ಲೂಕ. 10
10
ಎಪ್ಪತ್ತೆರಡು ಮಂದಿಯ ನಿಯೋಗ
1ಇದಾದ ಮೇಲೆ, ಯೇಸುಸ್ವಾಮಿ ಇನ್ನೂ ಎಪ್ಪತ್ತೆರಡು#10:1 ಕೆಲವು ಪ್ರತಿಗಳಲ್ಲಿ ‘ಎಪ್ಪತ್ತು’ ಎಂದಿದೆ. ಮಂದಿಯನ್ನು ನೇಮಿಸಿ ಅವರನ್ನು ಇಬ್ಬಿಬ್ಬರನ್ನಾಗಿ ತಾವೇ ಹೋಗಲಿದ್ದ ಊರುಗಳಿಗೂ ಸ್ಥಳಗಳಿಗೂ ಮುಂದಾಗಿ ಕಳಿಸಿದರು. 2ಕಳುಹಿಸುವಾಗ ಅವರಿಗೆ ಹೇಳಿದ್ದೇನೆಂದರೆ, “ಬೆಳೆಯೇನೋ ಹೇರಳವಾಗಿದೆ; ಕೊಯ್ಲುಗಾರರೊ ವಿರಳ. ಆದುದರಿಂದ ಕೊಯ್ಲಿಗೆ ಆಳುಗಳನ್ನು ಕಳುಹಿಸುವಂತೆ ಬೆಳೆಯ ಯಜಮಾನನನ್ನು ಬೇಡಿಕೊಳ್ಳಿ. 3ಹೋಗಿರಿ, ತೋಳಗಳ ನಡುವೆ ಕುರಿಮರಿಗಳನ್ನು ಬಿಟ್ಟಂತೆ ನಾನು ನಿಮ್ಮನ್ನು ಕಳುಹಿಸುತ್ತೇನೆ. 4ಹಣದ ಚೀಲವನ್ನಾಗಲಿ, ಜೋಳಿಗೆಯನ್ನಾಗಲಿ, ಪಾದರಕ್ಷೆಗಳನ್ನಾಗಲಿ ತೆಗೆದುಕೊಂಡು ಹೋಗದಿರಿ. ದಾರಿಯಲ್ಲಿ ಯಾರಿಗೂ ವಂದನೋಪಚಾರಗಳನ್ನು ಮಾಡಿಕೊಂಡಿರಬೇಡಿ. 5ನೀವು ಯಾವ ಮನೆಗೆ ಹೋದರೂ, ‘ಈ ಮನೆಗೆ ಶಾಂತಿ,’ ಎಂದು ಆಶೀರ್ವಾದ ಮಾಡಿ. 6ಶಾಂತಿಪ್ರಿಯನು ಅಲ್ಲಿದ್ದರೆ ನಿಮ್ಮ ಆಶೀರ್ವಾದವು ಅವನ ಮೇಲೆ ನೆಲೆಸುವುದು. ಇಲ್ಲವಾದರೆ, ಅದು ನಿಮಗೆ ಹಿಂದಿರುಗುವುದು. 7ಮನೆಯಿಂದ ಮನೆಗೆ ಹೋಗದೆ ಆ ಮನೆಯಲ್ಲೇ ತಂಗಿದ್ದು, ಅಲ್ಲಿಯವರು ಕೊಡುವ ಅನ್ನಪಾನೀಯಗಳನ್ನು ಸೇವಿಸಿರಿ. ದುಡಿಮೆಗಾರನು ಕೂಲಿಗೆ ಬಾಧ್ಯನು.
