1
ಆದಿಕಾಂಡ 9:12-13
ಕನ್ನಡ ಸಮಕಾಲಿಕ ಅನುವಾದ
ದೇವರು ಮತ್ತೆ ಹೇಳಿದ್ದೇನೆಂದರೆ, “ನನಗೂ ನಿಮಗೂ ನಿಮ್ಮ ಸಂಗಡ ಇರುವ ಎಲ್ಲಾ ಜೀವಜಂತುಗಳಿಗೂ ಮಧ್ಯದಲ್ಲಿ ತಲತಲಾಂತರಗಳವರೆಗೆ ನಾನು ಮಾಡುವ ಒಡಂಬಡಿಕೆಗೆ ಗುರುತು ಇದೆ: ನನ್ನ ಮಳೆಬಿಲ್ಲನ್ನು ಮೇಘಗಳಲ್ಲಿ ಇಟ್ಟಿದ್ದೇನೆ, ಅದು ನನಗೂ ಭೂಮಿಗೂ ಮಾಡಿಕೊಂಡ ಒಡಂಬಡಿಕೆಗೆ ಗುರುತಾಗಿರುವುದು.
Compara
Explorar ಆದಿಕಾಂಡ 9:12-13
2
ಆದಿಕಾಂಡ 9:16
ಆ ಮಳೆಬಿಲ್ಲು ಮೇಘಗಳಲ್ಲಿರುವಾಗ, ದೇವರಾದ ನನಗೂ ಭೂಮಿಯ ಮೇಲಿರುವ ಎಲ್ಲಾ ಜೀವಜಂತುಗಳಿಗೂ ಮಧ್ಯದಲ್ಲಿ ಇರುವ ನಿತ್ಯವಾದ ಒಡಂಬಡಿಕೆಯನ್ನು ಜ್ಞಾಪಕ ಮಾಡಿಕೊಳ್ಳುವ ಹಾಗೆ, ನಾನು ಅದನ್ನು ನೋಡುವೆನು.”
Explorar ಆದಿಕಾಂಡ 9:16
3
ಆದಿಕಾಂಡ 9:6
“ಯಾರಾದರೂ ಮನುಷ್ಯರ ರಕ್ತವನ್ನು ಸುರಿಸುತ್ತಾರೋ, ಅವರ ರಕ್ತವನ್ನು ಮನುಷ್ಯರೇ ಸುರಿಸುವರು. ಏಕೆಂದರೆ ದೇವರು ತಮ್ಮ ಸ್ವರೂಪದಲ್ಲಿಯೇ ಮನುಷ್ಯರನ್ನು ಸೃಷ್ಟಿಸಿದರು.
Explorar ಆದಿಕಾಂಡ 9:6
4
ಆದಿಕಾಂಡ 9:1
ದೇವರು ನೋಹನನ್ನೂ, ಅವನ ಪುತ್ರರನ್ನೂ ಆಶೀರ್ವದಿಸಿ ಅವರಿಗೆ, “ನೀವು ಬಹು ಸಂತಾನವುಳ್ಳವರಾಗಿ ಹೆಚ್ಚಿ, ಭೂಲೋಕದಲ್ಲೆಲ್ಲಾ ತುಂಬಿಕೊಳ್ಳಿರಿ.
Explorar ಆದಿಕಾಂಡ 9:1
5
ಆದಿಕಾಂಡ 9:3
ಚಲಿಸುವ ಜೀವಜಂತುಗಳೆಲ್ಲಾ ನಿಮಗೆ ಆಹಾರವಾಗಿ ಇರಲಿ. ಹಸಿರು ಪಲ್ಯಗಳ ಹಾಗೆಯೇ, ಅವುಗಳನ್ನೆಲ್ಲಾ ನಾನು ನಿಮಗೆ ಕೊಟ್ಟಿದ್ದೇನೆ.
Explorar ಆದಿಕಾಂಡ 9:3
6
ಆದಿಕಾಂಡ 9:2
ಭೂಮಿಯ ಎಲ್ಲಾ ಮೃಗಗಳ ಮೇಲೆಯೂ ಆಕಾಶದ ಎಲ್ಲಾ ಪಕ್ಷಿಗಳ ಮೇಲೆಯೂ ಭೂಮಿಯ ಮೇಲೆ ಹರಿದಾಡುವ ಎಲ್ಲಾ ಕ್ರಿಮಿಕೀಟಗಳ ಮೇಲೆಯೂ ಸಮುದ್ರದ ಎಲ್ಲಾ ಮೀನುಗಳ ಮೇಲೆಯೂ ನಿಮ್ಮ ಭಯ ಬೆದರಿಕೆಯು ಇರುವುದು. ನಿಮ್ಮ ಕೈಗೆ ಅವು ಕೊಡಲಾಗಿವೆ.
Explorar ಆದಿಕಾಂಡ 9:2
7
ಆದಿಕಾಂಡ 9:7
ಆದ್ದರಿಂದ ನೀವು ಬಹುಸಂತಾನವಾಗಿ ಹೆಚ್ಚಿರಿ. ಸಂಖ್ಯೆಯಲ್ಲಿಯೂ ಅಧಿಕವಾಗಿ ಭೂಮಿಯಲ್ಲಿ ಹೆಚ್ಚಿರಿ,” ಎಂದು ಹೇಳಿದರು.
Explorar ಆದಿಕಾಂಡ 9:7
Inici
La Bíblia
Plans
Vídeos