1
ಆದಿಕಾಂಡ 35:11-12
ಕನ್ನಡ ಸಮಕಾಲಿಕ ಅನುವಾದ
ದೇವರು ಅವನಿಗೆ, “ಸರ್ವಶಕ್ತ ದೇವರು ನಾನೇ. ನೀನು ಅಭಿವೃದ್ಧಿಯಾಗಿ, ನಿನ್ನ ಸಂತಾನವು ಹೆಚ್ಚಲಿ. ಜನಾಂಗವೂ ಜನಾಂಗಗಳ ಗುಂಪೂ ನಿನ್ನಿಂದ ಉಂಟಾಗುವುವು. ಅರಸರು ನಿನ್ನಿಂದ ಹುಟ್ಟುವರು. ಇದಲ್ಲದೆ ಅಬ್ರಹಾಮನಿಗೂ, ಇಸಾಕನಿಗೂ ನಾನು ಕೊಟ್ಟ ದೇಶವನ್ನು ನಿನಗೆ ಕೊಡುವೆನು. ನಿನ್ನ ತರುವಾಯ ನಿನ್ನ ಸಂತತಿಗೂ ಈ ದೇಶವನ್ನು ಕೊಡುವೆನು,” ಎಂದರು.
Compara
Explorar ಆದಿಕಾಂಡ 35:11-12
2
ಆದಿಕಾಂಡ 35:3
ನಾವು ಇಲ್ಲಿಂದ ಹೊರಟು ಬೇತೇಲಿಗೆ ಹೋಗೋಣ. ಕಷ್ಟಕಾಲದಲ್ಲಿ ನನ್ನ ವಿಜ್ಞಾಪನೆಯನ್ನು ಆಲಿಸಿ, ನಾನು ಹೋದ ದಾರಿಯಲ್ಲಿ ನನ್ನ ಸಂಗಡ ಇದ್ದ ದೇವರಿಗೆ ಅಲ್ಲಿ ನಾನು ಬಲಿಪೀಠವನ್ನು ಕಟ್ಟುವೆನು,” ಎಂದನು.
Explorar ಆದಿಕಾಂಡ 35:3
3
ಆದಿಕಾಂಡ 35:10
ದೇವರು ಅವನಿಗೆ, “ಈಗ ನಿನಗೆ ಯಾಕೋಬನೆಂದು ಹೆಸರಿರುವುದು. ಆದರೆ ಇನ್ನು ಮೇಲೆ ನೀನು ಯಾಕೋಬನೆಂದು ಕರೆಸಿಕೊಳ್ಳದೆ, ‘ಇಸ್ರಾಯೇಲ್,’ ಎಂದು ಕರೆಸಿಕೊಳ್ಳುವೆ,” ಎಂದು ಹೇಳಿ, ಅವನಿಗೆ ಇಸ್ರಾಯೇಲ್ ಎಂದು ಹೆಸರಿಟ್ಟರು.
Explorar ಆದಿಕಾಂಡ 35:10
4
ಆದಿಕಾಂಡ 35:2
ಆಗ ಯಾಕೋಬನು ತನ್ನ ಮನೆಯವರಿಗೂ, ತನ್ನ ಸಂಗಡ ಇದ್ದವರೆಲ್ಲರಿಗೂ, “ನಿಮ್ಮ ಮಧ್ಯದಲ್ಲಿರುವ ಅನ್ಯದೇವರುಗಳನ್ನು ತೆಗೆದುಹಾಕಿ ಶುದ್ಧರಾಗಿರಿ, ನೀವು ನಿಮ್ಮ ಬಟ್ಟೆಗಳನ್ನು ಬದಲಾಯಿಸಿರಿ.
Explorar ಆದಿಕಾಂಡ 35:2
5
ಆದಿಕಾಂಡ 35:1
ದೇವರು ಯಾಕೋಬನಿಗೆ, “ನೀನು ಇಲ್ಲಿಂದ ಬೇತೇಲಿಗೆ ಹೋಗಿ ಅಲ್ಲಿ ವಾಸಮಾಡು, ನಿನ್ನ ಸಹೋದರ ಏಸಾವನ ಎದುರಿನಿಂದ ಓಡಿ ಹೋಗುತ್ತಿದ್ದಾಗ, ನಿನಗೆ ಕಾಣಿಸಿಕೊಂಡ ದೇವರಿಗೆ ಅಲ್ಲಿ ಬಲಿಪೀಠವನ್ನು ಕಟ್ಟು,” ಎಂದರು.
Explorar ಆದಿಕಾಂಡ 35:1
6
ಆದಿಕಾಂಡ 35:18
ಆದರೆ ರಾಹೇಲಳು ಸತ್ತುಹೋದಳು. ಅವಳು ಪ್ರಾಣಬಿಡುವಾಗ, ಮಗನಿಗೆ ಬೆನೋನಿ ಎಂದು ಹೆಸರಿಟ್ಟಳು, ಆದರೆ ಅವನ ತಂದೆ ಅವನಿಗೆ ಬೆನ್ಯಾಮೀನ್ ಎಂದು ಹೆಸರಿಟ್ಟನು.
Explorar ಆದಿಕಾಂಡ 35:18
Inici
La Bíblia
Plans
Vídeos