8“ನೀವು ಯಾವ ಊರಿಗೆ ಹೋದರೂ ಜನರು ನಿಮ್ಮನ್ನು ಸ್ವಾಗತಿಸಿದಾಗ, ಅವರು ಬಡಿಸಿದ್ದನ್ನು ಭುಜಿಸಿರಿ. 9ಅಲ್ಲಿರುವ ರೋಗಿಗಳನ್ನು ಗುಣಪಡಿಸಿರಿ. ‘ದೇವರ ಸಾಮ್ರಾಜ್ಯ ನಿಮ್ಮನ್ನು ಸಮೀಪಿಸಿದೆ,’ ಎಂದು ತಿಳಿಸಿರಿ. 10ಆದರೆ ನೀವು ಹೋಗುವ ಊರಿನ ಜನರು ನಿಮ್ಮನ್ನು ಸ್ವಾಗತಿಸದೆ ಹೋದರೆ, ರಸ್ತೆಗಳಿಗೆ ಹೋಗಿ, 11‘ನಮ್ಮ ಪಾದಗಳಿಗೆ ಅಂಟಿರುವ ನಿಮ್ಮ ಊರಿನ ಧೂಳನ್ನು ಕೂಡ ನಿಮಗೆ ವಿರುದ್ಧವಾಗಿ ಒದರಿಬಿಡುತ್ತೇವೆ. ಆದರೂ ದೇವರ ಸಾಮ್ರಾಜ್ಯ ಸಮೀಪಿಸಿದೆ ಎಂಬುದನ್ನು ಮಾತ್ರ ನೀವು ಗಮನದಲ್ಲಿಡಿ,’ ಎಂದು ತಿಳಿಸಿರಿ. 12ತೀರ್ಪಿನ ದಿನ ಈ ಊರಿನ ಗತಿ ಸೊದೋಮ್ ಊರಿನ ಗತಿಗಿಂತಲೂ ಕಠಿಣವಾಗಿರುವುದೆಂದು ನಾನು ನಿಮಗೆ ಹೇಳುತ್ತೇನೆ.
ಅವಿಶ್ವಾಸಿಗಳ ಅಧೋಗತಿ
(ಮತ್ತಾ. 11:20-24)
13“ಕೊರಾಜ್ಜಿನ್ ಪಟ್ಟಣವೇ, ನಿನಗೆ ಧಿಕ್ಕಾರ! ಬೆತ್ಸಾಯಿದ ಪಟ್ಟಣವೇ, ನಿನಗೆ ಧಿಕ್ಕಾರ! ನಿಮ್ಮಲ್ಲಿ ಮಾಡಿದ ಅದ್ಭುತಕಾರ್ಯಗಳನ್ನು ಟೈರ್ ಮತ್ತು ಸಿದೋನ್ ಪಟ್ಟಣಗಳಲ್ಲಿ ಮಾಡಿದ್ದರೆ, ಅಲ್ಲಿಯವರು ಎಂದೋ ಗೋಣಿತಟ್ಟನ್ನು ಉಟ್ಟುಕೊಂಡು, ಬೂದಿಯನ್ನು ಬಳಿದುಕೊಂಡು ಪಶ್ಚಾತ್ತಾಪಪಟ್ಟು ಪಾಪಕ್ಕೆ ವಿಮುಖರಾಗುತ್ತಿದ್ದರು. 14ಆದುದರಿಂದ ತೀರ್ಪಿನ ದಿನ ಟೈರ್ ಮತ್ತು ಸಿದೋನಿನ ಗತಿಯು ನಿಮಗಿಂತಲೂ ಸಹನೀಯವಾಗಿರುವುದು. 15ಎಲೈ ಕಫೆರ್ನವುಮ್ ಪಟ್ಟಣವೇ, ನೀನು ಸ್ವರ್ಗಕ್ಕೇರುವೆ ಎಂದು ನೆನಸುತ್ತೀಯೋ? ಇಲ್ಲ, ಪಾತಾಳಕ್ಕೇ ಇಳಿಯುವೆ,” ಎಂದರು ಯೇಸುಸ್ವಾಮಿ.
