14
1 “ನಿಮ್ಮ ಹೃದಯವು ಕಳವಳಗೊಳ್ಳದಿರಲಿ. ನೀವು ದೇವರನ್ನು ನಂಬಿರಿ, ನನ್ನನ್ನೂ ನಂಬಿರಿ. 2ನನ್ನ ತಂದೆಯ ಮನೆಯಲ್ಲಿ ಅನೇಕ ವಾಸಸ್ಥಾನಗಳಿವೆ, ಇಲ್ಲದಿದ್ದರೆ ನಾನು ನಿಮಗೆ ಹೇಳುತ್ತಿದ್ದೆನು. ನಾನು ನಿಮಗಾಗಿ ಸ್ಥಳವನ್ನು ಸಿದ್ಧಮಾಡುವುದಕ್ಕೆ ಹೋಗುತ್ತೇನಲ್ಲಾ! 3ನಾನು ಹೋಗಿ ನಿಮಗಾಗಿ ಸ್ಥಳವನ್ನು ಸಿದ್ಧಪಡಿಸಿದ ಮೇಲೆ, ಪುನಃ ಬಂದು ನಿಮ್ಮನ್ನು #14:3 ಯೋಹಾ 12:26; 17:24; ಅ. ಕೃ. 1:11; 1 ಥೆಸ. 4:15,16:ನನ್ನ ಬಳಿಗೆ ಸೇರಿಸಿಕೊಳ್ಳುವೆನು. ಏಕೆಂದರೆ, ನಾನಿರುವಲ್ಲಿ ನೀವು ಸಹ ಇರಬೇಕು. 4ನಾನು ಹೋಗುವ ಸ್ಥಳದ ಮಾರ್ಗವು ನಿಮಗೆ ತಿಳಿದಿದೆ” ಎಂದನು.
5ತೋಮನು ಆತನಿಗೆ, “ಕರ್ತನೇ, ನೀನು ಎಲ್ಲಿಗೆ ಹೋಗುತ್ತೀ ಎಂಬುದೇ ನಮಗೆ ತಿಳಿಯದು, ಮತ್ತೆ ಮಾರ್ಗವು ಹೇಗೆ ತಿಳಿದೀತು?” ಎಂದು ಕೇಳಲು, 6ಯೇಸು ಅವನಿಗೆ, “ನಾನೇ ಮಾರ್ಗವೂ, ಸತ್ಯವೂ ಮತ್ತು #14:6 ಯೋಹಾ 11:25:ಜೀವವೂ ಆಗಿದ್ದೇನೆ. ನನ್ನ ಮೂಲಕವಲ್ಲದೆ ಯಾರೂ ತಂದೆಯ ಬಳಿಗೆ ಬರಲಾರರು. 7#14:7 ಯೋಹಾ 8:19ನೀವು ನನ್ನನ್ನು ತಿಳಿದಿದ್ದರೆ ನನ್ನ ತಂದೆಯನ್ನೂ ಸಹ ತಿಳಿಯುತ್ತಿದ್ದಿರಿ. ಈಗಿನಿಂದ ನೀವು ಆತನನ್ನು ತಿಳಿದಿದ್ದೀರಿ ಮತ್ತು ಆತನನ್ನು ನೋಡಿದ್ದೀರಿ” ಎಂದು ಹೇಳಿದನು.
8ಫಿಲಿಪ್ಪನು, “ಕರ್ತನೇ, ನಮಗೆ ತಂದೆಯನ್ನು ತೋರಿಸು ನಮಗೆ ಅಷ್ಟೇ ಸಾಕು” ಎಂದನು. 9ಯೇಸು ಅವನಿಗೆ, “ಫಿಲಿಪ್ಪನೇ, ನಾನು ಇಷ್ಟು ಕಾಲ ನಿಮ್ಮ ಜೊತೆಯಲ್ಲಿಯೇ ಇದ್ದರೂ ಇನ್ನೂ ನೀನು ನನ್ನನ್ನು ತಿಳಿಯಲಿಲ್ಲವೇ! ನನ್ನನ್ನು ನೋಡಿದವನು ತಂದೆಯನ್ನು ನೋಡಿದ್ದಾನೆ, ಮತ್ತು ನಮಗೆ ತಂದೆಯನ್ನು ತೋರಿಸು ಎಂದು ನೀನು ಹೇಳುವುದಾದರು ಹೇಗೆ? 10ನಾನು ತಂದೆಯಲ್ಲಿ ಇದ್ದೇನೆ ಮತ್ತು ತಂದೆಯು ನನ್ನಲ್ಲಿ ಇದ್ದಾನೆ ಎಂಬುದನ್ನು ನೀನು ನಂಬುವುದಿಲ್ಲವೋ? ನಾನು ನಿಮಗೆ ಹೇಳುವ ಮಾತುಗಳನ್ನು ನನ್ನಷ್ಟಕ್ಕೆ ನಾನೇ ಆಡುವುದಿಲ್ಲ; ತಂದೆಯು ನನ್ನಲ್ಲಿ ಇದ್ದುಕೊಂಡು ತನ್ನ ಕಾರ್ಯಗಳನ್ನು ಮಾಡುತ್ತಾನೆ. 11ನಾನು ತಂದೆಯಲ್ಲಿಯೂ, ತಂದೆಯು ನನ್ನಲ್ಲಿಯೂ ಇದ್ದಾನೆಂದು ತಿಳಿದು ನೀವು ನನ್ನನ್ನು ನಂಬಿರಿ. #14:11 ಯೋಹಾ 5:36:ಇಲ್ಲವೇ ನಾನು ಮಾಡಿದ ಕಾರ್ಯಗಳ ನಿಮಿತ್ತದಿಂದಾದರೂ ನೀವು ನನ್ನನ್ನು ನಂಬಿರಿ.
12 “ನಿಮಗೆ ನಿಜನಿಜವಾಗಿ ಹೇಳುತ್ತೇನೆ. ನನ್ನನ್ನು ನಂಬುವವನು ನಾನು ಮಾಡುವ ಕಾರ್ಯಗಳನ್ನು ತಾನು ಸಹ ಮಾಡುತ್ತಾನೆ; #14:12 ಮತ್ತಾ 17:20; 21:21; ಮಾರ್ಕ 11:23:ಮತ್ತು ಇವುಗಳಿಗಿಂತ ಮಹತ್ತಾದ ಕ್ರಿಯೆಗಳನ್ನು ಮಾಡುವನು, ಏಕೆಂದರೆ ನಾನು ತಂದೆಯ ಬಳಿಗೆ ಹೋಗುತ್ತೇನೆ. 13#14:13 ಯೋಹಾ 15:16; 16:23,24:ಇದಲ್ಲದೆ ನೀವು ನನ್ನ ಹೆಸರಿನಲ್ಲಿ ಏನೇನು ಬೇಡಿಕೊಳ್ಳುವಿರೋ ಅದನ್ನು ನಾನು ನೆರವೇರಿಸುವೆನು. ಹೀಗೆ ಮಗನ ಮೂಲಕವಾಗಿ ತಂದೆಗೆ ಮಹಿಮೆ ಉಂಟಾಗುವುದು. 14ನೀವು ನನ್ನ ಹೆಸರಿನಲ್ಲಿ ನನ್ನನ್ನು ಏನಾದರೂ ಬೇಡಿಕೊಂಡರೆ ನಾನು ಅದನ್ನು ನೆರವೇರಿಸುವೆನು.
15 “ನೀವು ನನ್ನನ್ನು ಪ್ರೀತಿಸುವವರಾದರೆ ನನ್ನ ಆಜ್ಞೆಗಳನ್ನು ಕೈಕೊಂಡು ನಡೆಯುವಿರಿ. 16ಆಗ ನಾನು ತಂದೆಯನ್ನು ಕೇಳಿಕೊಳ್ಳುವೆನು, ಆತನು ನಿಮಗೆ ಬೇರೊಬ್ಬ ಸಹಾಯಕನನ್ನು ಸದಾಕಾಲವೂ ನಿಮ್ಮೊಂದಿಗೆ ಇರುವುದಕ್ಕೆ ಕಳುಹಿಸಿ ಕೊಡುವನು. 17ಆ ಸಹಾಯಕನು ಯಾರೆಂದರೆ #14:17 ಯೋಹಾ 14:25; 15:26; 16:7:ಸತ್ಯದ ಆತ್ಮನೇ. ಲೋಕವು ಆತನನ್ನು ನೋಡದೆಯೂ, ತಿಳಿಯದೆಯೂ ಇರುವುದರಿಂದ ಆತನನ್ನು ಸ್ವೀಕರಿಸಲಾರದು. ನೀವು ಆತನನ್ನು ಬಲ್ಲಿರಿ, ಹೇಗೆಂದರೆ ಆತನು ನಿಮ್ಮೊಂದಿಗೆ ವಾಸಮಾಡುತ್ತಾನೆ ಮತ್ತು ನಿಮ್ಮೊಳಗೆ ಇರುವನು.
