ಪ್ರೇಷಿತರ ಕಾರ್ಯಕಲಾಪಗಳು 2
2
ಪವಿತ್ರಾತ್ಮರ ಆಗಮನ
1ಪಂಚಾಶತ್ತಮ#2:1 ಯೆಹೂದ್ಯರಸುಗ್ಗಿಹಬ್ಬದ ದಿನ : ಮೋಶೆ ಮುಖಾಂತರ ದಶನಿಯಮಗಳನ್ನು ಪಡೆದ ಸ್ಮರಣಾರ್ಥ ದಿನ. ಹಬ್ಬದ ದಿನ ಭಕ್ತವಿಶ್ವಾಸಿಗಳೆಲ್ಲರೂ ಒಂದು ಸ್ಥಳದಲ್ಲಿ ಸಭೆಸೇರಿದ್ದರು. 2ಫಕ್ಕನೆ ಬಲವಾದ ಬಿರುಗಾಳಿ ಬೀಸುತ್ತಿದೆಯೋ ಎಂಬಂತೆ ಶಬ್ದವೊಂದು ಆಕಾಶದಿಂದ ಕೇಳಿಬಂತು. ಅದು ಅವರು ಕುಳಿತಿದ್ದ ಮನೆಯಲ್ಲೆಲ್ಲಾ ಮಾರ್ದನಿಸಿತು. 3ಅಲ್ಲದೆ ಅಗ್ನಿಜ್ವಾಲೆಗಳು ಕೆನ್ನಾಲಿಗೆಯಂತೆ ಕಾಣಿಸಿಕೊಂಡವು. ಅವು ವಿಂಗಡ ವಿಂಗಡವಾಗಿ ಪ್ರತಿಯೊಬ್ಬರ ಮೇಲೂ ನೆಲೆಸಿದವು. 4ಅವರೆಲ್ಲರೂ ಪವಿತ್ರಾತ್ಮಭರಿತರಾದರು. ಆ ಆತ್ಮಪ್ರೇರಣೆಯಿಂದ ಬೇರೆ ಬೇರೆ ಭಾಷೆಗಳಲ್ಲಿ ಮಾತನಾಡತೊಡಗಿದರು.
5ಅದೇ ಸಮಯದಲ್ಲಿ ವಿಶ್ವದ ಎಲ್ಲಾ ದೇಶಗಳಿಂದ ಧರ್ಮನಿಷ್ಠ ಯೆಹೂದ್ಯರು ಜೆರುಸಲೇಮಿಗೆ ಬಂದು ತಂಗಿದರು. 6ಆ ಶಬ್ದವನ್ನು ಕೇಳಿದ್ದೇ, ಜನರ ದೊಡ್ಡ ಗುಂಪು ಸೇರಿತು. ಭಕ್ತಾದಿಗಳು ಮಾತನಾಡುತ್ತಿದ್ದುದನ್ನು ತಮ್ಮ ತಮ್ಮ ಭಾಷೆಗಳಲ್ಲೇ ಕೇಳಿದ ಜನರು ದಿಗ್ಭ್ರಮೆಗೊಂಡರು. 7ಅವರೆಲ್ಲರೂ ವಿಸ್ಮಿತರಾಗಿ, “ಹೀಗೆ ಮಾತನಾಡುವ ಇವರೆಲ್ಲಾ ಗಲಿಲೇಯದವರಲ್ಲವೇ? 8ನಮ್ಮಲ್ಲಿ ಪ್ರತಿಯೊಬ್ಬನೂ ಇವರು ಮಾತನಾಡುತ್ತಿರುವುದನ್ನು ತನ್ನ ತನ್ನ ಮಾತೃಭಾಷೆಯಲ್ಲೇ ಕೇಳುತ್ತಿರುವುದು ಹೇಗೆ? 9ನಮ್ಮಲ್ಲಿ ಪಾರ್ಥಿಯರು, ಮೀಡಿಯರು ಮತ್ತು ಎಲಾಮಿನವರೂ, ಮೆಸಪೊಟೇಮಿಯ, ಜುದೇಯ ಮತ್ತು ಕಪ್ಪದೋಸಿಯದವರೂ ಇದ್ದಾರೆ. ಪೊಂತ ಮತ್ತು ಏಷ್ಯ#2:9 ಏಷ್ಯ ಮೈನರ್.