16ಅನಂತರ ತಮ್ಮ ಶಿಷ್ಯರನ್ನು ಉದ್ದೇಶಿಸಿ, “ನಿಮ್ಮನ್ನು ಆಲಿಸುವವನು ನನ್ನನ್ನೇ ಆಲಿಸುತ್ತಾನೆ; ನಿಮ್ಮನ್ನು ಅಲಕ್ಷ್ಯಮಾಡುವವನು ನನ್ನನ್ನೇ ಅಲಕ್ಷ್ಯಮಾಡುತ್ತಾನೆ; ನನ್ನನ್ನು ಅಲಕ್ಷ್ಯಮಾಡುವವನಾದರೋ ನನ್ನನ್ನು ಕಳುಹಿಸಿದಾತನನ್ನೇ ಅಲಕ್ಷ್ಯಮಾಡುತ್ತಾನೆ,” ಎಂದರು.
ಎಪ್ಪತ್ತೆರಡು ಮಂದಿ ನಿಯೋಗದ ವರದಿ
17ಕಳುಹಿಸಲಾಗಿದ್ದ ಎಪ್ಪತ್ತೆರಡು ಮಂದಿ ಸಂತೋಷಭರಿತರಾಗಿ ಹಿಂದಿರುಗಿ ಬಂದು, “ಸ್ವಾಮೀ, ನಿಮ್ಮ ಹೆಸರಿನಲ್ಲಿ ಆಜ್ಞೆಮಾಡಿದಾಗ ದೆವ್ವಗಳು ಕೂಡ ನಮಗೆ ಅಧೀನವಾಗುತ್ತವೆ,” ಎಂದು ವರದಿಮಾಡಿದರು. 18ಅದಕ್ಕೆ ಯೇಸು, “ಸೈತಾನನು ಆಕಾಶದಿಂದ ಸಿಡಿಲಿನಂತೆ ಬೀಳುವುದನ್ನು ಕಂಡೆನು. 19ಇಗೋ, ಸರ್ಪಗಳನ್ನು ಹಾಗೂ ಚೇಳುಗಳನ್ನು ತುಳಿಯುವುದಕ್ಕೂ ಶತ್ರುವಿನ ಸಮಸ್ತ ಶಕ್ತಿಯನ್ನು ಜಯಿಸುವುದಕ್ಕೂ ನಿಮಗೆ ಅಧಿಕಾರ ಕೊಟ್ಟಿದ್ದೇನೆ. ಯಾವುದೂ ನಿಮಗೆ ಹಾನಿಮಾಡದು. 20ಆದರೂ ದೆವ್ವಗಳು ನಿಮಗೆ ಅಧೀನವಾಗಿವೆಯೆಂದು ಸಂತೋಷಪಡುವುದಕ್ಕಿಂತ ನಿಮ್ಮ ಹೆಸರುಗಳು ಸ್ವರ್ಗದಲ್ಲಿ ಲಿಖಿತವಾಗಿವೆ ಎಂದು ಸಂತೋಷಪಡಿ,” ಎಂದು ಹೇಳಿದರು.
ಯೇಸುವಿನ ಸಂತಸ
(ಮತ್ತಾ. 11:25-27; 13:16-17)
21ಅದೇ ಗಳಿಗೆಯಲ್ಲಿ ಯೇಸುಸ್ವಾಮಿ ಪವಿತ್ರಾತ್ಮರಿಂದ ಹರ್ಷಾವೇಶಗೊಂಡು, “ಪಿತನೇ, ಭೂಸ್ವರ್ಗಗಳ ಒಡೆಯನೇ, ಈ ವಿಷಯಗಳನ್ನು ಜ್ಞಾನಿಗಳಿಗೂ ಮೇಧಾವಿಗಳಿಗೂ ಮರೆಮಾಡಿ, ಮಕ್ಕಳಂಥವರಿಗೆ ನೀವು ಶ್ರುತಪಡಿಸಿದ್ದೀರಿ; ಇದಕ್ಕಾಗಿ ನಿಮ್ಮನ್ನು ವಂದಿಸುತ್ತೇನೆ. ಹೌದು ಪಿತನೇ, ಇದೇ ನಿಮ್ಮ ಸುಪ್ರೀತ ಸಂಕಲ್ಪ. 22ನನ್ನ ಪಿತ ಸಮಸ್ತವನ್ನೂ ನನ್ನ ವಶಕ್ಕೆ ಒಪ್ಪಿಸಿದ್ದಾರೆ. ಪುತ್ರನು ಯಾರೆಂದು ಪಿತನ ಹೊರತು ಬೇರಾರೂ ಅರಿಯರು. ಪಿತನು ಯಾರೆಂದು ಪುತ್ರನು ಮತ್ತು ಯಾರಿಗೆ ಪುತ್ರನು ಅವರನ್ನು ಶ್ರುತಪಡಿಸಲು ಇಚ್ಛಿಸುತ್ತಾನೋ ಅವನೇ ಹೊರತು ಮತ್ತಾರೂ ಅರಿಯರು,” ಎಂದು ಹೇಳಿದರು. 23ಅನಂತರ ಯೇಸು ಶಿಷ್ಯರ ಕಡೆ ತಿರುಗಿ, ಅವರಿಗೆ ಪ್ರತ್ಯೇಕವಾಗಿ, “ನೀವು ಕಾಣುವುದನ್ನು ಕಾಣುವ ಕಣ್ಣುಗಳು ಭಾಗ್ಯವುಳ್ಳವು. 24ಏಕೆಂದರೆ, ಎಷ್ಟೋ ಪ್ರವಾದಿಗಳು ಹಾಗೂ ಅರಸರು ನೀವು ನೋಡುವುದನ್ನು ನೋಡುವುದಕ್ಕೂ, ನೀವು ಕೇಳುವುದನ್ನು ಕೇಳುವುದಕ್ಕೂ ಆಶಿಸಿದರು. ಆದರೂ ಅದನ್ನು ಅವರು ನೋಡಲೂ ಇಲ್ಲ, ಕಾಣಲೂ ಇಲ್ಲ ಎಂದು ನಿಮಗೆ ಹೇಳುತ್ತೇನೆ,” ಎಂದರು.
ಸದಯ ಸಮಾರಿತನ ಸಾಮತಿ
25ಒಬ್ಬ ಶಾಸ್ತ್ರಜ್ಞನು ಎದ್ದು ಯೇಸುಸ್ವಾಮಿಯನ್ನು ಪರೀಕ್ಷಿಸುವ ಉದ್ದೇಶದಿಂದ “ಬೋಧಕರೇ, ಅಮರಜೀವ ನನಗೆ ಪ್ರಾಪ್ತಿ ಆಗಬೇಕಾದರೆ ನಾನು ಮಾಡಬೇಕಾದುದು ಏನು?” ಎಂದು ಕೇಳಿದನು. 26ಅದಕ್ಕೆ ಯೇಸು, “ಧರ್ಮಶಾಸ್ತ್ರದಲ್ಲಿ ಏನು ಬರೆದಿದೆ? ಹೇಗೆ ಪಠಿಸುತ್ತೀಯೆ?” ಎಂದು ಮರುಪ್ರಶ್ನೆ ಹಾಕಿದರು. 27ಅವನು, “ ‘ನಿನ್ನ ಸರ್ವೇಶ್ವರನಾದ ದೇವರನ್ನು ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣಆತ್ಮದಿಂದಲೂ ನಿನ್ನ ಪೂರ್ಣಶಕ್ತಿಯಿಂದಲೂ ನಿನ್ನ ಪೂರ್ಣ ಮನಸ್ಸಿನಿಂದಲೂ ಪ್ರೀತಿಸು ಮತ್ತು ನಿನ್ನನ್ನು ನೀನೇ ಪ್ರೀತಿಸಿಕೊಳ್ಳುವಂತೆ ನಿನ್ನ ನೆರೆಯವನನ್ನೂ ಪ್ರೀತಿಸು’ ಎಂದಿದೆ,” ಎಂದು ಉತ್ತರಕೊಟ್ಟನು. 28ಯೇಸು, “ಸರಿಯಾಗಿ ಉತ್ತರಕೊಟ್ಟೆ, ಅದರಂತೆ ಮಾಡು. ನಿನಗೆ ಅಮರಜೀವ ಲಭಿಸುವುದು,” ಎಂದರು.
29ಆದರೆ ಆ ಶಾಸ್ತ್ರಜ್ಞನು ತನ್ನನ್ನು ತಾನೇ ಸಮರ್ಥಿಸಿಕೊಳ್ಳಲು, “ನನ್ನ ನೆರೆಯವನು ಯಾರು?” ಎಂದು ಯೇಸುವನ್ನು ಮತ್ತೆ ಪ್ರಶ್ನಿಸಿದನು. 30ಆಗ ಯೇಸು ಅವನಿಗೆ ಹೀಗೆಂದು ವಿವರಿಸಿದರು:
“ಒಬ್ಬನು ಜೆರುಸಲೇಮಿನಿಂದ ಇಳಿದು ಜೆರಿಕೋವಿಗೆ ಪ್ರಯಾಣ ಮಾಡುತ್ತಿದ್ದಾಗ, ದರೋಡೆಗಾರರ ಕೈಗೆ ಸಿಕ್ಕಿಬಿದ್ದ. ದರೋಡೆಗಾರರು ಅವನನ್ನು ಸುಲಿಗೆಮಾಡಿ, ಹೊಡೆದು ಬಡಿದು, ಅರೆಜೀವ ಮಾಡಿ ಅಲ್ಲೇ ಬಿಟ್ಟುಹೋದರು. 31ಅದೇ ಮಾರ್ಗವಾಗಿ ಒಬ್ಬ ಯಾಜಕನು ಹಾದುಹೋಗಬೇಕಾಗಿ ಬಂದಿತು. ಈತನು, ಅವನನ್ನು ಕಂಡದ್ದೇ ಆಚೆ ಬಳಸಿಕೊಂಡು ಹೋದ. 32ಹಾಗೆಯೇ ಲೇವಿಯೊಬ್ಬನು#10:32 ಧಾರ್ಮಿಕ ವಿಧಿಗಳನ್ನು ನೆರವೇರಿಸುವುದರಲ್ಲಿ ಯಾಜಕನಿಗೆ ಸಹಾಯಕ. ಆ ಸ್ಥಳಕ್ಕೆ ಬಂದು ಅವನನ್ನು ನೋಡಿ, ಹಾಗೆಯೇ ಬಳಸಿಕೊಂಡು ಹೋದ. 33ಆದರೆ ಆ ಮಾರ್ಗವಾಗಿ ಪ್ರಯಾಣ ಮಾಡುತ್ತಿದ್ದ ಒಬ್ಬ ಸಮಾರಿಯದವನು ಅಲ್ಲಿಗೆ ಬಂದಾಗ, ಅವನನ್ನು ಕಂಡು ಕನಿಕರಪಟ್ಟು, 34ಹತ್ತಿರಕ್ಕೆ ಹೋಗಿ ಅವನ ಗಾಯಗಳಿಗೆ ಎಣ್ಣೆಯನ್ನೂ ದ್ರಾಕ್ಷಾರಸವನ್ನೂ ಹಚ್ಚಿ ಅವುಗಳಿಗೆ ಬಟ್ಟೆ ಕಟ್ಟಿದ. ಬಳಿಕ ಅವನನ್ನು ತನ್ನ ಸ್ವಂತ ವಾಹಕಪಶುವಿನ ಮೇಲೆ ಹತ್ತಿಸಿಕೊಂಡು ಒಂದು ಛತ್ರಕ್ಕೆ ಕರೆದುಕೊಂಡು ಹೋಗಿ, ಆರೈಕೆ ಮಾಡಿದ. 35ಮಾರನೆಯ ದಿನ ಎರಡು ದಿನಾರಿ ನಾಣ್ಯಗಳನ್ನು ಛತ್ರದವನಿಗೆ ಕೊಟ್ಟು, ‘ಇವನನ್ನು ಚೆನ್ನಾಗಿ ನೋಡಿಕೊ, ಇದಕ್ಕಿಂತ ಹೆಚ್ಚು ವೆಚ್ಚ ಆದರೆ ನಾನು ಹಿಂದಿರುಗಿ ಬರುವಾಗ ಸಲ್ಲಿಸುತ್ತೇನೆ,’ ಎಂದ.
36“ದರೋಡೆಗಾರರ ಕೈಗೆ ಸಿಕ್ಕಿದವನಿಗೆ ಈ ಮೂವರಲ್ಲಿ ಯಾರು ನೆರೆಯವನೆಂದು ನಿನಗೆ ತೋರುತ್ತದೆ?” ಎಂದು ಯೇಸು ಆ ಶಾಸ್ತ್ರಜ್ಞನನ್ನು ಕೇಳಿದರು. 37ಅದಕ್ಕೆ ಅವನು, “ದಯೆತೋರಿದವನೇ ನೆರೆಯವನು,” ಎಂದನು. ಆಗ ಯೇಸು, “ಹೋಗು, ನೀನೂ ಹಾಗೆಯೇ ಮಾಡು,” ಎಂದು ಹೇಳಿದರು.
ಸೇವಾಸಕ್ತ ಮಾರ್ತಳು - ಧ್ಯಾನಾಸಕ್ತ ಮರಿಯಳು
38ಯೇಸುಸ್ವಾಮಿ ತಮ್ಮ ಶಿಷ್ಯರೊಡನೆ ಪ್ರಯಾಣ ಮುಂದುವರಿಸಿ ಒಂದು ಹಳ್ಳಿಗೆ ಬಂದರು. ಅಲ್ಲಿ ಮಾರ್ತಳೆಂಬ ಮಹಿಳೆ ಅವರನ್ನು ತಮ್ಮ ಮನೆಗೆ ಆಮಂತ್ರಿಸಿದಳು. 39ಆಕೆಗೆ ಮರಿಯಳೆಂಬ ಸೋದರಿ ಇದ್ದಳು. ಈಕೆ ಪ್ರಭುವಿನ ಪಾದತಳದಲ್ಲಿ ಕುಳಿತುಕೊಂಡು ಅವರ ಬೋಧನೆಯನ್ನು ಆಲಿಸುತ್ತಿದ್ದಳು. 40ಮಾರ್ತಳಾದರೋ, ಅತಿಥಿಸತ್ಕಾರದ ಗಡಿಬಿಡಿಯಲ್ಲಿ ಇದ್ದಳು. ಅವಳು ಬಂದು, “ಪ್ರಭೂ, ನನ್ನ ಸೋದರಿ ಈ ಕೆಲಸವನ್ನೆಲ್ಲಾ ನನ್ನೊಬ್ಬಳಿಗೇ ಬಿಟ್ಟಿದ್ದಾಳೆ. ನೀವಿದನ್ನು ಗಮನಿಸಬಾರದೇ? ನನಗೆ ಸಹಾಯ ಮಾಡುವಂತೆ ಅವಳಿಗೆ ಹೇಳಿ,” ಎಂದಳು. 41ಯೇಸು ಆಕೆಗೆ ಪ್ರತ್ಯುತ್ತರವಾಗಿ, “ಮಾರ್ತಾ, ಮಾರ್ತಾ, ನೀನು ಅನಾವಶ್ಯ ಚಿಂತೆ ಪೇಚಾಟಗಳಿಗೆ ಒಳಗಾಗಿರುವೆ. 42ಆದರೆ ಅಗತ್ಯವಾದುದು ಒಂದೇ. ಮರಿಯಳು ಉತ್ತಮವಾದುದನ್ನೇ ಆರಿಸಿಕೊಂಡಿದ್ದಾಳೆ. ಅದನ್ನು ಆಕೆಯಿಂದ ಕಸಿದುಕೊಳ್ಳಲಾಗದು,” ಎಂದರು.
S'ha seleccionat:
ಲೂಕ. 10: KANCLBSI
Subratllat
Comparteix
Copia
Vols que els teus subratllats es desin a tots els teus dispositius? Registra't o inicia sessió
Kannada C.L. Bible - ಸತ್ಯವೇದವು C.L.
Copyright © 2016 by The Bible Society of India
Used by permission. All rights reserved worldwide.

: