಿನ್ನ ಹೆಸರನ್ನು ನನಗೆ ತಿಳಿಸು,” ಎಂದು ಅವನನ್ನು ಕೇಳಿಕೊಂಡನು. ಆತನು, “ನನ್ನ ಹೆಸರನ್ನು ಏಕೆ ಕೇಳುತ್ತೀ?” ಎಂದು ಹೇಳಿ ಅವನನ್ನು ಅಲ್ಲೇ ಆಶೀರ್ವದಿಸಿದನು.
Explorar ಆದಿಕಾಂಡ 32:29
8
ಆದಿಕಾಂಡ 32:10
ನೀವು ನಿಮ್ಮ ದಾಸನಿಗೆ ತೋರಿಸಿದ ಎಲ್ಲಾ ಕರುಣೆಗಳಿಗೂ, ಎಲ್ಲಾ ಸತ್ಯಕ್ಕೂ ಅಯೋಗ್ಯನಾಗಿದ್ದೇನೆ. ಏಕೆಂದರೆ ನಾನು ಮೊದಲು ಈ ಯೊರ್ದನ್ ಹೊಳೆಯನ್ನು ದಾಟಿದಾಗ, ನನ್ನ ಕೈಯಲ್ಲಿ ಕೋಲು ಮಾತ್ರವೇ ಇತ್ತು, ಈಗ ನನಗೆ ಎರಡು ಗುಂಪುಗಳಿವೆ.
Explorar ಆದಿಕಾಂಡ 32:10
9
ಆದಿಕಾಂಡ 32:32
ಆತನು ಯಾಕೋಬನ ತೊಡೆಯ ಕೀಲನ್ನು ಮುದುರಿದ ನರದಲ್ಲಿ ಮುಟ್ಟಿದ್ದರಿಂದ ಇಸ್ರಾಯೇಲರು ತೊಡೆಯ ಕೀಲಿನ ಮೇಲಿರುವ ಮುದುರಿದ ನರವನ್ನು ಈ ದಿನದವರೆಗೂ ತಿನ್ನುವುದಿಲ್ಲ.
Explorar ಆದಿಕಾಂಡ 32:32
10
ಆದಿಕಾಂಡ 32:9
ಇದಲ್ಲದೆ ಯಾಕೋಬನು, “ನನ್ನ ತಂದೆ ಅಬ್ರಹಾಮನ ದೇವರೇ, ನನ್ನ ತಂದೆ ಇಸಾಕನ ದೇವರೇ, ನಿಮ್ಮ ದೇಶಕ್ಕೂ, ನಿನ್ನ ಬಂಧುಗಳ ಬಳಿಗೂ ಹಿಂದಿರುಗಿ ಹೋಗು. ಆಗ ನಾನು ನಿನಗೆ ಒಳ್ಳೆಯದನ್ನು ಮಾಡುವೆನು ಎಂದು ನನಗೆ ಹೇಳಿದ ಯೆಹೋವ ದೇವರೇ
Explorar ಆದಿಕಾಂಡ 32:9
11
ಆದಿಕಾಂಡ 32:11
ನನ್ನ ಅಣ್ಣ ಏಸಾವನ ಕೈಯಿಂದ ನನ್ನನ್ನು ತಪ್ಪಿಸಿರಿ. ಏಕೆಂದರೆ ಅವನು ಬಂದು ನನ್ನನ್ನೂ, ಮಕ್ಕಳೊಂದಿಗೆ ತಾಯಂದಿರನ್ನೂ, ದಾಳಿಮಾಡುವನು ಎಂದು ನಾನು ಅವನಿಗೆ ಭಯಪಡುತ್ತೇನೆ.
Explorar ಆದಿಕಾಂಡ 32:11
Inici
La Bíblia
Plans
Vídeos