18 “ನಾನು ನಿಮ್ಮನ್ನು ಅನಾಥರನ್ನಾಗಿ ಬಿಡುವುದಿಲ್ಲ, ನಿಮ್ಮ ಬಳಿಗೆ ಬರುತ್ತೇನೆ. 19ಇನ್ನು ಸ್ವಲ್ಪ ಕಾಲವಾದ ಮೇಲೆ ಲೋಕವು ನನ್ನನ್ನು ನೋಡುವುದಿಲ್ಲ, ಆದರೆ ನೀವು ನನ್ನನ್ನು ನೋಡುವಿರಿ. ನಾನು ಜೀವಿಸುವುದರಿಂದ ನೀವು ಜೀವಿಸುವಿರಿ. 20ನಾನು ನನ್ನ ತಂದೆಯಲ್ಲಿಯೂ, ನೀವು ನನ್ನಲ್ಲಿಯೂ ಮತ್ತು ನಾನು ನಿಮ್ಮಲ್ಲಿಯೂ ಇರುವುದನ್ನು ನೀವು ಆ ದಿನದಲ್ಲಿ ತಿಳಿದುಕೊಳ್ಳುವಿರಿ. 21ನನ್ನ ಆಜ್ಞೆಗಳನ್ನು ಹೊಂದಿ ಅವುಗಳನ್ನು ಕೈಕೊಂಡು ನಡೆಯುವವನೇ ನನ್ನನ್ನು ಪ್ರೀತಿಸುವವನು. ನನ್ನನ್ನು ಪ್ರೀತಿಸುವವನು ನನ್ನ ತಂದೆಗೆ ಪ್ರಿಯನಾಗಿರುವನು. ನಾನೂ ಅವನನ್ನು ಪ್ರೀತಿಸಿ ಅವನಿಗೆ ನನ್ನನ್ನು ಪ್ರಕಟಪಡಿಸಿ ತೋರಿಸುವೆನು” ಎಂದು ಹೇಳಿದನು.
22ಯೂದನು, (ಇವನು ಇಸ್ಕರಿಯೋತನಲ್ಲ) “ಕರ್ತನೇ, ನೀನು ಲೋಕಕ್ಕೆ ಕಾಣಿಸಿಕೊಳ್ಳದೆ ನಮಗೆ ಮಾತ್ರ ಕಾಣಿಸಿಕೊಳ್ಳುವುದಕ್ಕೆ ಕಾರಣವೇನು?” ಎಂದು ಕೇಳಿದನು. 23ಯೇಸು ಅವನಿಗೆ, “ಯಾವನಾದರೂ ನನ್ನನ್ನು ಪ್ರೀತಿಸುವುದಾದರೆ ನನ್ನ ಮಾತಿನಂತೆ ನಡೆಯುವನು. ಅವನನ್ನು ನನ್ನ ತಂದೆಯು ಪ್ರೀತಿಸುವನು ಮತ್ತು ನಾವಿಬ್ಬರೂ ಅವನ ಬಳಿಗೆ ಬಂದು, ಅವನೊಂದಿಗೆ ನೆಲೆಸುವೆವು. 24ನನ್ನನ್ನು ಪ್ರೀತಿಸದವನು, ನನ್ನ ಮಾತುಗಳನ್ನು ಕೈಕೊಂಡು ನಡೆಯುವುದಿಲ್ಲ. ನೀವು ಕೇಳಿದ ಮಾತು ನನ್ನದಲ್ಲ. ನನ್ನನ್ನು ಕಳುಹಿಸಿದ ತಂದೆಯದೇ ಆಗಿದೆ.
25 “ಈ ಮಾತುಗಳನ್ನು ನಾನು ಇನ್ನೂ ನಿಮ್ಮ ಬಳಿಯಲ್ಲಿರುವಾಗಲೇ ಹೇಳಿದ್ದೇನೆ. 26ಆದರೆ ಆ ಸಹಾಯಕನು, ಅಂದರೆ ನನ್ನ ಹೆಸರಿನಲ್ಲಿ ತಂದೆಯು ಕಳುಹಿಸಿಕೊಡುವ ಪವಿತ್ರಾತ್ಮನೇ ನಿಮಗೆ ಎಲ್ಲವನ್ನು ಉಪದೇಶಿಸಿ ನಾನು ನಿಮಗೆ ಹೇಳಿದ್ದನೆಲ್ಲಾ ನಿಮ್ಮ ನೆನಪಿಗೆ ತಂದುಕೊಡುವನು.
27 “ನಾನು ನನ್ನ #14:27 ಯೋಹಾ 16:33; 20:19,21,26; ಲೂಕ 24:36ಸಮಾಧಾನವನ್ನು ನಿಮಗೆ ಕೊಟ್ಟು ಹೋಗುತ್ತಿದ್ದೇನೆ. ನನ್ನಲ್ಲಿರುವಂಥ ಸಮಾಧಾನವನ್ನು ನಾನು ನಿಮಗೆ ಕೊಡುತ್ತೇನೆ. ಲೋಕವು ಕೊಡುವಂತೆ ನಾನು ನಿಮಗೆ ಕೊಡುವುದಿಲ್ಲ. ನಿಮ್ಮ ಹೃದಯವು ಕಳವಳಗೊಳ್ಳದಿರಲಿ, ಹೆದರದಿರಲಿ. 28ನಾನು ಹೋಗಿ ಪುನಃ ನಿಮ್ಮ ಬಳಿಗೆ ಬರುತ್ತೇನೆ ಎಂದು ನಿಮಗೆ ಹೇಳಿದ್ದನ್ನು ಕೇಳಿದ್ದೀರಿ. ನೀವು ನನ್ನನ್ನು ಪ್ರೀತಿಸುವವರಾಗಿದ್ದರೆ ನಾನು ತಂದೆಯ ಬಳಿಗೆ ಹೋಗುತ್ತೇನೆಂದು ಹೇಳಿದ್ದಕ್ಕೆ ಸಂತೋಷಪಡುತ್ತಿದ್ದೀರಿ, ಏಕೆಂದರೆ ತಂದೆಯು ನನಗಿಂತಲೂ ದೊಡ್ಡವನು. 29ಇದೆಲ್ಲಾ ನಡೆಯುವಾಗ ನೀವು ನನ್ನನ್ನು ನಂಬುವಂತೆ, ಅದು ನಡೆಯುವುದಕ್ಕಿಂತ ಮೊದಲೇ ನಿಮಗೆ ತಿಳಿಸಿದ್ದೇನೆ. 30ಇನ್ನು ಮೇಲೆ ನಾನು ನಿಮ್ಮ ಜೊತೆ ಹೆಚ್ಚು ವಿಷಯಗಳನ್ನು ಮಾತನಾಡುವುದಿಲ್ಲ. ಏಕೆಂದರೆ #14:30 ಯೋಹಾ 12:31; 16:11; ಎಫೆ 2:2:ಇಹಲೋಕಾಧಿಪತಿಯು ಬರಲಿದ್ದಾನೆ. ನನ್ನ ಮೇಲೆ ಅವನಿಗೆ ಯಾವ ಅಧಿಕಾರವೂ ಇಲ್ಲ. 31ಆದರೂ ನಾನು ತಂದೆಯನ್ನು ಪ್ರೀತಿಸುತ್ತೇನೆಂದು ಲೋಕಕ್ಕೆ ತಿಳಿಯಬೇಕೆಂದು ತಂದೆ ನನಗೆ ಆಜ್ಞಾಪಿಸಿದಂತೆಯೇ ನಾನು ಮಾಡುತ್ತೇನೆ. ಏಳಿರಿ, ನಾವು ಇಲ್ಲಿಂದ ಹೋಗೋಣ” ಎಂದನು.