ಆದಿಕಾಂಡ 22:17-18

ಆದಿಕಾಂಡ 22:17-18 KSB

ನಿಶ್ಚಯವಾಗಿ ನಾನು ನಿನ್ನನ್ನು ಆಶೀರ್ವದಿಸೇ ಆಶೀರ್ವದಿಸುವೆನು. ನಿನ್ನ ಸಂತಾನವನ್ನು ಆಕಾಶದ ನಕ್ಷತ್ರಗಳ ಹಾಗೆಯೂ ಸಮುದ್ರದ ತೀರದಲ್ಲಿರುವ ಮರಳಿನ ಹಾಗೆಯೂ ಹೆಚ್ಚಿಸುವೆನು. ನಿನ್ನ ಸಂತಾನದವರು ತಮ್ಮ ಶತ್ರುಗಳ ಪಟ್ಟಣಗಳನ್ನು ವಶಪಡಿಸಿಕೊಳ್ಳುವರು. ನೀನು ನನಗೆ ವಿಧೇಯನಾದದ್ದರಿಂದ, ನಿನ್ನ ಸಂತತಿಯ ಮೂಲಕ ಭೂಲೋಕದ ಎಲ್ಲಾ ಜನಾಂಗಗಳಿಗೂ ಆಶೀರ್ವಾದ ಉಂಟಾಗುವುದು,” ಎಂದರು.