ದವರೂ, 10ಫ್ರಿಜಿಯ ಮತ್ತು ಪಾಂಫಿಲಿಯದವರೂ ಇದ್ದಾರೆ. ಈಜಿಪ್ಟ್ ಮತ್ತು ಸಿರೇನಿನ ಬಳಿಯಲ್ಲಿರುವ ಲಿಬಿಯ ಪ್ರಾಂತ್ಯದವರೂ ಸೇರಿದ್ದಾರೆ. ಅದಲ್ಲದೆ ನಮ್ಮಲ್ಲಿ ಕೆಲವರು ರೋಮ್ನಿಂದ ಬಂದಿದ್ದಾರೆ. 11ಯೆಹೂದ್ಯರೂ ಯೆಹೂದ್ಯ ಧರ್ಮಾವಲಂಬಿಗಳೂ ಆದ ಅನ್ಯರೂ, ಕ್ರೇಟ್ ಮತ್ತು ಅರೇಬಿಯದವರೂ ಇಲ್ಲಿದ್ದಾರೆ. ದೇವರ ಮಹತ್ಕಾರ್ಯಗಳನ್ನು ಕುರಿತು ಇವರು ಮಾತನಾಡುತ್ತಿರುವುದನ್ನು ನಾವೆಲ್ಲರೂ ನಮ್ಮ ನಮ್ಮ ಭಾಷೆಗಳಲ್ಲೇ ಕೇಳುತ್ತಿದ್ದೇವಲ್ಲಾ!” ಎಂದು ಅಚ್ಚರಿಯನ್ನು ವ್ಯಕ್ತಪಡಿಸಿದರು. 12ಸರ್ವರೂ ಭ್ರಮೆಗೊಂಡು, ಇದರ ಅರ್ಥವಾದರೂ ಏನೆಂದು ಒಬ್ಬರನ್ನು ಒಬ್ಬರು ವಿಸ್ಮಯದಿಂದ ವಿಚಾರಿಸತೊಡಗಿದರು.
13ಕೆಲವರಾದರೋ, “ಇವರು ಕುಡಿದು ಮತ್ತರಾಗಿದ್ದಾರೆ,” ಎಂದು ಪರಿಹಾಸ್ಯ ಮಾಡಿದರು.
ಪೇತ್ರನ ಪ್ರಬೋಧನೆ
14ಆಗ ಪೇತ್ರನು ಇತರ ಹನ್ನೊಂದು ಮಂದಿ ಪ್ರೇಷಿತರೊಡನೆ ಎದ್ದುನಿಂತು, ಜನಸಮೂಹವನ್ನು ಉದ್ದೇಶಿಸಿ, ಗಟ್ಟಿಯಾದ ಧ್ವನಿಯಿಂದ ಹೀಗೆಂದು ಪ್ರಬೋಧಿಸಿದನು: “ಯೆಹೂದ್ಯ ಸ್ವಜನರೇ, ಜೆರುಸಲೇಮಿನ ಸಕಲ ನಿವಾಸಿಗಳೇ, ನನಗೆ ಕಿವಿಗೊಡಿ. ಈ ಘಟನೆಯ ಅರ್ಥ ನಿಮಗೆ ಮನದಟ್ಟಾಗಲಿ. 15ನೀವು ಭಾವಿಸಿದಂತೆ ಈ ಜನರು ಕುಡಿದು ಮತ್ತರಾಗಿಲ್ಲ; ಈಗ ಇನ್ನೂ ಬೆಳಿಗ್ಗೆ ಒಂಬತ್ತು ಗಂಟೆ. 16ಈ ಘಟನೆಯನ್ನು ಕುರಿತು ಪ್ರವಾದಿ ಯೋವೇಲ ಹೇಳಿರುವುದನ್ನು ಕೇಳಿ: ದೇವರು ಹೀಗೆನ್ನುತ್ತಾರೆ:
17ಸುರಿಸುವೆನು ಸರ್ವರ ಮೇಲೂ
ಎನ್ನಾತ್ಮವನು ಅಂತಿಮ ದಿನಗಳಲಿ;
ಪ್ರವಾದಿಸುವರಾಗ ನಿಮ್ಮ ಕುವರ ಕುವರಿಯರು;
ದಿವ್ಯದರ್ಶನ ಪಡೆವರು ನಿಮ್ಮ ಯುವಜನರು;
ಕನಸುಕಾಣುವರು ನಿಮ್ಮ ವಯೋವೃದ್ಧರು.
18ಸುರಿಸುವೆನು ಎನ್ನ ದಾಸದಾಸಿಯರ ಮೇಲೂ
ಎನ್ನಾತ್ಮವನು ಆ ದಿನಗಳಲಿ,
ಪ್ರವಾದಿಸುವರಾಗ, ಅವರು;
19ಎಸಗುವೆನು ಆಗಸದಲಿ ಅದ್ಭುತಗಳನು,
ಮಾಡುವೆನು ಭುವಿಯಲಿ ಮಹತ್ಕಾರ್ಯಗಳನು;
ಕಾಣುವುದಾಗ ಕಿಚ್ಚು, ಕಪ್ಪೊಗೆ, ನೆತ್ತರು,
20ರವಿ ಕಪ್ಪಾಗುವನು, ಶಶಿ ಕಡುಗೆಂಪಾಗುವನು,
ಪ್ರಭುವಿನ ಮಹಿಮಾದಿನಕ್ಕೆ ಮುನ್ನ
ಸಂಭವಿಸುವುವು ಇವೆಲ್ಲಾ.
21ಪ್ರಭುವಿನ ನಾಮಸ್ಮರಣೆ ಮಾಡುವವರೆಲ್ಲ
ಪಡೆಯುವರಾಗ ಜೀವೋದ್ಧಾರ.
22“ಇಸ್ರಯೇಲ್ಬಾಂಧವರೇ, ನನ್ನ ಮಾತುಗಳನ್ನು ಆಲಿಸಿರಿ. ನಜರೇತಿನ ಯೇಸುಸ್ವಾಮಿ ದೈವನಿಯಮಿತ ವ್ಯಕ್ತಿ ಎಂಬುದನ್ನು ದೇವರೇ ಅವರ ಮುಖಾಂತರ ನಡೆಸಿದ ಅದ್ಭುತಕಾರ್ಯಗಳಿಂದ, ಮಹತ್ಕಾರ್ಯಗಳಿಂದ ಹಾಗೂ ಸೂಚಕಕಾರ್ಯಗಳಿಂದ ನಿಮಗೆ ಸ್ಪಷ್ಟಪಡಿಸಲಾಗಿದೆ. ಇದು ನಿಮಗೆ ತಿಳಿದಿರುವ ವಿಷಯ. 23ದೇವರು ತಮ್ಮ ಸ್ಥಿರಸಂಕಲ್ಪದಲ್ಲಿ ಹಾಗೂ ಭವಿಷ್ಯತ್ಜ್ಞಾನದಲ್ಲಿ ಯೇಸು ನಿಮ್ಮ ವಶವಾಗಬೇಕೆಂದು ಈ ಮೊದಲೇ ನಿರ್ಧರಿಸಿದ್ದರು. ನೀವು ಅವರನ್ನು ಪರಕೀಯರ ಕೈಗೊಪ್ಪಿಸಿ, ಶಿಲುಬೆಗೆ ಹಾಕಿಸಿ, ಕೊಲ್ಲಿಸಿದಿರಿ. 24ಆದರೆ ದೇವರು ಅವರನ್ನು ಮೃತ್ಯುಶೂಲೆಯಿಂದ ಬಿಡಿಸಿ ಎಬ್ಬಿಸಿದರು. ಕಾರಣ - ಅವರನ್ನು ಬಂಧಿಸಿಡುವುದು ಮೃತ್ಯುವಿಗೆ ಅಸಾಧ್ಯವಾಗಿತ್ತು. 25ಅವರನ್ನು ಕುರಿತು ದಾವೀದನು ಹೀಗೆಂದಿದ್ದಾನೆ:
‘ಪ್ರಭು ಇಹನು ಎನ್ನ ಕಣ್ಮುಂದೆ ಸತತ
ನಾ ಹೆದರದಂತೆ ಆತನಿಹನು ಎನ್ನ ಹತ್ತಿರ.
26ಇದಕಾರಣ ಹರ್ಷಿಸಿತು ಎನ್ನ ಹೃದಯ
ತುಳುಕಿತು ಸಂತಸ ಎನ್ನ ನಾಲಗೆಯಿಂದ
ನಂಬಿ ನಿರೀಕ್ಷೆಯಿಂದಿರುವುದು ಎನ್ನ ಮರ್ತ್ಯದೇಹ.
27ಏಕೆನೆ, ದೂಡಲಾರೆ ಪಾತಾಳಕೆ ನೀನೆನ್ನ ಜೀವಾತ್ಮವನು,
ಕೊಳೆಯಬಿಡಲಾರೆ ನೀನೊಲಿದಾತನನು.
28ಅಮರ ಜೀವಮಾರ್ಗವನೆನಗೆ ತೋರ್ಪಡಿಸಿದೆ
ನಿನ್ನ ಶ್ರೀಸಾನ್ನಿಧ್ಯ ಸಂತಸದಿಂದೆನ್ನ ಭರಿತನಾಗಿಸುವೆ.’
29“ಪ್ರಿಯ ಸಹೋದರರೇ, ಪಿತಾಮಹ ದಾವೀದರಸನ ವಿಷಯದಲ್ಲಿ ನಾನು ನಿಮಗೆ ಸ್ಪಷ್ಟವಾಗಿ ಮಾತನಾಡಬೇಕಾಗಿದೆ. ಆತನು ಮೃತನಾದನು; ಆತನನ್ನು ಸಮಾಧಿಮಾಡಲಾಯಿತು. ನಿಮಗೆಲ್ಲರಿಗೆ ತಿಳಿದಿರುವಂತೆ ಆತನ ಸಮಾಧಿ ನಮ್ಮ ಮಧ್ಯೆ ಇಂದಿನವರೆಗೂ ಇದೆ. 30ಆತನೊಬ್ಬ ಪ್ರವಾದಿಯೂ ಆಗಿದ್ದ. ತನ್ನ ಸಂತತಿಯಲ್ಲೇ ಒಬ್ಬನನ್ನು ಅರಸನನ್ನಾಗಿ ಮಾಡುವುದಾಗಿ ದೇವರು ಮಾಡಿದ್ದ ವಾಗ್ದಾನವನ್ನು ಆತನು ಮರೆತಿರಲಿಲ್ಲ. 31ಹೀಗಿರುವಲ್ಲಿ ಕ್ರಿಸ್ತಯೇಸುವಿನ ಪುನರುತ್ಥಾನವನ್ನು ಮುಂಚಿತವಾಗಿ ಅರಿತು ಅದರ ವಿಷಯವಾಗಿ ಹೀಗೆಂದು ಪ್ರವಾದನೆ ಮಾಡಿದ:
ಆತನನ್ನು ಪಾತಾಳಕ್ಕೆ ದೂಡಲಿಲ್ಲ;
ದೇಹ ಕೊಳೆತುಹೋಗಲು ಬಿಡಲಿಲ್ಲ.’
32ಈ ಯೇಸುವನ್ನೇ ದೇವರು ಪುನರುತ್ಥಾನಗೊಳಿಸಿದ್ದಾರೆ; ಈ ಘಟನೆಗೆ ನಾವೆಲ್ಲರೂ ಸಾಕ್ಷಿಗಳಾಗಿದ್ದೇವೆ. 33ಯೇಸು, ದೇವರ ಬಲಪಾರ್ಶ್ವಕ್ಕೆ ಆರೋಹಿತರಾದರು. ಅವರು ತಮ್ಮ ಪಿತ ವಾಗ್ದಾನಮಾಡಿದ ಪವಿತ್ರಾತ್ಮ ಅವರನ್ನು ಪಡೆದು, ನಮ್ಮ ಮೇಲೆ ಸುರಿಸಿದ ಆ ವರವನ್ನೇ ನೀವು ಈಗ ನೋಡುತ್ತಿರುವುದು ಹಾಗೂ ಕೇಳುತ್ತಿರುವುದು. 34-35ಸ್ವರ್ಗಾರೋಹಣ ಆದವನು ದಾವೀದನಲ್ಲ; ಆದರೂ ಆತನು ಹೀಗೆಂದಿದ್ದಾನೆ:
ನಿನ್ನ ಶತ್ರುಗಳನ್ನು ನಾನು
ನಿನ್ನ ಪಾದಪೀಠವಾಗಿ ಮಾಡುವತನಕ
ನನ್ನ ಬಲಗಡೆಯಲ್ಲಿ ಆಸೀನನಾಗಿರು
ಎಂದು ನನ್ನ ‘ಪ್ರಭು’ವಿಗೆ ಸರ್ವೇಶ್ವರ ಹೇಳಿದ್ದಾರೆ.
36“ಇಸ್ರಯೇಲಿನ ಜನರೆಲ್ಲರಿಗೆ ಇದು ನಿಸ್ಸಂದೇಹವಾಗಿ ತಿಳಿದಿರಲಿ: ನೀವು ಶಿಲುಬೆಗೇರಿಸಿದ ಈ ಯೇಸುಸ್ವಾಮಿಯನ್ನೇ ದೇವರು ಪ್ರಭುವನ್ನಾಗಿಯೂ ಅಭಿಷಿಕ್ತ ಲೋಕೋದ್ಧಾರಕನನ್ನಾಗಿಯೂ#2:36 ಕ್ರಿಸ್ತನನ್ನಾಗಿಯೂ. ನೇಮಿಸಿದ್ದಾರೆ.”
37ಇದನ್ನು ಕೇಳಿದ ಆ ಜನರ ಹೃದಯದಲ್ಲಿ ಅಲಗು ನೆಟ್ಟಂತಾಯಿತು. ಅವರು ಪ್ರೇಷಿತರನ್ನು ಉದ್ದೇಶಿಸಿ, “ಸಹೋದರರೇ, ಈಗ ನಾವು ಮಾಡಬೇಕಾದುದು ಏನು?” ಎಂದು ಕೇಳಿದರು.
38ಅದಕ್ಕೆ ಪೇತ್ರನು, “ನಿಮ್ಮಲ್ಲಿ ಪ್ರತಿ ಒಬ್ಬನೂ ಪಶ್ಚಾತ್ತಾಪಪಟ್ಟು, ಪಾಪಕ್ಕೆ ವಿಮುಖನಾಗಿ ದೇವರಿಗೆ ಅಭಿಮುಖನಾಗಲಿ; ಯೇಸುಕ್ರಿಸ್ತರ ನಾಮದಲ್ಲಿ ದೀಕ್ಷಾಸ್ನಾನವನ್ನು#2:38 ಅಥವಾ : ‘ಜ್ಞಾನಸ್ನಾನವನ್ನು.’ ಪಡೆಯಲಿ. ಇದರಿಂದ ನೀವು ಪಾಪಕ್ಷಮೆಯನ್ನು ಪಡೆಯುವಿರಿ; ದೇವರ ವರವಾದ ಪವಿತ್ರಾತ್ಮರನ್ನು ಹೊಂದುವಿರಿ. 39ಈ ವಾಗ್ದಾನವನ್ನು ನಿಮಗೆ ಮಾತ್ರವಲ್ಲ, ನಿಮ್ಮ ಸಂತತಿಗೂ ದೂರ ಇರುವ ಎಲ್ಲರಿಗೂ ಮತ್ತು ಸರ್ವೇಶ್ವರನಾದ ದೇವರು ತಮ್ಮತ್ತ ಆಹ್ವಾನಿಸುವ ಪ್ರತಿಯೊಬ್ಬನಿಗೂ ಮಾಡಲಾಗಿದೆ,” ಎಂದನು.
40ಪೇತ್ರನು ಅವರಿಗೆ ಹಲವಾರು ವಿಧದಲ್ಲಿ ಮನವಿಮಾಡಿದನು. ‘ಈ ದುಷ್ಟ ಪೀಳಿಗೆಯಿಂದ ನಿಮ್ಮನ್ನು ಸಂರಕ್ಷಿಸಿಕೊಳ್ಳಿ,’ ಎಂದು ಎಚ್ಚರಿಸಿದನು. 41ಅವನ ಬೋಧನೆಯನ್ನು ಅಂಗೀಕರಿಸಿದ ಅನೇಕರು ದೀಕ್ಷಾಸ್ನಾನ ಪಡೆದರು. ಅಂದೇ ಸುಮಾರು ಮೂರು ಸಾವಿರ ಜನರು ಸಭೆಯನ್ನು ಸೇರಿಕೊಂಡರು. 42ಅಂದಿನಿಂದ ಅವರು ಪ್ರೇಷಿತರ ಬೋಧನೆಯನ್ನು ಕೇಳುವುದರಲ್ಲಿ ನಿರತರಾಗಿದ್ದರು; ಅನ್ಯೋನ್ಯವಾಗಿ ಬಾಳುತ್ತಿದ್ದರು; ರೊಟ್ಟಿ ಮುರಿಯುವ ಸಹಭೋಜನದಲ್ಲಿ ಪಾಲ್ಗೊಳ್ಳುತ್ತಿದ್ದರು ಹಾಗೂ ಪ್ರಾರ್ಥನಾಕೂಟಗಳಲ್ಲಿ ಭಾಗವಹಿಸುತ್ತಿದ್ದರು.
ಭಕ್ತರ ಸಭಾಜೀವನ
43ಪ್ರೇಷಿತರ ಮುಖಾಂತರ ಅನೇಕ ಅದ್ಭುತಕಾರ್ಯಗಳೂ ಸೂಚಕಕಾರ್ಯಗಳೂ ನಡೆಯುತ್ತಿದ್ದವು. ಇವನ್ನು ಕಂಡು ಜನರು ಭಯಭ್ರಾಂತರಾಗುತ್ತಿದ್ದರು. 44ಭಕ್ತವಿಶ್ವಾಸಿಗಳೆಲ್ಲರೂ ಅನ್ಯೋನ್ಯವಾಗಿ ಬಾಳುತ್ತಿದ್ದರು. ತಮ್ಮಲ್ಲಿದ್ದುದನ್ನು ಹುದುವಾಗಿ ಹಂಚಿಕೊಳ್ಳುತ್ತಿದ್ದರು. 45ತಮ್ಮ ತಮ್ಮ ಆಸ್ತಿಪಾಸ್ತಿಯನ್ನು ಮಾರಿ ಬಂದ ಹಣವನ್ನು ಅವರವರ ಅವಶ್ಯಕತೆಗೆ ತಕ್ಕಂತೆ ಎಲ್ಲರಿಗೂ ಹಂಚುತ್ತಿದ್ದರು. 46ದಿನಂಪ್ರತಿ ಅವರು ಒಮ್ಮನಸ್ಸಿನಿಂದ ದೇವಾಲಯದಲ್ಲಿ ಸಭೆ ಸೇರುತ್ತಿದ್ದರು. ತಮ್ಮ ಮನೆಗಳಲ್ಲಿ ರೊಟ್ಟಿ ಮುರಿಯುವ ಸಹಭೋಜನವನ್ನು ಏರ್ಪಡಿಸಿ ಸಂತೋಷದಿಂದಲೂ ಸಹೃದಯದಿಂದಲೂ ಭಾಗವಹಿಸುತ್ತಿದ್ದರು. 47ದೇವರನ್ನು ಸ್ತುತಿಸುತ್ತಾ ಸಕಲರಿಗೆ ಅಚ್ಚುಮೆಚ್ಚಾಗಿ ಬಾಳುತ್ತಿದ್ದರು. ಜೀವೋದ್ಧಾರವನ್ನು ಹೊಂದುತ್ತಿದ್ದವರನ್ನೆಲ್ಲಾ ಪ್ರಭು ಈ ಸಭೆಗೆ ದಿನೇದಿನೇ ಸೇರಿಸಿಕೊಳ್ಳುತ್ತಿದ್ದರು.
S'ha seleccionat:
ಪ್ರೇಷಿತರ ಕಾರ್ಯಕಲಾಪಗಳು 2: KANCLBSI
Subratllat
Comparteix
Copia
Vols que els teus subratllats es desin a tots els teus dispositius? Registra't o inicia sessió
Kannada C.L. Bible - ಸತ್ಯವೇದವು C.L.
Copyright © 2016 by The Bible Society of India
Used by permission. All rights reserved worldwide.

: