ಲೂಕ 21:25-27

ಲೂಕ 21:25-27 IRVKAN

“ಇದಲ್ಲದೆ ಸೂರ್ಯ ಚಂದ್ರ ನಕ್ಷತ್ರಗಳಲ್ಲಿ ಸೂಚನೆಗಳು ತೋರುವವು. ಭೋರ್ಗರೆಯುವ ಸಮುದ್ರ ಮತ್ತು ಅಲೆಗಳ ಘೋಷದ ನಿಮಿತ್ತವಾಗಿ ಭೂಮಿಯ ಮೇಲೆ ಜನಗಳಿಗೆ ದಿಕ್ಕುಕಾಣದೆ ಸಂಕಟವು ಉಂಟಾಗುವುದು. ಆಕಾಶದ ಶಕ್ತಿಗಳು ಕದಲುವುದರಿಂದ ಮನುಷ್ಯರು ಭಯಹಿಡಿದವರಾಗಿ ಲೋಕಕ್ಕೆ ಏನು ಬರುವುದೋ ಎಂದು ಎದುರು ನೋಡುತ್ತಾ ಪ್ರಾಣಹೋದಂತಾಗುವರು. ಆಗ ಮನುಷ್ಯಕುಮಾರನು ಬಲದಿಂದಲೂ ಬಹು ಮಹಿಮೆಯಿಂದಲೂ ಮೇಘದಲ್ಲಿ ಬರುವುದನ್ನು ಕಾಣುವರು.