ಲೂಕ. 7:21-22

ಲೂಕ. 7:21-22 KANCLBSI

ಅದೇ ಸಮಯದಲ್ಲಿ ಯೇಸು ರೋಗರುಜಿನಗಳಿಂದ ನರಳುತ್ತಿದ್ದ ಹಾಗೂ ದೆವ್ವ ಹಿಡಿದಿದ್ದ ಅನೇಕರನ್ನು ಗುಣಪಡಿಸುತ್ತಿದ್ದರು ಮತ್ತು ಹಲವುಮಂದಿ ಕುರುಡರಿಗೆ ದೃಷ್ಟಿಯನ್ನು ದಯಪಾಲಿಸುತ್ತಿದ್ದರು. ಯೇಸು ಅವರಿಗೆ ಪ್ರತ್ಯುತ್ತರವಾಗಿ, “ನೀವು ಕಂಡದ್ದನ್ನೂ ಕೇಳಿದ್ದನ್ನೂ ಯೊವಾನ್ನನಿಗೆ ಹೋಗಿ ತಿಳಿಸಿರಿ: ಕುರುಡರು ನೋಡುತ್ತಾರೆ, ಕುಂಟರು ನಡೆಯುತ್ತಾರೆ, ಕುಷ್ಠರೋಗಿಗಳು ಸ್ವಸ್ಥರಾಗುತ್ತಾರೆ, ಕಿವುಡರು ಕೇಳುತ್ತಾರೆ, ಸತ್ತವರು ಮತ್ತೆ ಜೀವ ಪಡೆಯುತ್ತಾರೆ. ದೀನದಲಿತರಿಗೆ ಶುಭಸಂದೇಶವನ್ನು ಪ್ರಕಟಿಸಲಾಗುತ್ತಿದೆ.