1
ಆದಿಕಾಂಡ 37:5
ಕನ್ನಡ ಸಮಕಾಲಿಕ ಅನುವಾದ
ಯೋಸೇಫನು ಒಂದು ಕನಸನ್ನು ಕಂಡು ತನ್ನ ಸಹೋದರರಿಗೆ ತಿಳಿಸಿದಾಗ, ಅವರು ಅವನನ್ನು ಇನ್ನೂ ಹೆಚ್ಚಾಗಿ ದ್ವೇಷಿಸಿದರು.
Compara
Explorar ಆದಿಕಾಂಡ 37:5
2
ಆದಿಕಾಂಡ 37:3
ಯೋಸೇಫನು ಇಸ್ರಾಯೇಲನಿಗೆ ಮುಪ್ಪಿನ ವಯಸ್ಸಿನಲ್ಲಿ ಹುಟ್ಟಿದ ಮಗನಾಗಿದ್ದುದರಿಂದ ಅವನು ತನ್ನ ಎಲ್ಲಾ ಮಕ್ಕಳಿಗಿಂತ ಅವನನ್ನು ಹೆಚ್ಚು ಪ್ರೀತಿಮಾಡಿ, ಅವನಿಗೆ ಅನೇಕ ಬಣ್ಣಗಳ ಅಂಗಿಯನ್ನು ಹೊಲಿಸಿಕೊಟ್ಟನು.
Explorar ಆದಿಕಾಂಡ 37:3
3
ಆದಿಕಾಂಡ 37:4
ತಮ್ಮ ತಂದೆಯು ಅವನನ್ನು ಎಲ್ಲಾ ಸಹೋದರರಿಗಿಂತ ಹೆಚ್ಚು ಪ್ರೀತಿಮಾಡುತ್ತಿರುವುದನ್ನು ಅವನ ಸಹೋದರರು ಕಂಡು, ಅವನನ್ನು ದ್ವೇಷಿಸಿ, ಅವನ ಸಂಗಡ ಸಮಾಧಾನದಿಂದ ಮಾತಾಡದೆಹೋದರು.
Explorar ಆದಿಕಾಂಡ 37:4
4
ಆದಿಕಾಂಡ 37:9
ಇದಲ್ಲದೆ ಅವನು ಇನ್ನೊಂದು ಕನಸನ್ನು ಕಂಡು ತನ್ನ ಸಹೋದರರಿಗೆ, “ಇನ್ನೊಂದು ಕನಸನ್ನು ಕಂಡಿದ್ದೇನೆ. ಸೂರ್ಯನೂ ಚಂದ್ರನೂ ಹನ್ನೊಂದು ನಕ್ಷತ್ರಗಳೂ ನನಗೆ ಅಡ್ಡಬಿದ್ದವು,” ಎಂದನು.
Explorar ಆದಿಕಾಂಡ 37:9
5
ಆದಿಕಾಂಡ 37:11
ಹೀಗೆ ಅವನ ಸಹೋದರರು ಅವನ ಮೇಲೆ ಹೊಟ್ಟೆಕಿಚ್ಚುಪಟ್ಟರು. ಆದರೆ ಅವನ ತಂದೆ ಆ ಮಾತನ್ನು ಮನಸ್ಸಿನಲ್ಲಿ ಇಟ್ಟುಕೊಂಡನು.
Explorar ಆದಿಕಾಂಡ 37:11
6
ಆದಿಕಾಂಡ 37:6-7
ಅವನು ಅವರಿಗೆ, “ನಾನು ಕಂಡ ಈ ಕನಸನ್ನು ಹೇಳುತ್ತೇನೆ ಕೇಳಿರಿ. ನಾವು ಹೊಲದಲ್ಲಿ ಸಿವುಡುಗಳನ್ನು ಕಟ್ಟುತ್ತಾ ಇದ್ದೆವು. ನನ್ನ ಸಿವುಡು ಎದ್ದುನಿಂತಿತು. ಆಗ ನಿಮ್ಮ ಸಿವುಡುಗಳು ತಿರುಗಿ ನನ್ನ ಸಿವುಡಿಗೆ ಅಡ್ಡಬಿದ್ದವು,” ಎಂದನು.
Explorar ಆದಿಕಾಂಡ 37:6-7
7
ಆದಿಕಾಂಡ 37:20
ಬನ್ನಿರಿ, ಈಗ ಅವನನ್ನು ಕೊಂದು, ಯಾವುದೋ ಒಂದು ಕಾಡುಮೃಗವು ಅವನನ್ನು ತಿಂದುಬಿಟ್ಟಿತೆಂದು ಹೇಳೋಣ. ತರುವಾಯ ಅವನ ಕನಸುಗಳು ಏನಾಗುವವೋ ನೋಡೋಣ,” ಎಂದು ಒಬ್ಬರಿಗೊಬ್ಬರು ಮಾತನಾಡಿಕೊಂಡರು.
Explorar ಆದಿಕಾಂಡ 37:20
8
ಆದಿಕಾಂಡ 37:28
ಈ ಪ್ರಕಾರ ಮಿದ್ಯಾನ್ಯರ ವರ್ತಕರು ಹಾದುಹೋಗುತ್ತಿದ್ದಾಗ, ಅವರು ಯೋಸೇಫನನ್ನು ಗುಂಡಿಯಿಂದ ಮೇಲೆತ್ತಿ, ಇಷ್ಮಾಯೇಲರಿಗೆ ಅವನನ್ನು ಇಪ್ಪತ್ತು ಬೆಳ್ಳಿಯ ನಾಣ್ಯಗಳಿಗೆ ಮಾರಿದರು. ಅವರು ಯೋಸೇಫನನ್ನು ಈಜಿಪ್ಟಿಗೆ ಕರೆದುಕೊಂಡು ಹೋದರು.
Explorar ಆದಿಕಾಂಡ 37:28
9
ಆದಿಕಾಂಡ 37:19
ಅವರು, “ಇಗೋ, ಈ ಕನಸುಗಾರ ಬರುತ್ತಿದ್ದಾನೆ
Explorar ಆದಿಕಾಂಡ 37:19
10
ಆದಿಕಾಂಡ 37:18
ಅವರು ದೂರದಿಂದ ಅವನನ್ನು ನೋಡಿದಾಗ, ಅವನು ಸಮೀಪಕ್ಕೆ ಬರುವ ಮುಂಚೆಯೇ ಅವನನ್ನು ಕೊಂದುಹಾಕಬೇಕೆಂದು ಅವನಿಗೆ ವಿರೋಧವಾಗಿ ಒಳಸಂಚು ಮಾಡಿಕೊಂಡರು.
Explorar ಆದಿಕಾಂಡ 37:18
11
ಆದಿಕಾಂಡ 37:22
ರೂಬೇನನು ಅವನನ್ನು ಅವರ ಕೈಗಳಿಂದ ತಪ್ಪಿಸಿ, ತನ್ನ ತಂದೆಯ ಬಳಿಗೆ ತಿರುಗಿ ಕರೆದುಕೊಂಡುಹೋಗುವ ಉದ್ದೇಶದಿಂದ ಅವರಿಗೆ, “ರಕ್ತ ಚೆಲ್ಲಬೇಡಿರಿ, ಕಾಡಿನಲ್ಲಿರುವ ಈ ಗುಂಡಿಯಲ್ಲಿ ಹಾಕಿರಿ, ಆದರೆ ಅವನ ಮೇಲೆ ಕೈಹಾಕಬೇಡಿರಿ,” ಎಂದನು.
Explorar ಆದಿಕಾಂಡ 37:22
Inici
La Bíblia
Plans
Vídeos