ಆದಿಕಾಂಡ 20:6-7

ಆದಿಕಾಂಡ 20:6-7 KSB

ಅದಕ್ಕೆ ದೇವರು ಕನಸಿನಲ್ಲಿ ಅವನಿಗೆ, “ಹೌದು, ನೀನು ಇದನ್ನು ಯಥಾರ್ಥವಾದ ಹೃದಯದಿಂದಲೇ ಮಾಡಿದ್ದೀಯೆ ಎಂದು ನನಗೂ ತಿಳಿದಿದೆ. ಆದ್ದರಿಂದ ನೀನು ನನಗೆ ವಿರೋಧವಾಗಿ ಪಾಪಮಾಡದಂತೆ ನಾನು ನಿನ್ನನ್ನು ತಡೆದು, ಆಕೆಯನ್ನು ಮುಟ್ಟಗೊಡಿಸಲಿಲ್ಲ. ಈಗ ಆ ಮನುಷ್ಯನ ಹೆಂಡತಿಯನ್ನು ನೀನು ಹಿಂದಕ್ಕೆ ಕಳುಹಿಸಿಬಿಡು. ಏಕೆಂದರೆ ಅವನು ಪ್ರವಾದಿಯಾಗಿದ್ದಾನೆ. ನೀನು ಬದುಕುವಂತೆ ಅವನು ನಿನಗೋಸ್ಕರ ಪ್ರಾರ್ಥಿಸುವನು. ನೀನು ಆಕೆಯನ್ನು ಹಿಂದಕ್ಕೆ ಕಳುಹಿಸದಿದ್ದರೆ, ನೀನೂ ನಿನ್ನವರೆಲ್ಲರೂ ಖಂಡಿತವಾಗಿ ಸಾಯುವಿರಿ ಎಂದು ತಿಳಿದುಕೋ,” ಎಂದರು.